ಢಾಕಾ: ಭಾರತ ಮತ್ತು ಬಾಂಗ್ಲಾದೇಶ(IND VS BAN) ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಸೋತು ಟೀಮ್ ಇಂಡಿಯಾ ಬ್ಯಾಟಿಂಗ್ ನಡೆಸುತ್ತಿದೆ. ಆದರೆ ಪಂದ್ಯ ಆರಂಭಕ್ಕೂ ಮುನ್ನ ಅಚ್ಚರಿ ಎಂಬಂತೆ ರಿಷಭ್ ಪಂತ್ ಈ ಪಂದ್ಯದಿಂದ ಮಾತ್ರವಲ್ಲದೆ ಏಕದಿನ ಸರಣಿಯಿಂದಲೇ ಹೊರಬಿದ್ದಿದ್ದಾರೆ.
ಈ ಬಗ್ಗೆ ಬಿಸಿಸಿಐ ಅಧಿಕೃತವಾಗಿ ತನ್ನ ಟ್ವಿಟರ್ ಖಾತೆಯಲ್ಲಿ ಹೇಳಿಕೆ ನೀಡಿದ್ದು, ಬಿಸಿಸಿಐ ವೈದ್ಯಕೀಯ ತಂಡದೊಂದಿಗೆ ಸಮಾಲೋಚನೆ ನಡೆಸಿ ರಿಷಬ್ ಪಂತ್ ಅವರನ್ನು ಏಕದಿನ ತಂಡದಿಂದ ಬಿಡುಗಡೆ ಮಾಡಲಾಗಿದೆ. ಅವರು ಟೆಸ್ಟ್ ಸರಣಿ ಆರಂಭದ ವೇಳೆ ತಂಡ ಸೇರಿಕೊಳ್ಳಲಿದ್ದಾರೆ ಎಂದು ಪ್ರಕಟಿಸಿದೆ.
ಏಕದಿನ ಸರಣಿಯಿಂದ ಕೈಬಿಟ್ಟ ರಿಷಭ್ ಪಂತ್ ಸ್ಥಾನಕ್ಕೆ ಯಾವುದೇ ಬದಲಿ ಆಟಗಾರನನ್ನು ಆಯ್ಕೆ ಮಾಡುವುದಿಲ್ಲ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ. ರಿಷಭ್ ಪಂತ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅದರಂತೆ ಅಕ್ಷರ್ ಪಟೇಲ್ ಕೂಡ ಮೊದಲ ಏಕದಿನದಲ್ಲಿ ಕಣಕ್ಕಿಳಿಯುತ್ತಿಲ್ಲ ಎಂದು ಬಿಸಿಸಿಐ ಹೇಳಿದೆ.
ಇದನ್ನೂ ಓದಿ | IND VS BANGLA | ಟಾಸ್ ಸೋತು ಬ್ಯಾಟಿಂಗ್ ಆಹ್ವಾನ ಪಡೆದ ಟೀಮ್ ಇಂಡಿಯಾ