Site icon Vistara News

IND VS BANGLA | ಭಾರತ ಮತ್ತು ಬಾಂಗ್ಲಾ ನಡುವಿನ ಏಕ ದಿನ ಪಂದ್ಯದ ಪಿಚ್​ ರಿಪೋರ್ಟ್ ಹೇಗಿದೆ?

Bangladesh vs India, 1st ODI

ಢಾಕಾ: ಭಾರತ ಮತ್ತು ಬಾಂಗ್ಲಾದೇಶ ಭಾನುವಾರ ಮೊದಲ ಏಕದಿನ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಈ ಪಂದ್ಯದ ಪಿಚ್​ ರಿಪೋರ್ಟ್​ ಮತ್ತು ಉಭಯ ತಂಡಗಳ ಸಂಭಾವ್ಯ ಆಡುವ ಬಳಗದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

ಶೇರ್‌ ‘ಎ’ ಬಾಂಗ್ಲಾ ಕ್ರೀಡಾಂಗಣದ ಪಿಚ್ ಬ್ಯಾಟಿಂಗ್‌ಗೆ ಹೆಚ್ಚು ಅನುಕೂಲಕರವಾಗಿರಲಿದೆ. ಇಲ್ಲಿ ಕಳೆದ ಮೂರು ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ತಂಡ ಸರಾಸರಿ 250ರ ಗಟಿದಾಟುವಲ್ಲಿ ಯಶಸ್ಸು ಕಂಡಿದೆ. ಆದರೆ ಆರಂಭದಲ್ಲಿ ಈ ಪಿಚ್​ ವೇಗಿಗಳಿಗೆ ನೆರವು ನೀಡುವ ನಿರೀಕ್ಷೆಯಿದೆ. ಆದ್ದರಿಂದ ಆರಂಭಿಕ ಎಚ್ಚರಿಕೆಯ ಆಟವಾಡುವುದು ಅತ್ಯಗತ್ಯ. ಕಳೆದ ಮೂರು ಪಂದ್ಯಗಳಲ್ಲಿ ಏಳು ವಿಕೆಟ್‌ಗಳು ಪವರ್‌ಪ್ಲೇಯಲ್ಲಿ ಬಿದ್ದಿರುವುದು ಇದಕ್ಕೆ ಸಾಕ್ಷಿ. ಸಾರಸ್ಯವೆಂದರೆ ಕಳೆದ ಮೂರು ಪಂದ್ಯಗಳಲ್ಲಿಯೂ ಮೊದಲು ಬ್ಯಾಟಿಂಗ್ ನಡೆಸಿದ ತಂಡವೇ ಗೆಲುವು ಸಾಧಿಸಿದೆ. ಆದ್ದರಿಂದ ಟಾಸ್​ ಗೆದ್ದ ತಂಡ ಮೊದಲು ಬ್ಯಾಟಿಂಗ್​ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

ಸಂಭಾವ್ಯ ತಂಡಗಳು

ಭಾರತ
ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್. ರಾಹುಲ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಉಮ್ರಾನ್​ ಮಲಿಕ್​ ದೀಪಕ್ ಚಾಹರ್, ಮೊಹಮ್ಮದ್ ಸಿರಾಜ್.

ಬಾಂಗ್ಲಾದೇಶ
ನಜ್ಮುಲ್ ಹೊಸೈನ್ ಶಾಂಟೊ, ಲಿಟನ್​ ದಾಸ್ (ನಾಯಕ), ಶಕಿಬ್ ಅಲ್ ಹಸನ್, ಮುಷ್ಫಿಕರ್ ರಹೀಮ್, ಮಹಮ್ಮದುಲ್ಲಾ ರಿಯಾದ್, ಅಫೀಫ್ ಹುಸೈನ್, ನೂರುಲ್ ಹಸನ್ (ವಿಕೆಟ್ ಕೀಪರ್), ಮೆಹಿದಿ ಹಸನ್ ಮಿರಾಜ್, ಮುಸ್ತಫಿಜುರ್ ರೆಹಮಾನ್, ಎಬಾಡೋತ್ ಹೊಸೈನ್, ಹಸನ್ ಮಹಮೂದ್/ನಸುಮ್ ಅಹ್ಮದ್.

ಪಂದ್ಯ ಆರಂಭ: ಬೆಳಗ್ಗೆ 11:30ಕ್ಕೆ

ಪ್ರಸಾರ: ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌.

ಇದನ್ನೂ ಓದಿ | IND VS BANGLA | ಬಾಂಗ್ಲಾ ಹುಲಿಗಳನ್ನು ಬೇಟೆಯಾಡಲು ಸಜ್ಜಾದ ರೋಹಿತ್‌ ಪಡೆ

Exit mobile version