Site icon Vistara News

IND VS BANGLA | ಬಾಂಗ್ಲಾ ಸರಣಿಗೆ ಭಾರತ ತಂಡ ಪ್ರಕಟ; ರವೀಂದ್ರ ಜಡೇಜಾ ಅಲಭ್ಯ

IND VS BANGLA

ನವದೆಹಲಿ: ಮುಂದಿನ ತಿಂಗಳು ನಡೆಯಲಿರುವ ಬಾಂಗ್ಲಾದೇಶ ವಿರುದ್ಧದ ಏಕದಿನ ಕ್ರಿಕೆಟ್ ಸರಣಿಗೆ ಬಿಸಿಸಿಐ ತಂಡ ಪ್ರಕಟಿಸಿದ್ದು ಆಲ್​ರೌಂಡರ್​ ರವೀಂದ್ರ ಜಡೇಜಾ ಅವರನ್ನು ತಂಡದಿಂದ ಕೈಬಿಡಲಾಗಿದೆ.

ಆಲ್‌ರೌಂಡರ್ ಜಡೇಜ ಅವರಿಗೆ ಕೆಲವು ತಿಂಗಳುಗಳ ಹಿಂದೆ ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಅವರಿನ್ನೂ ಪೂರ್ಣಪ್ರಮಾಣದಲ್ಲಿ ಚೇತರಿಸಿಕೊಂಡಿಲ್ಲ. ಆದ್ದರಿಂದ ಅವರನ್ನು ಆಯ್ಕೆ ಪರಿಗಣಿಸಿಲ್ಲ ಎಂದು ಬಿಸಿಸಿಐ ತಿಳಿಸಿದೆ. ಜತೆಗೆ ಬೆನ್ನುನೋವಿನಿಂದ ಬಳಲಿರುವ ಯಶ್ ದಯಾಳ್ ಅವರನ್ನೂ ಆಯ್ಕೆ ಮಾಡಿಲ್ಲ ಎಂದು ತಿಳಿಸಿದೆ.

ನ್ಯೂಜಿಲ್ಯಾಂಡ್​ ವಿರುದ್ಧದ ಏಕದಿನ ಸರಣಿಯ ಬಳಿಕ ಭಾರತ ತಂಡ ಬಾಂಗ್ಲಾದೇಶದ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿ ಆಡಲಿದೆ. ಕಿವೀಸ್​ ಸರಣಿಗೆ ವಿಶ್ರಾಂತಿ ವಹಿಸಿದ್ದ ರೋಹಿತ್ ಮತ್ತೆ ತಂಡವನ್ನು ಮುನ್ನಡೆಸಲಿದ್ದಾರೆ. ಜತೆಗೆ ಕೆ.ಎಲ್. ರಾಹುಲ್ ಮತ್ತು ವಿರಾಟ್ ಕೊಹ್ಲಿ ಕೂಡ ತಂಡಕ್ಕೆ ಮರಳಲಿದ್ದಾರೆ.

ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಕೆ.ಎಲ್. ರಾಹುಲ್ (ಉಪ ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ರಜತ್ ಪಾಟೀದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ರಿಷಭ್ ಪಂತ್ (ವಿಕೆಟ್‌ ಕೀಪರ್), ಇಶಾನ್ ಕಿಶನ್, ಶಾಬಾಜ್ ಅಹಮದ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ದೀಪಕ್ ಚಾಹರ್, ಕುಲದೀಪ್ ಸೇನ್.

ಇದನ್ನೂ ಓದಿ | IND VS NZ | ಭಾರತ ಮತ್ತು ನ್ಯೂಜಿಲ್ಯಾಂಡ್​ ವಿರುದ್ಧದ ಅಂತಿಮ ಟಿ20 ಪಂದ್ಯ ಟೈನಲ್ಲಿ ಅಂತ್ಯ; ಸರಣಿ ಗೆದ್ದ ಭಾರತ

Exit mobile version