Site icon Vistara News

IND Vs ENG 5th Test: 100ನೇ ಟೆಸ್ಟ್​ನಲ್ಲಿ ಕಣಕ್ಕಿಳಿಯಲು ಸಜ್ಜಾದ ಬೇರ್‌ ಸ್ಟೊ, ಅಶ್ವಿನ್

Ravichandran Ashwin, Jonny Bairstow

ಧರ್ಮಶಾಲಾ: ಇಂಗ್ಲೆಂಡ್‌ ಮತ್ತು ಭಾರತ ನಡುವೆ(IND Vs ENG 5th Test) ಧರ್ಮಶಾಲಾದಲ್ಲಿ(Dharamshala) ನಡೆಯುವ 5ನೇ ಟೆಸ್ಟ್​ ಪಂದ್ಯ ಜಾನಿ ಬೇರ್​ಸ್ಟೊ(Jonny Bairstow) ಮತ್ತು ರವಿಚಂದ್ರನ್​ ಅಶ್ವಿನ್(Ravichandran Ashwin)​ ಅವರಿಗೆ ವಿಶೇಷ ಪಂದ್ಯವಾಗಲಿದೆ. ಉಭಯ ಆಟಗಾರರಿಗೂ ಇದು 100ನೇ ಟೆಸ್ಟ್​ ಪಂದ್ಯವಾಗಿದೆ.

ಅಶ್ವಿನ್​ ಅವರು 5ನೇ ಟೆಸ್ಟ್​ನಲ್ಲಿ ಕಣಕ್ಕಿಳಿಯುವ ಮೂಲಕ 100ನೇ ಟೆಸ್ಟ್‌ ಪಂದ್ಯವಾಡಿದ 13ನೇ ಭಾರತೀಯ ಆಟಗಾರ ಎನಿಸಿಕೊಳ್ಳಲಿದ್ದಾರೆ. ಹೀಗಾಗಿ ಅವರಿಗೆ ಪಂದ್ಯ ಆರಂಭಕ್ಕೂ ಮುನ್ನ ವಿಶೇಷ ಗೌರವ ಸೂಚಿಸುವ ಕಾರ್ಯಕ್ರಮವೊಂದನ್ನು ಬಿಸಿಸಿಐ ಏರ್ಪಡಿಸಿದೆ. ಧರ್ಮಾಶಾಲಾ ಟೆಸ್ಟ್​ನಲ್ಲಿ ನಾಯಕ ರೋಹಿತ್‌ ಶರ್ಮ ಅವರು ಶತಕದ ಟೆಸ್ಟ್​ ಸಾಧಕ ಅಶ್ವಿ‌ನ್‌ ಅವರಿಗೆ ತಂಡವನ್ನು ಅಂಗಳಕ್ಕೆ ಮುನ್ನಡೆಸುವ ಗೌರವ ನೀಡಲಿದ್ದಾರೆ ಎಂದು ಬಿಸಿಸಿಐ ಮೂಲವೊಂದು ತಿಳಿಸಿದೆ.

ಕಳೆದ 13 ವರ್ಷಗಳಿಂದ ಭಾರತೀಯ ಟೆಸ್ಟ್‌ ತಂಡದ ಭಾಗವಾಗಿರುವ ಅಶ್ವಿ‌ನ್‌ ಸದ್ಯ 99* ಟೆಸ್ಟ್‌ಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ. ಮೂರನೇ ಟೆಸ್ಟ್​ ಪಂದ್ಯದಲ್ಲಿ ಅವರು 500 ಟೆಸ್ಟ್​ ವಿಕೆಟ್​ಗಳನ್ನು ಪೂರ್ತಿಗೊಳಿಸಿದ ಸಾಧನೆ ಕೂಡ ಮಾಡಿದ್ದರು. ಸದ್ಯ ಅವರ ಬತ್ತಳಿಕೆಯಲ್ಲಿ 507 ವಿಕೆಟ್​ಗಳಿವೆ. ಅತ್ಯಧಿಕ 35 ಸಲ ಇನ್ನಿಂಗ್ಸ್‌ ಒಂದರಲ್ಲಿ 5 ಪ್ಲಸ್‌ ವಿಕೆಟ್‌ ಉರುಳಿಸಿದ ಭಾರತೀಯ ದಾಖಲೆ ಕೂಡ ಇವರ ಹೆಸರಿನಲ್ಲಿದೆ. 8 ಬಾರಿ 10ಕ್ಕಿಂತ ಅಧಿಕ ವಿಕೆಟ್​ ಕಿತ್ತ ದಾಖಲೆ ಕೂಡ ಇವರದ್ದಾಗಿದೆ. ಬೌಲಿಂಗ್​ ಮಾತ್ರವಲ್ಲದೆ ಬ್ಯಾಟಿಂಗ್​ನಲ್ಲಿಯೂ ಉತ್ತಮ ಪ್ರದರ್ಶನ ತೋರಿರುವ ಅಶ್ವಿನ್​ 3 ಸಾವಿರಕ್ಕೂ ಅಧಿಕ ರನ್​ ಬಾರಿಸಿದ್ದಾರೆ. ಇದರಲ್ಲಿ 5 ಶತಕಗಳು ಕೂಡ ಒಳಗೊಂಡಿದೆ. 14 ಅರ್ಧಶತಕ ಸೇರಿದೆ.

ಇದನ್ನೂ ಓದಿ IND vs ENG 5th Test: ವಿಶ್ವ ಟೆಸ್ಟ್​ನಲ್ಲಿ ದಾಖಲೆ ಬರೆಯಲು ರೋಹಿತ್​ಗೆ ಬೇಕು ಕೇವಲ ಒಂದು ಸಿಕ್ಸರ್​

ಭಾರತ ಪರ 100 ಟೆಸ್ಟ್​ ಪಂದ್ಯ ಆಡಿದ ಆಟಗಾರರು

ಆಟಗಾರಪಂದ್ಯ
ಸಚಿನ್‌ ತೆಂಡೂಲ್ಕರ್‌200
ರಾಹುಲ್‌ ದ್ರಾವಿಡ್‌163
ವಿವಿಎಸ್‌ ಲಕ್ಷ್ಮಣ್‌134
ಅನಿಲ್‌ ಕುಂಬ್ಳೆ132
ಕಪಿಲ್‌ದೇವ್‌131
ಸುನೀಲ್‌ ಗಾವಸ್ಕರ್‌125
ಸೌರವ್‌ ಗಂಗೂಲಿ113
ವಿರಾಟ್‌ ಕೊಹ್ಲಿ113*
ಇಶಾಂತ್‌ ಶರ್ಮ103*
ಹರ್ಭಜನ್‌ ಸಿಂಗ್‌103
ವೀರೇಂದ್ರ ಸೆಹವಾಗ್‌103
ಚೇತೇಶ್ವರ್‌ ಪೂಜಾರ103*
ಆರ್​.ಅಶ್ವಿನ್​99*

ಬೇರ್​ಸ್ಟೊಗೂ 100ನೇ ಪಂದ್ಯ

ಮತ್ತೊಂದೆಡೆ, ಬೈರ್‌ಸ್ಟೋ ಅವರಿಗೂ ಇದು 100ನೇ ಟೆಸ್ಟ್ ಪಂದ್ಯವಾಗಿದೆ. ಹೊಡಿಬಡಿ ಆಟಕ್ಕೆ ಖ್ಯಾತಿ ಪಡೆದಿರುವ ಬೇರ್​ಸ್ಟೊ ಈ ಬಾರಿ ತೀರಾ ಕಳಪೆ ಪ್ರದರ್ಶನ ತೋರಿದ್ದಾರೆ. ಭಾರತ ವಿರುದ್ಧ ಆಡಿದ 4 ಪಂದ್ಯಗಳಲ್ಲಿ ಕೇವಲ 21 ಸರಾಸರಿಯಲ್ಲಿ 170 ರನ್ ಮಾತ್ರ ಗಳಿಸಿದ್ದಾರೆ. ಅವರು ಇಂಗ್ಲೆಂಡ್​​ ವಿರುದ್ಧ 100ನೇ ಟೆಸ್ಟ್​ ಆಡಿದ 17ನೇ ಆಟಗಾರ ಎನಿಸಿಕೊಳ್ಳಲಿದ್ದಾರೆ. ಈ ಸ್ಮರಣೀಯ ಪಂದ್ಯದಲ್ಲಾದರೂ ಬೇರ್​ಸ್ಟೊ ನಿರೀಕ್ಷಿತ ಬ್ಯಾಟಿಂಗ್​ ಪ್ರದರ್ಶನ ತೋರುತ್ತಾರೋ ಎಂದು ಕಾದು ನೋಡಬೇಕಿದೆ. 99 ಟೆಸ್ಟ್‌ಗಳಲ್ಲಿ, ಬೈರ್‌ಸ್ಟೋ 36.42 ಸರಾಸರಿಯಲ್ಲಿ 12 ಶತಕ ಮತ್ತು 26 ಅರ್ಧಶತಕಗಳನ್ನು ಒಳಗೊಂಡಂತೆ 5974 ರನ್ ಗಳಿಸಿದ್ದಾರೆ.

Exit mobile version