ಹೈದರಾಬಾದ್: ಭಾರತ(IND vs ENG) ವಿರುದ್ಧ ಸಾಗುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಸೋಲುವ ಸ್ಥಿತಿಯಲ್ಲಿದೆ. ದ್ವಿತೀಯ ಇನಿಂಗ್ಸ್ನಲ್ಲಿಯೂ 5 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದೆ. ಉಳಿದ 5 ವಿಕೆಟ್ ಕೂಡ ಆರ್ ಅಶ್ವಿನ್(Ravichandran Ashwin) ಕಿತ್ತರೆ ಟೆಸ್ಟ್ ಕ್ರಿಕೆಟ್ನಲ್ಲಿ ದಾಖಲೆಯೊಂದನ್ನು ಬರೆಯಲಿದ್ದಾರೆ.
ಸದ್ಯ 495* ವಿಕೆಟ್ ಪಡೆದಿರುವ ಅಶ್ವಿನ್ ಇನ್ನು ಕೇವಲ 5 ವಿಕೆಟ್ ಉರುಳಿಸಿದರೆ ನೂತನ ಮೈಲುಗಲ್ಲೊಂದನ್ನು ತಲುಪಲಿದ್ದಾರೆ. ಟೆಸ್ಟ್ನಲ್ಲಿ 500 ವಿಕೆಟ್ ಕಿತ್ತ ಸಾಧನೆ ಮಾಡಲಿದ್ದಾರೆ. ಜತೆಗೆ ಈ ಸಾಧನೆ ಮಾಡಿದ 2ನೇ ಭಾರತೀಯ ಹಾಗೂ ವಿಶ್ವದ 9ನೇ ಬೌಲರ್ ಎಂಬ ಖ್ಯಾತಿಗೆ ಪಾತ್ರರಾಗಲಿದ್ದಾರೆ. ಅನಿಲ್ ಕುಂಬ್ಳೆ ಈ ಸಾಧನೆ ಮಾಡಿದ ಮೊದಲ ಭಾರತೀಯ ಬೌಲರ್. ಅನಿಲ್ ಕುಂಬ್ಳೆ ಟೆಸ್ಟ್ನಲ್ಲಿ 619 ವಿಕೆಟ್ ಪಡೆದಿದ್ದಾರೆ.
37 ವರ್ಷದ ಅನುಭವಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಇದುವರೆಗೆ ಟೆಸ್ಟ್ ಕ್ರಿಕೆಟ್ನಲ್ಲಿ ಭಾರತದ ಪರ 96 ಟೆಸ್ಟ್ ಪಂದ್ಯಗಳನ್ನು ಆಡಿ 495 ವಿಕೆಟ್ಗಳನ್ನು ಉರುಳಿಸಿದ್ದಾರೆ. 34 ಬಾರಿ ಇನಿಂಗ್ಸ್ ಒಂದರಲ್ಲಿ 5 ವಿಕೆಟ್ ಕಿತ್ತ ಸಾಧನೆಯೂ ಇವರದ್ದಾಗಿದೆ. 8 ಬಾರಿ ಪಂದ್ಯವೊಂದರಲ್ಲಿ 10 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಪಡೆದಿದ್ದಾರೆ. ಒಂದೊಮ್ಮೆ ಆರ್. ಅಶ್ವಿನ್ ಅವರು ಮೊದಲ ಪಂದ್ಯದಲ್ಲಿ ಈ ಸಾಧನೆ ಮಾಡಲಾಗದಿದ್ದರೂ ಕೂಡ ಉಳಿದಿರುವ 4 ಪಂದ್ಯಗಳಲ್ಲಿ ಈ ಸಾಧನೆಯನ್ನೂ ಪೂರ್ತಿಗೊಳಿಸುವುದರಲ್ಲಿ ಅನುಮಾನವೇ ಇಲ್ಲ ಎನ್ನಬಹುದು.
ಇದನ್ನೂ ಓದಿ Joe Root: ಕೇವಲ 2 ರನ್ ಗಳಿಸಿ ಭಾರತ ವಿರುದ್ಧ ವಿಶ್ವ ದಾಖಲೆ ಬರೆದ ಜೋ ರೂಟ್
ಅತಿ ಹೆಚ್ಚು ಟೆಸ್ಟ್ ವಿಕೆಟ್ ಪಡೆದ ಬೌಲರ್
ಆಟಗಾರ | ದೇಶ | ವಿಕೆಟ್ |
ಮುತ್ತಯ್ಯ ಮುರಳೀಧರನ್ | ಶ್ರೀಲಂಕಾ | 800 |
ಶೇನ್ ವಾರ್ನ್ | ಆಸ್ಟ್ರೇಲಿಯಾ | 708 |
ಜೇಮ್ಸ್ ಆಂಡರ್ಸನ್ | ಇಂಗ್ಲೆಂಡ್ | 690* |
ಅನಿಲ್ ಕುಂಬ್ಳೆ | ಭಾರತ | 619 |
ಸ್ಟುವರ್ಟ್ ಬ್ರಾಡ್ | ಇಂಗ್ಲೆಂಡ್ | 604 |
ಗ್ಲೆನ್ ಮೆಕ್ಗ್ರಾತ್ | ಆಸ್ಟ್ರೇಲಿಯಾ | 563 |
ಕರ್ಟ್ನಿ ವಾಲ್ಷ್ | ವೆಸ್ಟ್ ಇಂಡೀಸ್ | 519 |
ನಾಥನ್ ಲಿಯಾನ್ | ಆಸ್ಟ್ರೇಲಿಯಾ | 512* |
ರವಿಚಂದ್ರನ್ ಅಶ್ವಿನ್ | ಭಾರತ | 495* |
ಡೇಲ್ ಸ್ಟೈನ್ | ದಕ್ಷಿಣ ಆಫ್ರಿಕಾ | 439 |
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ದಾಖಲೆ ಬರೆದ ಅಶ್ವಿನ್
ಅಶ್ವಿನ್ ಅವರು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ 150 ವಿಕೆಟ್ ಕಬಳಿಸಿದ ಮೂರನೇ ಬೌಲರ್ ಹಾಗೂ ಎರಡನೇ ಸ್ಪಿನ್ನರ್ ಎನಿಸಿಕೊಂಡಿದ್ದಾರೆ. ಜತೆಗೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಅತೀ ವೇಗವಾಗಿ 150 ವಿಕೆಟ್ ಪಡೆದ ವಿಶ್ವ ದಾಖಲೆಯನ್ನೂ ಕೂಡ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ವಿಶ್ವ ದಾಖಲೆ ಆಸ್ಟ್ರೇಲಿಯಾದ ನಾಥನ್ ಲಿಯಾನ್ ಹೆಸರಿನಲ್ಲಿತ್ತು. ಲಿಯಾನ್ 63 ಟೆಸ್ಟ್ ಪಂದ್ಯಗಳ ಮೂಲಕ 150 ವಿಕೆಟ್ ಕಬಳಿಸಿ ದಾಖಲೆ ಬರೆದಿದ್ದರು. ಇದೀಗ ಈ ದಾಖಲೆಯನ್ನು ಅಶ್ವಿನ್ ಮುರಿದಿದ್ದಾರೆ. ಅಶ್ವಿನ್ ಕೇವಲ 58 ಟೆಸ್ಟ್ ಪಂದ್ಯಗಳನ್ನು ಆಡುವ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ 150 ವಿಕೆಟ್ ಪೂರೈಸಿದ್ದಾರೆ.