ರಾಜ್ಕೋಟ್: ಭಾರತ ಮತ್ತು ಇಂಗ್ಲೆಂಡ್(IND vs ENG) ನಡುವಣ ಮೂರನೇ ಟೆಸ್ಟ್(India vs England 3rd Test) ಪಂದ್ಯ ಫೆಬ್ರವರಿ 15ರಿಂದ ರಾಜ್ಕೋಟ್ನ(Rajkot) ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ(Saurashtra Cricket Association Stadium) ಆರಂಭಗೊಳ್ಳಲಿದೆ. ಇತ್ತಂಡಗಳು ಕೂಡ ಈ ಸ್ಟೇಡಿಯಂನಲ್ಲಿ ಉತ್ತಮ ದಾಖಲೆ(Rajkot Test record) ಹೊಂದಿದೆ. ಉಭಯ ತಂಡಗಳ ಸಾಧನೆಯ ಮಾಹಿತಿ ಇಂತಿದೆ.
ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಚೊಚ್ಚಲ ಏಕದಿನ ಮತ್ತು ಟೆಸ್ಟ್ ಪಂದ್ಯಗಳು ನಡೆದದ್ದು ಇಂಗ್ಲೆಂಡ್ ಮತ್ತು ಭಾರತ ವಿರುದ್ಧವೇ. 2013ರಲ್ಲಿ ಭಾರತ ಮತ್ತು ಇಂಗ್ಲೆಂಡ್ ಏಕದಿನ ಪಂದ್ಯವನ್ನಾಡುವ ಮೂಲಕ ಈ ಮೈದಾನಲ್ಲಿ ಅಂತಾರಾಷ್ಟ್ರೀಯ ಪಂದ್ಯಗಳಿಗೆ ಚಾಲನೆ ಸಿಕ್ಕಿತ್ತು. ಇದೇ ವರ್ಷ ಆಸ್ಟ್ರೇಲಿಯಾ ವಿರುದ್ಧ ಟಿ20 ಪಂದ್ಯ ಕೂಡ ನಡೆದಿತ್ತು. 2016ರಲ್ಲಿ ಭಾರತ ಮತ್ತು ಇಂಗ್ಲೆಂಡ್ ಮೊದಲ ಟೆಸ್ಟ್ ಪಂದ್ಯ ಆಡಿತ್ತು. ಈ ಪಂದ್ಯದ ಡ್ರಾದಲ್ಲಿ ಅಂತ್ಯಕಂಡಿತ್ತು. ಒಟ್ಟಾರೆಯಾಗಿ ಈ ಸ್ಟೇಡಿಯಂನಲ್ಲಿ 2 ಟೆಸ್ಟ್, 4 ಏಕದಿನ, 5 ಅಂತಾರಾಷ್ಟ್ರೀಯ ಟಿ20 ಪಂದ್ಯಗಳು ನಡೆದಿವೆ.
ಕಡಿಮೆ ಮೊತ್ತ
ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡವು ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಟೆಸ್ಟ್‌ನಲ್ಲಿ ಅತ್ಯಂತ ಕಡಿಮೆ ಮೊತ್ತವನ್ನು ದಾಖಲಿಸಿದೆ. ಕ್ರೈಗ್ ಬ್ರಾಥ್‌ವೈಟ್ ನೇತೃತ್ವದ ತಂಡ 2018 ರಲ್ಲಿ ಭಾರತ ಪ್ರವಾಸದ ಮೊದಲ ಟೆಸ್ಟ್ ಪಂದ್ಯವನ್ನು ಇಲ್ಲಿ ಆಡಿತ್ತು. ಈ ಪಂದ್ಯದಲ್ಲಿ ವಿಂಡೀಸ್ ಮೊದಲ ಇನಿಂಗ್ಸ್ನಲ್ಲಿ 48 ಓವರ್‌ಗಳಲ್ಲಿ 181 ರನ್‌ಗಳಿಗೆ ಆಲೌಟ್ ಆಗಿತ್ತು. ಆಫ್-ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಕೇವಲ 37 ರನ್‌ಗಳಿಗೆ ನಾಲ್ಕು ವಿಕೆಟ್ ಕಿತ್ತು ಮಿಂಚಿದ್ದರು. ಭಾರತವು ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 649/9 ರನ್ಗೆ ಡಿಕ್ಲೇರ್ ಮಾಡಿತ್ತು. ಭಾರತ ಈ ಪಂದ್ಯವನ್ನು ಇನ್ನಿಂಗ್ಸ್ ಮತ್ತು 272 ರನ್‌ಗಳ ಜಯ ಸಾಧಿಸಿತ್ತು.
ಅತ್ಯಧಿಕ ರನ್ ಗಳಿಕೆ
ಭಾರತದ ಚೇತೇಶ್ವರ ಪೂಜಾರ ಮತ್ತು ವಿರಾಟ್ ಕೊಹ್ಲಿ ಅವರು ಈ ಸ್ಟೇಡಿಯಂನಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಹಂಚಿಕೊಂಡಿದ್ದಾರೆ. 2016 ಮತ್ತು 2018 ರ ನಡುವೆ, ಪೂಜಾರ ಎರಡು ಟೆಸ್ಟ್ ಪಂದ್ಯಗಳಲ್ಲಿ 76.00 ಸರಾಸರಿಯಲ್ಲಿ ಶತಕ ಮತ್ತು ಒಂದು ಅರ್ಧಶತಕ ಸೇರಿದಂತೆ 228 ರನ್ ಗಳಿಸಿದ್ದಾರೆ. ಕೊಹ್ಲಿ ಕೂಡ ಎರಡು ಪಂದ್ಯಗಳಲ್ಲಿ 114 ರ ಸರಾಸರಿಯಲ್ಲಿ 228 ರನ್ ಬಾರಿಸಿ ಜಂಟಿ ದಾಖಲೆ ಹೊಂದಿದ್ದಾರೆ.
ಅತಿ ಹೆಚ್ಚು ವಿಕೆಟ್ ಸಾಧನೆ
ಭಾರತದ ಸ್ಟಾರ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆ ಹೊಂದಿದ್ದಾರೆ. ಅಶ್ವಿನ್ ಇಲ್ಲಿ 2 ಟೆಸ್ಟ್ ಪಂದ್ಯ ಆಡಿ 37.55 ಸರಾಸರಿಯಲ್ಲಿ ಒಂಬತ್ತು ವಿಕೆಟ್‌ಗಳನ್ನು ಉರುಳಿಸಿದ್ದಾರೆ.
ಇದನ್ನೂ ಓದಿ ICC Test Rankings: ಮೊದಲ ಬಾರಿಗೆ ಟೆಸ್ಟ್ ಬೌಲಿಂಗ್ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿದ ಬುಮ್ರಾ
ಗರಿಷ್ಠ ವೈಯಕ್ತಿಕ ರನ್ ಸಾಧಕರು
ವಿರಾಟ್ ಕೊಹ್ಲಿ ಅವರು ಈ ಸ್ಟೇಡಿಯಂನಲ್ಲಿ ಟೆಸ್ಟ್‌ನಲ್ಲಿ ಗರಿಷ್ಠ ವೈಯಕ್ತಿಕ ಸ್ಕೋರ್ ದಾಖಲಿಸಿದ ಆಟಗಾರನಾಗಿದ್ದಾರೆ. 2018 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಪಂದ್ಯದಲ್ಲಿ ಮೊದಲ ಇನಿಂಗ್ಸ್ನಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಕೊಹ್ಲಿ 230 ಎಸೆತಗಳಲ್ಲಿ 139 ರನ್ ಬಾರಿಸಿದ್ದರು. ಅವರ ಈ ಅದ್ಭುತ ಶತಕವು 10 ಬೌಂಡರಿಗಳೊಂದಿಗೆ ಸೇರಿತ್ತು. ಅವರ ಇನ್ನಿಂಗ್ಸ್ ಭಾರತಕ್ಕೆ ತಮ್ಮ ಮೊದಲ ಇನ್ನಿಂಗ್ಸ್‌ನಲ್ಲಿ 649/9d ಗಳ ಬೃಹತ್ ಮೊತ್ತವನ್ನು ಗಳಿಸಲು ಸಹಾಯ ಮಾಡಿತು. ಈ ಟೆಸ್ಟ್‌ನಲ್ಲಿ ಭಾರತ
ಗರಿಷ್ಠ ವೈಯಕ್ತಿಕ ವಿಕೆಟ್ ಟೇಕರ್
ಚೈನಾಮನ್ ಖ್ಯಾತಿಯ ಸ್ಪಿನ್ನ್ ಬೌಲರ್ ಕುಲ್ದೀಪ್ ಯಾದವ್ ಅವರು 2018 ರಲ್ಲಿ ವಿಂಡೀಸ್ ಎದುರಿನ ಪಂದ್ಯದಲ್ಲಿ 57 ರನ್ಗೆ 5 ವಿಕೆಟ್ ಕಿತ್ತಿದ್ದರು. ಇದು ಈ ಮೈದಾನದಲ್ಲಿ ಬೌಲರ್ ಒಬ್ಬ ಪಡೆದ ಗರಿಷ್ಠ ವೈಯಕ್ತಿಕ ಟೆಸ್ಟ್ ವಿಕೆಟ್ ಆಗಿದೆ. ಈ ಬಾರಿಯೂ ಕುಲ್ದೀಪ್ ಇಂಗ್ಲೆಂಡ್ ಸರಣಿಯಲ್ಲಿ ಆಡುತ್ತಿದ್ದಾರೆ. ಆದರೆ, ಇಲ್ಲಿ ನಡೆಯುವ ಮೂರನೇ ಪಂದ್ಯಕ್ಕೆ ಇನ್ನೂ ಕೂಡ ಭಾರತ ತಂಡ ಪ್ರಕಟಗೊಂಡಿಲ್ಲ.