Site icon Vistara News

IND vs ENG: ಕೊಹ್ಲಿ ಸ್ಥಾನಕ್ಕೆ ಬದಲಿ ಆಟಗಾರನಾಗಿ ರಜತ್ ಪಾಟಿದಾರ್ ಆಯ್ಕೆ

rajat patidar

ಹೈದರಾಬಾದ್:​ ವೈಯಕ್ತಿಕ ಕಾರಣ ನೀಡಿ ಇಂಗ್ಲೆಂಡ್(IND vs ENG)​ ವಿರುದ್ಧದ ಟೆಸ್ಟ್​ ಸರಣಿಯ ಮೊದಲ 2 ಟೆಸ್ಟ್​ ಪಂದ್ಯಗಳಿಂದ ಹೊರಗುಳಿದ ವಿರಾಟ್​ ಕೊಹ್ಲಿ(Virat Kohli) ಸ್ಥಾನಕ್ಕೆ ಇದೀಗ ಬದಲಿ ಆಟಗಾರನನ್ನು ಆಯ್ಕೆ ಮಾಡಲಾಗಿದೆ. ರಜತ್ ಪಾಟಿದಾರ್(Rajat Patidar) ಅವರನ್ನು ಬಿಸಿಸಿಐ ಮೊದಲೆರಡು ಟೆಸ್ಟ್​ಗಾಗಿ ತಂಡಕ್ಕೆ ಸೇರಿಸಿಕೊಂಡಿದೆ.

ಕಳೆದ ವರ್ಷ ‘ಎ’ ತಂಡದೊಂದಿಗೆ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿದ್ದ ರಜತ್ ಪಾಟಿದಾರ್, ಇತ್ತೀಚೆಗೆ ಭಾರತ ಮತ್ತು ಇಂಗ್ಲೆಂಡ್ ಲಯನ್ಸ್ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಕ್ರಮವಾಗಿ 111 ಮತ್ತು 151 ರನ್ ಗಳಿಸಿ ಉತ್ತಮ ಬ್ಯಾಟಿಂಗ್​ ಪ್ರದರ್ಶನ ತೋರಿದ್ದರು. ಇದೇ ಕಾರಣಕ್ಕೆ ಅವರಿಗೆ ಅವಕಾಶ ನೀಡಲಾಗಿದೆ. ಕೊಹ್ಲಿ ಸ್ಥಾನಕ್ಕೆ ಪಾಟಿದಾರ್​ ಸೇರಿ ಚೇತೇಶ್ವರ್​ ಪೂಜಾರ ಮತ್ತು ಸರ್ಫರಾಜ್​ ಖಾನ್​ ಹೆಸರು ಕೂಡ ಕೇಳಿ ಬಂದಿತ್ತು. ಅಂತಿಮವಾಗಿ ಬಿಸಿಸಿಐ ಪಾಟಿದಾರ್​ಗೆ ಮಣೆ ಹಾಕಿದೆ. 30 ವರ್ಷದ ಪಾಟಿದಾರ್​ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 45.97 ಸರಾಸರಿಯಲ್ಲಿ 12 ಶತಕಗಳೊಂದಿಗೆ 4000 ರನ್ ಬಾರಿಸಿದ್ದಾರೆ.

ಶ್ರೇಯಸ್​ ಅಯ್ಯರ್​ ಅಭ್ಯಾಸದ ವೇಳೆ ಗಾಯಗೊಂಡ ಕಾರಣ ಅವರು ಮೊದಲ ಪಂದ್ಯ ಆಡುವುದು ಅನುಮಾನ ಎನ್ನಲಾಗಿದೆ. ಹೀಗಾಗಿ ರಜತ್​ ಪಾಟಿದಾರ್​ಗೆ ಆಡುವ ಬಳಗದಲ್ಲಿ ಅವಕಾಶ ಸಿಗುವ ಸಾಧ್ಯತೆ ಅಧಿಕವಾಗಿದೆ.

ಭಾರತ ತಂಡ


ರೋಹಿತ್ ಶರ್ಮಾ (ನಾಯಕ ), ಶುಭ್‌ಮನ್‌ ಗಿಲ್, ಯಶಸ್ವಿ ಜೈಸ್ವಾಲ್, ರಜತ್​ ಪಾಟಿದಾರ್, ಶ್ರೇಯಸ್‌ ಅಯ್ಯರ್, ಕೆಎಲ್ ರಾಹುಲ್, ಕೆಎಸ್ ಭರತ್ (ವಿ.ಕೀ), ಧ್ರುವ್ ಜುರೆಲ್ (ವಿ.ಕೀ), ಆರ್ ಅಶ್ವಿನ್, ಆರ್ ಜಡೇಜಾ, ಅಕ್ಸರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್. ಸಿರಾಜ್, ಮುಖೇಶ್ ಕುಮಾರ್, ಜಸ್​ಪ್ರೀತ್​ ಬುಮ್ರಾ (ಉಪನಾಯಕ), ಅವೇಶ್ ಖಾನ್.

ಇದನ್ನೂ ಓದಿIND vs ENG: ಧೋನಿಯ ಸಿಕ್ಸರ್​ ದಾಖಲೆ ಮುರಿಯಲು ಪಣ ತೊಟ್ಟ ಹಿಟ್​ಮ್ಯಾನ್​ ರೋಹಿತ್​

ಹೈದರಾಬಾದ್​ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್​​ ಸ್ಟೇಡಿಯಂನಲ್ಲಿ ಇದುವರೆಗೆ ಐದು ಟೆಸ್ಟ್​ ಪಂದ್ಯಗಳು ನಡೆದಿವೆ. ಇದರಲ್ಲಿ ಮೊದಲು ಬ್ಯಾಟಿಂಗ್​ ಮತ್ತು ಬೌಲಿಂಗ್​ ನಡೆಸಿದ ತಂಡಗಳು ತಲಾ 2 ಬಾರಿ ಗೆದ್ದಿವೆ. 404 ರನ್​ ಮೊದಲ ಇನಿಂಗ್ಸ್​ನ ಸರಾಸರಿ ಮೊತ್ತವಾಗಿದೆ. ದ್ವಿತೀಯ ಇನಿಂಗ್ಸ್​ನ ಸರಾಸರಿ ಮೊತ್ತ 377 ರನ್​. ಇಲ್ಲಿ ದಾಖಲಾದ ಗರಿಷ್ಠ ಮೊತ್ತ 687/6. ಇದು ಭಾರತ ಮತ್ತು ಬಾಂಗ್ಲಾ ನಡುವಣ ಪಂದ್ಯದಲ್ಲಿ ದಾಖಲಾಗಿತ್ತು. ಸ್ಪಿನ್ ಸ್ನೇಹಿ ಪರಿಸ್ಥಿತಿಗಳನ್ನು ಪರಿಗಣಿಸಿ, ಟಾಸ್ ಗೆದ್ದ ತಂಡವು ಮೊದಲು ಬ್ಯಾಟಿಂಗ್ ಮಾಡಲು ಒಲವು ತೋರಬಹುದು. ಏಕೆಂದರೆ ಇತ್ತೀಚೆಗೆ ಇಲ್ಲಿ ನಡೆದ ಟೆಸ್ಟ್​ ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ತಂಡವೇ ಗೆದ್ದು ಬೀಗಿದೆ.

Exit mobile version