Site icon Vistara News

IND vs ENG: ಮೊದಲ 2 ಟೆಸ್ಟ್​ ಪಂದ್ಯಗಳಿಂದ ಹಿಂದೆ ಸರಿದ ವಿರಾಟ್​ ಕೊಹ್ಲಿ

Virat Kohli withdraws from first 2 Tests

ನವದೆಹಲಿ: ವಿರಾಟ್ ಕೊಹ್ಲಿ(Virat Kohli) ವೈಯಕ್ತಿಕ ಕಾರಣ ನೀಡಿ ಇಂಗ್ಲೆಂಡ್(IND vs ENG) ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಗಳಿಂದ ಹಿಂದೆ ಸರಿದಿದ್ದಾರೆ. ಕೊಹ್ಲಿ ಅಲಭ್ಯವನ್ನು ಬಿಸಿಸಿಐ ತನ್ನ ಅಧಿಕೃತ ಪ್ರಕಟನೆಯಲ್ಲಿ ತಿಳಿಸಿದೆ. ಭಾರತ ಮತ್ತು ಇಂಗ್ಲೆಂಡ್​ ನಡುವಣ ಮೊದಲ ಟೆಸ್ಟ್​ ಜನವರಿ 25ರಿಂದ ಆರಂಭಗೊಳ್ಳಲಿದೆ.

ಅಫಘಾನಿಸ್ತಾನ ವಿರುದ್ಧದ ಟಿ20 ಸರಣಿಯ ವೇಳೆಯೂ ಕೊಹ್ಲಿ ವೈಯಕ್ತಿಕ ಕಾರಣ ನೀಡಿ ಮೊದಲ ಪಂದ್ಯದಿಂದ ಹೊರಗುಳಿದಿದ್ದರು. ಇದೀಗ ಮತ್ತೆ ಇಂಗ್ಲೆಂಡ್​ ವಿರುದ್ಧದ ಮೊದಲ 2 ಪಂದ್ಯಗಳಿಗೂ ಇದೇ ಕಾರಣ ನೀಡಿ ಹೊರಗುಳಿದಿದ್ದಾರೆ. ಫೆಬ್ರವರಿ 15 ರಿಂದ ರಾಜ್​ಕೋಟ್​ನಲ್ಲಿ ಆರಂಭಗೊಳ್ಳಲಿರುವ ಮೂರನೇ ಟೆಸ್ಟ್ ಪಂದ್ಯಕ್ಕೆ ಕೊಹ್ಲಿ ಮತ್ತೆ ತಂಡ ಸೇರಲಿದ್ದಾರೆ. ಕೊಹ್ಲಿ ಪತ್ನಿ ಅನುಷ್ಕಾ ಗರ್ಭಿಣಿಯಾಗಿದ್ದು 2ನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇದೇ ಕಾರಣಕ್ಕೆ ಕೊಹ್ಲಿ 2 ಪಂದ್ಯಗಳಿಂದ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ. ಆದರೆ, ಅಧಿಕೃತ ಮಾಹಿತಿ ಮಾತ್ರ ಲಭ್ಯವಾಗಿಲ್ಲ. ಕೊಹ್ಲಿ ಅಲಭ್ಯದ ಕಾರಣ ಅವರ ಬದಲಿಗೆ ಬೇರೆ ಆಟಗಾರನ ಆಯ್ಕೆಯನ್ನು ಬಿಸಿಸಿಐ ಮಾಡಿಲ್ಲ.

ಭಾರತ ಪ್ರವಾಸದಲ್ಲಿ ಇಂಗ್ಲೆಂಡ್​ ಒಟ್ಟು 5 ಪಂದ್ಯಗಳ ಟೆಸ್ಟ್​ ಸರಣಿ ಆಡಲಿದೆ. ಸರಣಿಯ ಮೊದಲ ಪಂದ್ಯ ಜನವರಿ 25ರಿಂದ ಹೈದರಾಬಾದ್​ನಲ್ಲಿ ನಡೆಯಲಿದೆ. ಬಳಿಕದ 4 ಟೆಸ್ಟ್​ಗಳನ್ನು ಕ್ರಮವಾಗಿ ವಿಶಾಖಪಟ್ಟಣ (ಫೆ.2-6), ರಾಜ್​ಕೋಟ್​ (ಫೆ.15-19), ರಾಂಚಿ (ಫೆ. 23-27) ಮತ್ತು ಧರ್ಮಶಾಲಾದಲ್ಲಿ (ಮಾ.7-11) ಆಡಲಿದೆ.

2 ಟೆಸ್ಟ್​ ಪಂದ್ಯಕ್ಕೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ ), ಶುಭ್‌ಮನ್‌ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್‌ ಅಯ್ಯರ್, ಕೆಎಲ್ ರಾಹುಲ್, ಕೆಎಸ್ ಭರತ್ (ವಿ.ಕೀ), ಧ್ರುವ್ ಜುರೆಲ್ (ವಿ.ಕೀ), ಆರ್ ಅಶ್ವಿನ್, ಆರ್ ಜಡೇಜಾ, ಅಕ್ಸರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್. ಸಿರಾಜ್, ಮುಖೇಶ್ ಕುಮಾರ್, ಜಸ್​ಪ್ರೀತ್​ ಬುಮ್ರಾ (ಉಪನಾಯಕ), ಅವೇಶ್ ಖಾನ್.

Exit mobile version