Site icon Vistara News

IND vs ENG: ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ ಯಾವಾಗ ಆರಂಭ? ಸರಣಿಯ ವಿಶೇಷತೆ ಏನು?

england vs india test

ಬೆಂಗಳೂರು: ಅಫಘಾನಿಸ್ತಾನ ವಿರುದ್ಧದ ಟಿ20 ಸರಣಿಯನ್ನು ಕ್ಲೀನ್​ ಸ್ವೀಪ್​ ಮಾಡಿದ ಜೋಶ್​ನಲ್ಲಿರುವ ಟೀಮ್​ ಇಂಡಿಯಾ ಇದೀಗ ಇಂಗ್ಲೆಂಡ್ ಎದುರಿನ 5 ಪಂದ್ಯಗಳ ಟೆಸ್ಟ್​(IND vs ENG:) ಸರಣಿಯನ್ನಾಡಲು ಎದರು ನೋಡುತ್ತದೆ. ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ದೃಷ್ಟಿಯಿಂದ ಈ ಸರಣಿ ಉಭಯ ತಂಡಗಳಿಗೂ ಮಹತ್ವದ್ದಾಗಿದೆ.

ಇತ್ತಂಡಗಳ ನಡುವಣ 5 ಪಂದ್ಯಗಳ ಟೆಸ್ಟ್​ ಸರಣಿಯ ಮೊದಲ ಪಂದ್ಯ ಜನವರಿ 25 ರಂದು ಆರಂಭಗೊಳ್ಳಲಿದೆ. ಸರಿ ಸುಮಾರು 7 ವಾರಗಳ ಕಾಲ ಈ ಸರಣಿ ನಡೆಯಲಿದೆ. ಮೊದಲ ಎರಡು ಪಂದ್ಯಗಳಿಗೆ ಮಾತ್ರ ಭಾರತ ತಂಡ ಪ್ರಕಟಗೊಂಡಿದೆ. ಉಳಿದಿರುವ ಮೂರು ಪಂದ್ಯಗಳಿಗೆ ಇನ್ನಷ್ಟೇ ತಂಡ ಪ್ರಕಟಿಸಬೇಕಿದೆ. ಈ ಪಂದ್ಯಗಳಿಗೆ ತಂಡದಲ್ಲಿ ಕೆಲ ಬದಲಾವಣೆ ಸಾಧ್ಯತೆ ಇದೆ. ಸರಣಿಯ ಎಲ್ಲ ಪಂದ್ಯಗಳನ್ನು ಜಿಯೋ ಸಿನಿಮಾ ಆ್ಯಪ್​ನಲ್ಲಿ ಉಚಿತವಾಗಿ ವೀಕ್ಷಿಸಬಹುದು.

ಬಾಣಸಿಗನನ್ನೂ ಕರೆ ತರಲಿದೆ ಇಂಗ್ಲೆಂಡ್ ತಂಡ


5 ಪಂದ್ಯಗಳ ಟೆಸ್ಟ್​ ಸರಣಿಯನ್ನಾಡಲು ಇಂಗ್ಲೆಂಡ್​ ತಂಡ(IND vs ENG) ಭಾರತಕ್ಕೆ ಬರುವ ವೇಳೆ ಜನಪ್ರಿಯ ಬಾಣಸಿಗ ಒಮರ್​ ಮೆಜಿಯಾನ್ ಅವರನ್ನು ಕೂಡ ಕರೆತರಲಿದೆ. 7 ವಾರಗಳ ಪ್ರವಾಸದ ವೇಳೆ ಆಟಗಾರರು, ಅನಾರೋಗ್ಯಕ್ಕೀಡಾಗುವುದನ್ನು ತಪ್ಪಿಸುವ ಸಲುವಾಗಿ ಇಂಗ್ಲೆಂಡ್​ ಕ್ರಿಕೆಟ್​ ಮಂಡಳಿ ಈ ಕ್ರಮ ಕೈಗೊಂಡಿದೆ.

ಇದನ್ನೂ ಓದಿ IND vs ENG: 5ನೇ ಸ್ಥಾನಕ್ಕೆ ರಾಹುಲ್​-ಅಯ್ಯರ್​ ಮಧ್ಯೆ ಪೈಪೋಟಿ; ಬ್ಯಾಟಿಂಗ್​ ಅಂಕಿ ಅಂಶ ಹೇಗಿದೆ?

ಭಾರತದಲ್ಲಿನ ಹೋಟೆಲ್​ ವ್ಯವಸ್ಥೆಗಳ ನೈರ್ಮಲ್ಯದ ಬಗ್ಗೆ ಇಸಿಬಿಗೆ ಯಾವುದೇ ತಕರಾರು ಇಲ್ಲ. ಬದಲಾಗಿ, ತಂಡದ ಎಲ್ಲ ಆಟಗಾರರು ಪೌಷ್ಠಿಕ ಮತ್ತು ತಮ್ಮ ನೆಚ್ಚಿನ ಆಹಾರಗಳನ್ನೇ ಸೇವಿಸುವಂತಾಗಲು ಈ ಕ್ರಮ ಕೈಗೊಂಡಿರುವುದಾಗಿ ಇಸಿಬಿ ಸ್ಪಷ್ಟಪಡಿಸಿದೆ. ಸುಮಾರು ಏಳು ವಾರಗಳ ಕಾಲ ಇಂಗ್ಲೆಂಡ್​ ಆಟಗಾರರು ಭಾರತದಲ್ಲಿರುವ ಕಾರಣದಿಂದ ಅವರಿಗೆ ಇಲ್ಲಿನ ಆಹಾರ ಪದ್ಧತಿಗೆ ಹೊಂದಿಕೊಳ್ಳುವುದು ಕಷ್ಟವಾದೀತು ಎನ್ನುವ ಕಾರಣದಿಂದ ಈ ಕ್ರಮ ಕೈಗೊಳ್ಳಲಾಗಿದೆ.

ವೇಳಾಪಟ್ಟಿ


ಜನವರಿ 25 ರಿಂದ 29- ಮೊದಲ ಟೆಸ್ಟ್ ಪಂದ್ಯ (ಹೈದರಾಬಾದ್)

ಫೆಬ್ರವರಿ 2 ರಿಂದ 6- ಎರಡನೇ ಟೆಸ್ಟ್ ಪಂದ್ಯ (ವಿಶಾಖಪಟ್ಟಣಂ)

ಫೆಬ್ರವರಿ 15 ರಿಂದ 19- ಮೂರನೇ ಟೆಸ್ಟ್ ಪಂದ್ಯ (ರಾಜ್​ಕೋಟ್)

ಫೆಬ್ರವರಿ 23 ರಿಂದ 27- ನಾಲ್ಕನೇ ಟೆಸ್ಟ್ ಪಂದ್ಯ (ರಾಂಚಿ)

ಮಾರ್ಚ್ 7 ರಿಂದ 11- ಐದನೇ ಟೆಸ್ಟ್ ಪಂದ್ಯ (ಧರ್ಮಶಾಲಾ)

ಇಂಗ್ಲೆಂಡ್ ಟೆಸ್ಟ್​ ತಂಡ: ಬೆನ್ ಸ್ಟೋಕ್ಸ್ (ನಾಯಕ),ಜೋ ರೂಟ್, ಮಾರ್ಕ್ ವುಡ್, ಜೇಮ್ಸ್ ಆ್ಯಂಡರ್ಸನ್​, ಗಸ್ ಅಟ್ಕಿನ್ಸನ್, ರೆಹಾನ್ ಅಹ್ಮದ್, ಜಾನಿ ಬೇರ್​ ಸ್ಟೋ, ಶೋಯೆಬ್ ಬಶೀರ್, ಹ್ಯಾರಿ ಬ್ರೂಕ್, ಝಾಕ್ ಕ್ರಾಲಿ, ಬೆನ್ ಡಕೆಟ್, ಬೆನ್ ಫೋಕ್ಸ್, ಟಾಮ್ ಹಾರ್ಟ್ಲಿ, ಜ್ಯಾಕ್ ಲೀಚ್, ಓಲಿ ಪೋಪ್, ಓಲಿ ರಾಬಿನ್ಸನ್.

2 ಟೆಸ್ಟ್​ ಪಂದ್ಯಕ್ಕೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ ), ಶುಭ್‌ಮನ್‌ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್‌ ಅಯ್ಯರ್, ಕೆಎಲ್ ರಾಹುಲ್, ಕೆಎಸ್ ಭರತ್ (ವಿ.ಕೀ), ಧ್ರುವ್ ಜುರೆಲ್ (ವಿ.ಕೀ), ಆರ್ ಅಶ್ವಿನ್, ಆರ್ ಜಡೇಜಾ, ಅಕ್ಸರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್. ಸಿರಾಜ್, ಮುಖೇಶ್ ಕುಮಾರ್, ಜಸ್​ಪ್ರೀತ್​ ಬುಮ್ರಾ (ಉಪನಾಯಕ), ಅವೇಶ್ ಖಾನ್.

Exit mobile version