Site icon Vistara News

IND vs IRE T20 World Cup: ಐರ್ಲೆಂಡ್​ ಸವಾಲಿಗೆ ಟೀಮ್​ ಇಂಡಿಯಾ ಸಿದ್ಧ; ವಿಶ್ವಕಪ್​ ಸಾಧನೆ ಹೇಗಿದೆ?

IND vs IRE T20 World Cup

IND vs IRE T20 World Cup: Team India ready for Ireland challenge

ನ್ಯೂಯಾರ್ಕ್​: ಟಿ20 ಶ್ರೇಯಾಂಕದಲ್ಲಿ ನಂ.1 ಸ್ಥಾನಿಯಾಗಿರುವ ಟೀಮ್​ ಇಂಡಿಯಾ(IND vs IRE T20 World Cup) ನಾಳೆ(ಬುಧವಾರ) ನಡೆಯುವ ಟಿ20 ವಿಶ್ವಕಪ್​ ಟೂರ್ನಿಯಲ್ಲಿ(T20 World Cup 2024) ಐರ್ಲೆಂಡ್​ ವಿರುದ್ಧ ಆಡಲಿದೆ. ಇದುವರೆಗಿನ ಮುಖಾಮುಖಿಯಲ್ಲಿ ಆಡಿದ ಎಲ್ಲ 7 ಪಂದ್ಯಗಳನ್ನು ಗೆದ್ದಿರುವ ಭಾರತವೇ ನಾಳಿನ ಫೇವರಿಟ್​ ಆಗಿದೆ. ಕಳೆದ 8 ಆವೃತ್ತಿಯ ಟಿ20 ವಿಶ್ವಕಪ್​ನಲ್ಲಿ ಭಾರತದ ಸಾಧನೆ ಹೇಗಿದೆ ಎಂಬ ಮಾಹಿತಿ ಇಂತಿದೆ.

2007ರಲ್ಲಿ ನಡೆದ ಉದ್ಘಾಟನಾ ಆವೃತ್ತಿಯಲ್ಲೇ ಭಾರತ ಚಾಂಪಿಯನ್​ ಆಗಿ ಹೊರಹೊಮ್ಮಿತ್ತು. ಇದಾದ ಬಳಿಕ ಭಾರತ ಮತ್ತೆ ಟಿ20 ಚಾಂಪಿಯನ್​ ಆಗಲೇ ಇಲ್ಲ. ಆ ಬಳಿಕ ಆಡಿದ 7 ಟೂರ್ನಿಗಳಲ್ಲಿ ಸೋಲು ಕಂಡಿತ್ತು. 2014ರಲ್ಲಿ ಫೈನಲ್​ ಪ್ರವೇಶಿಸಿದ್ದೇ ದೊಡ್ಡ ಸಾಧನೆ. ಇದೀಗ 17 ವರ್ಷಗಳ ಬಳಿಕ ಮತ್ತೆ ಚಾಂಪಿಯನ್​ ಆಗುವ ಇರಾದೆಯೊಂದಿಗೆ ಕಣಕ್ಕಿಳಿಯಲಿದೆ. ಇದು ನನಸಾಗಬೇಕಿದ್ದರೆ ಮೊದಲ ಪಂದ್ಯದಿಂದಲೇ ಗೆಲುವಿನ ಹಳಿ ಏರಬೇಕಿದೆ.

ಟಿ20 ವಿಶ್ವ ಕಪ್​ನಲ್ಲಿ ಭಾರತ ಸಾಧನೆ

2007ಚಾಂಪಿಯನ್​
20092ನೇ ಸುತ್ತು
20102ನೇ ಸುತ್ತು
20122ನೇ ಸುತ್ತು
2014ರನ್ನರ್​ ಅಪ್​
2016ಸೆಮಿಫೈನಲ್​
20212ನೇ ಸುತ್ತು
2022ಸೆಮಿಫೈನಲ್​

ರೋಹಿತ್​-ಕೊಹ್ಲಿಗೆ ಕೊನೆಯ ಅವಕಾಶ

ಟೀಮ್​ ಇಂಡಿಯಾದ ನಾಯಕ ರೋಹಿತ್​ ಶರ್ಮ ಮತ್ತು ವಿರಾಟ್​ ಕೊಹ್ಲಿಗೆ ಇದು ಬಹುತೇಕ ಕೊನೆಯ ಟಿ20 ವಿಶ್ವಕಪ್​ ಟೂರ್ನಿ ಎನ್ನಲಡ್ಡಿಯಿಲ್ಲ. ರೋಹಿತ್​ ಇದುವರೆಗಿನ ಎಲ್ಲ ಆವೃತ್ತಿಯ ಟಿ20 ವಿಶ್ವಕಪ್​ ಆಡಿದ ಆಟಗಾರನಾಗಿದ್ದಾರೆ. 2007ರಲ್ಲಿ ಕಪ್​ ಗೆದ್ದ ತಂಡದ ಸದಸ್ಯನೂ ಆಗಿದ್ದಾರೆ. ಆದರೆ ಕೊಹ್ಲಿಗೆ ನಾಯಕನಾಗಿ ಹಾಗೂ ಆಟಗಾರನಾಗಿಯೂ​ ಟಿ20 ವಿಶ್ವಕಪ್​ ಎತ್ತುವ ಭಾಗ್ಯ ಇನ್ನೂ ಸಿಕ್ಕಲ್ಲ. ಈ ಬಾರಿಯೂ ಇದು ಸಾಧ್ಯವಾಗದಿದ್ದರೆ. ಈ ಕೊರಗು ಅವರಲ್ಲಿ ಕಾಡುವುದು ಖಚಿತ. ಹೀಗಾಗಿ ಕೊನೆಯ ಟೂರ್ನಿಯಲ್ಲಿ ಉತ್ತಮವಾಗಿ ಆಡಬೇಕಿದೆ. ಸದ್ಯ ಐಪಿಎಲ್​ನಲ್ಲಿ ಪ್ರಚಂಡ ಬ್ಯಾಟಿಂಗ್​ ನಡೆಸಿ ಉತ್ತಮ ಫಾರ್ಮ್​ನಲ್ಲಿರುವ ಕೊಹ್ಲಿ ಬ್ಯಾಟಿಂಗ್​ ಮೇಲೆ ಈ ಟೂರ್ನಿಯಲ್ಲೂ ಭಾರೀ ನಿರೀಕ್ಷೆ ಇರಿಸಲಾಗಿದೆ.

ಇದನ್ನೂ ಓದಿ T20 World Cup 2024 Prize Money: ದಾಖಲೆಯ ಬಹುಮಾನ ಮೊತ್ತ ಘೋಷಿಸಿದ ಐಸಿಸಿ

ರೋಹಿತ್‌ ಶರ್ಮ, ವಿರಾಟ್‌ ಕೊಹ್ಲಿ, ಸೂರ್ಯಕುಮಾರ್‌, ಹಾರ್ದಿಕ್‌ ಪಾಂಡ್ಯ, ರಿಷಭ್​ ಪಂತ್​, ಜಸ್​ಪ್ರೀತ್​ ಬುಮ್ರಾ, ಸೂರ್ಯಕುಮಾರ್​ ಇರುವ ಭಾರತ ತಂಡವನ್ನು ಬಲಿಷ್ಠ ಎನ್ನಲೇಬೇಕು. ಆದರೆ, ಭಾರತ ಪೂರ್ಣ ಎಚ್ಚರವಾಗಿಯೇ ಪ್ರತೀ ಪಂದ್ಯದಲ್ಲಿ ಕಣಕ್ಕಿಳಿಯಬೇಕು. ಎದುರಾಳಿಯನ್ನು ಒಮ್ಮೆಯೂ ಕಡೆಗಣಿಸುವುದು ಸಾಧ್ಯವೇ ಇಲ್ಲ. ಯಾರು ಯಾರನ್ನು ಕೆಡವಿ ಬೀಳಿಸುತ್ತಾರೆ ಎಂಬುದು ಟಿ20 ಮಾದರಿಯಲ್ಲಿ ಅಂದಾಜಿಸುವುದಕ್ಕೆ ಕಷ್ಟ ಸಾಧ್ಯ. ಇದಕ್ಕೆ ಉತ್ತಮ ನಿದರ್ಶನವೆಂದರೆ ಅಭ್ಯಾಸ ಪಂದ್ಯದಲ್ಲಿ ಅನುಭವಿ ಬಾಂಗ್ಲಾದೇಶಕ್ಕೆ ಕ್ರಿಕೆಟ್​ ಶಿಶು ಅಮೆರಿಕ ಸೋಲುಣಿಸಿದ್ದು. ಆದ್ದರಿಂದ ಭಾರತ ಎಚ್ಚರ ತಪ್ಪಬಾರದು. ಕೆಲವೇ ಓವರ್‌ಗಳಲ್ಲಿ ಪಂದ್ಯದ ಚಿತ್ರಣವೇ ಬದಲಾಗುವುದು ಟಿ20 ಪಂದ್ಯಗಳ ಶಕ್ತಿ.

Exit mobile version