ಬೆಂಗಳೂರು: ಭಾರತ ಮತ್ತು ನೆದರ್ಲೆಂಡ್ಸ್(IND vs NED) ನಡುವಣ ವಿಶ್ವಕಪ್ನ ಅಂತಿಮ ಲೀಗ್ ಪಂದ್ಯ ಭಾನುವಾರ ಬೆಂಗಳೂರಿನ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯದ ಪಿಚ್ ರಿಪೋರ್ಟ್, ಹವಾಮಾನ ವರದಿ ಮತ್ತು ಸಂಭಾವ್ಯ ತಂಡದ ಮಾಹಿತಿ ಇಂತಿದೆ.
ಹವಾಮಾನ ವರದಿ
ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಮಳೆಯಾಗಿಲ್ಲ. ಸದ್ಯ ಭಾನುವಾರವೂ ಮಳೆ ಬರುವಂತೆ ಕಾಣುತ್ತಿಲ್ಲ. ಆದರೂ ಹವಾಮಾನ ಇಲಾಖೆ ಶೇ.3 ಪ್ರತಿಶತದಷ್ಟು ಮಾತ್ರ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ತೇವಾಂಶವು ಶೇಕಡಾ 45 ರಷ್ಟಿದ್ದರೆ, ಮೋಡ ಶೇಕಡಾ 18 ರಷ್ಟಿರುತ್ತದೆ. ಇದಲ್ಲದೆ, ತಾಪಮಾನವು 16 ರಿಂದ 28 ಡಿಗ್ರಿ ಸೆಲ್ಸಿಯಸ್ ನಡುವೆ ಇರುತ್ತದೆ ಎಂದು ವರದಿಯಲ್ಲಿ ತಿಳಿಸಿದೆ. ಒಂದೊಮ್ಮೆ ಮಳೆ ಬಂದರೂ ಭಾರತಕ್ಕೆ ಯಾವುದೇ ನಷ್ಟ ಸಂಭವಿಸುದಿಲ್ಲ. ಕಾರಣ ಭಾರತ ಸೆಮಿಫೈನಲ್ ಪಂದ್ಯಕ್ಕೆ ಸಿದ್ಧತೆ ಆರಂಭಿಸಿದೆ. ಡಚ್ಚರ ವಿರುದ್ಧದ ಪಂದ್ಯ ಕೇವಲ ಔಪಚಾರಿಕ ಪಂದ್ಯ ಎಂದರೂ ತಪ್ಪಾಗಲಾರದು.
ಇದನ್ನೂ ಓದಿ IND vs NED: ನೆದರ್ಲೆಂಡ್ಸ್ ಪಂದ್ಯಕ್ಕೆ ಟೀಮ್ ಇಂಡಿಯಾದ ಸ್ಟಾರ್ ಆಟಗಾರರು ಅಲಭ್ಯ
ಪಿಚ್ ರಿಪೋರ್ಟ್
ಚಿನ್ನಸ್ವಾಮಿ ಸ್ಟೇಡಿಯಂನ ಪಿಚ್ ಸಂಪೂರ್ಣ ಬ್ಯಾಟಿಂಗ್ ಟ್ರ್ಯಾಕ್ ಆಗಿದೆ. ಇಲ್ಲಿ 300 ಪ್ಲಸ್ ರನ್ಗೆ ಯಾವುದೇ ಕೊರತೆಯಾಗದು. ಪಿಚ್ 22 ಯಾರ್ಡ್ಗಳಷ್ಟು ಉದ್ದವಾಗಿದೆ ಮತ್ತು ಬೌಂಡರಿ ಲೈನ್ ಕೂಡ ಚಿಕ್ಕದಾಗಿದೆ. ಹೀಗಾಗಿ ಬ್ಯಾಟರ್‌ಗಳಿಗೆ ಇಲ್ಲಿ ಉತ್ತಮ ಸ್ಕೋರ್ ಮಾಡಲು ಸಹಕಾರಿಯಾಗಿದೆ. ಕನ್ನಡಿಗ ಕೆ.ಎಲ್ ರಾಹುಲ್ ಅವರಿಗೆ ಇದು ತವರಿನ ಪಂದ್ಯ. ಇದೇ ಕ್ರೀಡಾಂಗಣದಲ್ಲಿ ಅವರು ಆಡಿ ಬೆಳದದ್ದು. ಕೊಹ್ಲಿಗೂ ಈ ಪಿಚ್ನಲ್ಲಿ ಆಡಿದ ಅಪಾರ ಅನುಭವವಿದೆ. ಏಕೆಂದರೆ ಐಪಿಎಲ್ನಲ್ಲಿ ಅವರು ಆರ್ಸಿಬಿ ಪರ ಆಡುತ್ತಿದ್ದಾರೆ. ಅಲ್ಲದೆ ಆರ್ಸಿಬಿ ಬೌಲರ್ ಸಿರಾಜ್ಗೂ ಈ ಪಿಚ್ ಬೌಲಿಂಗ್ನಲ್ಲಿ ನೆರವು ನೀಡಬಹುದು.
ಸ್ಟಾರ್ ಆಟಗಾರರಿಗೆ ವಿಶ್ರಾಂತಿ ಸಾಧ್ಯತೆ
ಮೂಲಗಳ ಪ್ರಕಾರ ಈ ಪಂದ್ಯಕ್ಕೆ ತಂಡದ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ ಅವರಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಸೆಮಿಫೈನಲ್ ದೃಷ್ಟಿಯಿಂದ ಈ ಆಟಗಾರರಿಗೆ ವಿಶ್ರಾಂತಿ ನೀಡುವ ಬಗ್ಗೆ ಚಿಂತಿಸಲಾಗಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಇನ್ಸೈಡ್ ಸ್ಪೋರ್ಟ್ಸ್ ವರದಿ ಮಾಡಿದೆ. ಒಂದೊಮ್ಮೆ ವಿರಾಟ್, ಜಡೇಜಾ ಮತ್ತು ಬುಮ್ರಾ ಅವರು ಈ ಪಂದ್ಯದಿಂದ ಹೊರಗುಳಿದರೆ ಅವರ ಸ್ಥಾನದಲ್ಲಿ ಇಶಾನ್ ಕಿಶನ್/ಶಾರ್ದೂಲ್ ಠಾಕೂರ್, ಆರ್.ಅಶ್ವಿನ್ ಮತ್ತು ಪ್ರಸಿದ್ಧ್ ಕೃಷ್ಣ ಆಡಬಹುದು.
ಇದನ್ನೂ ಓದಿ IND vs NED: ರೋಚಕವಾಗಿತ್ತು ಭಾರತ-ನೆದರ್ಲೆಂಡ್ಸ್ ಮೊದಲ ವಿಶ್ವಕಪ್ ಮುಖಾಮುಖಿ
ಜೋಶ್ ತುಂಬಲಿದ್ದಾರೆ ಕೊಹ್ಲಿ ಅಭಿಮಾನಿಗಳು
ಬೆಂಗಳೂರಿನಲ್ಲಿ ವಿರಾಟ್ ಕೊಹ್ಲಿಗೆ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಹೀಗಾಗಿ ಸಹಜವಾಗಿಯೇ ಪಂದ್ಯಕ್ಕೆ ಅವರ ಅಭಿಮಾನಿಗಳು ಜೋಶ್ ತುಂಬಲಿದ್ದಾರೆ. ಈ ಪಂದ್ಯದ ಟಿಕೆಟ್ಗಳು ಸೋಲ್ಡ್ ಔಟ್ ಆಗಿದೆ.
Then. Now. Forever ❤️🔥
— Royal Challengers Bangalore (@RCBTweets) November 9, 2023
Bengaluru loves you back the same, King 👑🏠#PlayBold #TeamIndia #CWC23 #ViratKohli #ನಮ್ಮRCB @imVkohli
pic.twitter.com/P4RoV1iejU
ಸಂಭಾವ್ಯ ತಂಡ
ಭಾರತ: ರೋಹಿತ್ ಶರ್ಮ(ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್/ಶಾರ್ದೂಲ್ ಠಾಕೂರ್, ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್, ಕುಲ್ದೀಪ್ ಯಾದವ್, ಆರ್. ಅಶ್ವಿನ್, ಸೂರ್ಯಕುಮಾರ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.
ನೆದರ್ಲೆಂಡ್ಸ್: ವಿಕ್ರಮಜಿತ್ ಸಿಂಗ್, ಮ್ಯಾಕ್ಸ್ ಓ ಡೌಡ್, ಕಾಲಿನ್ ಅಕರ್ಮನ್, ಸ್ಕಾಟ್ ಎಡ್ವರ್ಡ್ಸ್, ಬಾಸ್ ಡಿ ಲೀಡೆ, ತೇಜಾ ನಿಡಮನೂರು, ಸಾಕಿಬ್ ಜುಲ್ಫಿಕರ್, ಲೋಗನ್ ವ್ಯಾನ್ ಬೀಕ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ಆರ್ಯನ್ ದತ್, ಪಾಲ್ ವ್ಯಾನ್ ಮೀಕೆರೆನ್.