ರಾಯ್ಪುರ: ನ್ಯೂಜಿಲ್ಯಾಂಡ್(IND VS NZ) ವಿರುದ್ಧದ ದ್ವಿತೀಯ ಏಕದಿನ ಪಂದ್ಯದ ವೇಳೆ ಪುಟ್ಟ ಅಭಿಯಾನಿಯೊಬ್ಬ ಮೈದಾನದಕ್ಕೆ ನುಗ್ಗಿದ ಘಟನೆ ನಡೆದಿದೆ. ಭಾರತ ಬ್ಯಾಟಿಂಗ್ ನಡೆಸುತ್ತಿದ್ದ ವೇಳೆ ಗ್ಯಾಲರಿಯಿಂದ ಓಡಿ ಬಂದ ಬಾಲಕ ರೋಹಿತ್ ಶರ್ಮಾ ಅವರನ್ನು ತಬ್ಬಿಕೊಂಡಿದ್ದಾನೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಭಾರತದ ಬ್ಯಾಟಿಂಗ್ ಇನಿಂಗ್ಸ್ನ 10ನೇ ಓವರ್ ವೇಳೆ ಬಾಲಕನೊಬ್ಬ ಭದ್ರತಾ ಸಿಬ್ಬಂದಿಗಳ ಕಣ್ಣು ತಪ್ಪಿಸಿ ಮೈದಾನಕ್ಕೆ ಆಗಮಿಸಿದ್ದಾನೆ. ನೇರವಾಗಿ ಓಡಿ ಬಂದು ಕ್ರೀಸ್ನಲ್ಲಿದ್ದ ರೋಹಿತ್ ಶರ್ಮಾರನ್ನು ತಬ್ಬಿಕೊಂಡಿದ್ದಾನೆ. ಈ ಅನಿರೀಕ್ಷಿತ ಘಟನೆಯಿಂದ ಒಂದು ಕ್ಷಣ ರೋಹಿತ್ ವಿಚಲಿತರಾದರು. ಅಷ್ಟರಲ್ಲಿ ಭದ್ರತಾ ಸಿಬ್ಬಂದಿಗಳು ಬಾಲಕನನ್ನು ವಶಕ್ಕೆ ಪಡೆದರು. ಆದರೆ ಆತನಿಗೆ ಏನೂ ಮಾಡದಂತೆ ರೋಹಿತ್ ಶರ್ಮಾ ಸೂಚಿಸಿದ್ದಾರೆ. ಈ ವಿಡಿಯೊ ವೈರಲ್ ಆಗಿದೆ.
ಈ ಪಂದ್ಯದಲ್ಲಿ ಭಾರತ ತಂಡ 8 ವಿಕೆಟ್ಗಳ ಗೆಲುವು ಸಾಧಿಸಿ ಸರಣಿಯನ್ನು ವಶಪಡಿಸಿಕೊಂಡಿದೆ. ರೋಹಿತ್ ಶರ್ಮಾ 51 ರನ್ ಗಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ರೋಹಿತ್ ಅವರ ಅರ್ಧಶತಕದ ಇನಿಂಗ್ಸ್ನಲ್ಲಿ 7 ಬೌಂಡರಿ ಮತ್ತು 2 ಸಿಕ್ಸರ್ ಸಿಡಿಯಿತು.
ಇದನ್ನೂ ಓದಿ | IND VS NZ: ರಾಯ್‌ಪುರದಲ್ಲಿ ಟೀಮ್ ಇಂಡಿಯಾದ ರಾಯಭಾರ; ಕಿವೀಸ್ ವಿರುದ್ಧ 8 ವಿಕೆಟ್ ಗೆಲುವು