ರಾಯ್ಪುರ: ಭಾರತ ಮತ್ತು ನ್ಯೂಜಿಲ್ಯಾಂಡ್(IND VS NZ) ವಿರುದ್ಧದ ದ್ವಿತೀಯ ಏಕದಿನ ಪಂದ್ಯ ಶನಿವಾರ ರಾಯ್ಪುರದಲ್ಲಿ ನಡೆಯಲಿದೆ. ಈಗಾಗಲೇ ಮೊದಲ ಪಂದ್ಯ ಗೆದ್ದಿರುವ ರೋಹಿತ್ ಪಡೆ ಈ ಪಂದ್ಯದಲ್ಲಿಯೂ ಮೇಲುಗೈ ಸಾಧಿಸುವ ಯೋಜನೆಯಲ್ಲಿದೆ. ಈ ಪಂದ್ಯದ ಪಿಚ್ ರಿಪೋರ್ಟ್ ಮತ್ತು ಆಡುವ ಬಳಗದ ಮಾಹಿತಿ ಇಂತಿದೆ.
ರಾಯ್ಪುರದ ಶಾಹೀದ್ ವೀರ್ ನಾರಾಯಣ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯ ಇದಾಗಿದೆ. ಜತೆಗೆ ಮೊದಲ ಅಂತಾರಾಷ್ಟ್ರೀಯ ಪಂದ್ಯವೂ ಇದಾಗಿದೆ. ಆದರೆ ಐಪಿಎಲ್, ದೇಶೀಯ ಟಿ20, ರೋಡ್ ಸೇಫ್ಟಿ ಕ್ರಿಕೆಟ್ ಟೂರ್ನಿಯ ಪಂದ್ಯಗಳು ಇಲ್ಲಿ ನಡೆದಿದೆ. ಈ ಟೂರ್ನಿಗಳ ಫಲಿತಾಂಶವನ್ನು ನೋಡುವುದಾದರೆ ಚೇಸಿಂಗ್ ಮಾಡಿದ ತಂಡಗಳೇ ಹೆಚ್ಚು ಗೆಲುವು ಸಾಧಿಸಿದೆ. ಈ ನಿಟ್ಟಿನಲ್ಲಿ ಟಾಸ್ ಗೆದ್ದ ತಂಡ ಬೌಲಿಂಗ್ ಆಯ್ಕೆ ಮಾಡುವ ಸಾಧ್ಯತೆ ಇದೆ.
ಪಿಚ್ ರಿಪೋರ್ಟ್
ಶಾಹೀದ್ ವೀರ್ ನಾರಾಯಣ ಸಿಂಗ್ ಸ್ಟೇಡಿಯಂನ ಪಿಚ್ ಬ್ಯಾಟರ್ಗಳಿಗೆ ನೆರವಾಗಲಿದೆ. ಇಲ್ಲಿ ನಡೆದ ದೇಶಿಯ ಟಿ20 ಪಂದ್ಯದಲ್ಲಿ 200 ಪ್ಲಸ್ ರನ್ ದಾಖಲಾಗಿದೆ. ಹೀಗಾಗಿ ಈ ಪಂದ್ಯದಲ್ಲಿಯೂ ದೊಡ್ಡ ಮೊತ್ತವನ್ನು ನಿರೀಕ್ಷಿಸಬಹುದು. ಆದರೆ ಇಲ್ಲಿ ಮೊದಲ ಏಕದಿನ ಪಂದ್ಯ ನಡೆಯುತ್ತಿರುವುದರಿಂದ ಪಿಚ್ ಹೇಗೆ ವರ್ತಿಸಲಿದೆ ಎನ್ನುವುದು ಕೂಡ ಮುಖ್ಯವಾಗಿದೆ.
ಸಂಭಾವ್ಯ ತಂಡ
ಭಾರತ: ರೋಹಿತ್ ಶರ್ಮ (ನಾಯಕ), ಶುಭ್‌ಮನ್ ಗಿಲ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್/ಉಮ್ರಾನ್ ಮಲಿಕ್ , ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್
ನ್ಯೂಜಿಲ್ಯಾಂಡ್: ಟಾಮ್ ಲಾಥಮ್ (ನಾಯಕ), ಫಿನ್ ಅಲೆನ್, ಡೆವೋನ್ ಕಾನ್ವೆ, ಹೆನ್ರಿ ನಿಕೋಲ್ಸ್, ಡ್ಯಾರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮೈಕಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್, ಹೆನ್ರಿ ಶಿಪ್ಲೆ, ಲ್ಯಾಕಿ ಫರ್ಗ್ಯುಸನ್, ಬ್ಲೇರ್ ಟಿಕ್ನರ್.
ಇದನ್ನೂ ಓದಿ | INDvsNZ ODI | ನ್ಯೂಜಿಲ್ಯಾಂಡ್ ವಿರುದ್ಧ ಭಾರತ ತಂಡವನ್ನು ಗೆಲ್ಲಿಸಿದ್ದು ನಾಯಕ ರೋಹಿತ್ ಶರ್ಮಾ ಅಲ್ಲ, ವಿರಾಟ್ ಕೊಹ್ಲಿ!