ಅಹಮದಾಬಾದ್: ಪ್ರವಾಸಿ ನ್ಯೂಜಿಲ್ಯಾಂಡ್(IND VS NZ) ವಿರುದ್ಧದ ಅಂತಿಮ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ನಡೆಸಲು ನಿರ್ಧರಿಸಿದೆ. ಟಾಸ್ ಸೋತ ಕಿವೀಸ್ ಮೊದಲು ಬೌಲಿಂಗ್ ನಡೆಸಲಿದೆ. ಭಾರತ ಈ ಪಂದ್ಯಕ್ಕೆ ಒಂದು ಬದಲಾವಣೆ ಮಾಡಿದೆ. ಯಜುವೇಂದ್ರ ಚಹಲ್ ಬದಲು ಉಮ್ರಾನ್ ಮಲಿಕ್ಗೆ ಅವಕಾಶ ನೀಡಿದೆ. ಅತ್ತ ಕಿವೀಸ್ ಪರ ಜಾಕೋಬ್ ಡಫ್ಫಿ ಬದಲು ಬೆನ್ ಲಿಸ್ಟರ್ ಆಡುವ ಬಳಗದಲ್ಲಿ ಅವಕಾಶ ಪಡೆದಿದ್ದಾರೆ.
ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದ್ದು, ಇಲ್ಲಿ ಇದುವರೆಗೆ 6 ಟಿ20 ಪಂದ್ಯಗಳು ನಡೆದಿವೆ. ಇದರಲ್ಲಿ ಭಾರತ 4ರಲ್ಲಿ ಗೆಲುವು ಸಾಧಿಸಿದೆ. ಉಳಿದ ಎರಡು ಪಂದ್ಯಗಳಲ್ಲಿ ಮಾತ್ರ ಪ್ರವಾಸಿ ತಂಡ ಮೇಲುಗೈ ಸಾಧಿಸಿದೆ. ಈ ಲೆಕ್ಕಾಚಾರದಲ್ಲಿ ಭಾರತ ಬಲಿಷ್ಠವಾಗಿ ಗೋಚರಿಸಿದೆ.
ಪಿಚ್ ರಿಪೋರ್ಟ್
ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದ ಪಿಚ್ ಬ್ಯಾಟಿಂಗ್ ಸ್ನೇಹಿಯಾಗಿದೆ. ಇಲ್ಲಿ ಭಾರತ 2021ರಲ್ಲಿ ಇಂಗ್ಲೆಂಡ್ ವಿರುದ್ಧ ಆಡಿದ ಟಿ20 ಪಂದ್ಯದಲ್ಲಿ 224 ರನ್ ಪೇರಿಸಿದೆ. ಆದ್ದರಿಂದ ಈ ಪಂದ್ಯದಲ್ಲಿಯೂ ಹೈ ಸ್ಕೋರ್ ದಾಖಲಾಗುವ ಸಾಧ್ಯತೆ ಇದೆ.
ಭಾರತ: ಹಾರ್ದಿಕ್ ಪಾಂಡ್ಯ (ನಾಯಕ), ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಶುಭ್ಮನ್ ಗಿಲ್, ದೀಪಕ್ ಹೂಡ, ರಾಹುಲ್ ತ್ರಿಪಾಠಿ,ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಅರ್ಶ್ದೀಪ್ ಸಿಂಗ್ ಉಮ್ರಾನ್ ಮಲಿಕ್, ಶಿವಂ ಮಾವಿ.
ಇದನ್ನೂ ಓದಿ IND VS NZ: ಭಾರತ-ಕಿವೀಸ್ 2ನೇ ಟಿ20 ಪಂದ್ಯದ ಕಳಪೆ ಪಿಚ್: ಲಕ್ನೋ ಪಿಚ್ ಕ್ಯುರೇಟರ್ ವಜಾ
ನ್ಯೂಜಿಲ್ಯಾಂಡ್ : ಮಿಚೆಲ್ ಸ್ಯಾಂಟ್ನರ್ (ನಾಯಕ) ಫಿನ್ ಅಲೆನ್, ಡೆವೊನ್ ಕಾನ್ವೇ, ಮಾರ್ಕ್ ಚಾಪ್‌ಮನ್, ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಮೈಕೆಲ್ ಬ್ರೇಸ್‌ವೆಲ್, ಇಶ್ ಸೋಧಿ, ಲಾಕಿ ಫರ್ಗ್ಯೂಸನ್, ಬೆನ್ ಲಿಸ್ಟರ್, ಬ್ಲೇರ್ ಟಿಕ್ನರ್.