ಹೈದರಾಬಾದ್: ಏಕ ದಿನ ಸರಣಿಯ ಮೊದಲ ಪಂದ್ಯದಲ್ಲಿ ಪ್ರವಾಸಿ ನ್ಯೂಜಿಲ್ಯಾಂಡ್(IND VS NZ) ವಿರುದ್ಧ ಟಾಸ್ ಗೆದ್ದ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಹೀಗಾಗಿ ನ್ಯೂಜಿಲ್ಯಾಂಡ್ ಮೊದಲು ಬೌಲಿಂಗ್ ನಡೆಸಲಿದೆ.
ಹೈದರಾಬಾದ್ನ ರಾಜೀವ್ ಗಾಂಧಿ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ಈ ಹಣಾಹಣಿ ನಡೆಯುತ್ತಿದೆ. ಈಗಾಗಲೇ ಪ್ರವಾಸಿ ಶ್ರೀಲಂಕಾ ವಿರುದ್ಧ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಕ್ಲೀನ್ ಸ್ವೀಪ್ ಮೂಲಕ ಗೆದ್ದ ರೋಹಿತ್ ಪಡೆ ಈ ಪಂದ್ಯದಲ್ಲಿಯೂ ಮೇಲುಗೈ ಸಾಧಿಸುವ ಇರಾದೆಯಲ್ಲಿ ಆಡಲಿಳಿದಿದೆ.
ಬಾಂಗ್ಲಾದೇಶ ವಿರುದ್ಧದ ಸರಣಿ ವೇಳೆ ಅತೀವೇಗದ ದ್ವಿಶತಕ ಬಾರಿಸಿದ್ದ ಇಶಾನ್ ಕಿಶನ್ ಅವರು ಕೀಪಿಂಗ್ ಹೊಣೆ ಹೊತ್ತಿದ್ದಾರೆ. ಗಾಯಗೊಂಡು ಸರಣಿಯಿಂದ ಹೊರಬಿದ್ದ ಶ್ರೇಯಸ್ ಅಯ್ಯರ್ ಬದಲು ಸೂರ್ಯಕುಮಾರ್ ಆಡುವ ಬಳಗದಲ್ಲಿ ಅವಕಾಶ ಪಡೆದರು.
ತಂಡಗಳು
ಭಾರತ: ರೋಹಿತ್ ಶರ್ಮ (ನಾಯಕ), ಶುಭ್‌ಮನ್ ಗಿಲ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್
ನ್ಯೂಜಿಲ್ಯಾಂಡ್: ಟಾಮ್ ಲಾಥಮ್ (ನಾಯಕ), ಫಿನ್ ಅಲೆನ್, ಡೆವೋನ್ ಕಾನ್ವೆ, ಹೆನ್ರಿ ನಿಕೋಲ್ಸ್, ಡ್ಯಾರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮೈಕಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್, ಹೆನ್ರಿ ಶಿಪ್ಲೆ, ಲ್ಯಾಕಿ ಫರ್ಗ್ಯುಸನ್, ಬ್ಲೇರ್ ಟಿಕ್ನರ್.
ಇದನ್ನೂ ಓದಿ | Virat Kohli | ಕಿವೀಸ್ ವಿರುದ್ಧದ ಸರಣಿಯಲ್ಲೂ ವಿರಾಟ್ ಕೊಹ್ಲಿಗಿದೆ ಹಲವು ದಾಖಲೆ ನಿರ್ಮಿಸುವ ಅವಕಾಶ!