ರಾಯ್ಪುರ: ಪ್ರವಾಸಿ ನ್ಯೂಜಿಲ್ಯಾಂಡ್(IND VS NZ) ವಿರುದ್ಧದ ಏಕ ದಿನ ಸರಣಿಯ ದ್ವಿತೀಯ ಪಂದ್ಯದಲ್ಲಿ ಟಾಸ್ ಗೆದ್ದ ರೋಹಿತ್ ಶರ್ಮ ಮೊದಲು ಬೌಲಿಂಗ್ ನಡೆಸಲು ನಿರ್ಧರಿಸಿದ್ದಾರೆ. ಟಾಮ್ ಲ್ಯಾಥಮ್ ಪಡೆ ಮೊದಲು ಬ್ಯಾಟಿಂಗ್ ನಡೆಸಲಿದೆ. ಈ ಪಂದ್ಯಕ್ಕಾಗಿ ಉಭಯ ತಂಡಗಳು ಯಾವುದೇ ಬದಲಾವಣೆ ಮಾಡಿಲ್ಲ. ಮೊದಲ ಪಂದ್ಯದಲ್ಲಿ ಆಡಿದ ತಂಡವನ್ನೇ ಕಣಕ್ಕಿಳಿಸಿವೆ.
ರಾಯ್ಪುರದ ಶಾಹೀದ್ ವೀರ್ ನಾರಾಯಣ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯ ಟಾಮ್ ಲ್ಯಾಥಮ್ ಪಡೆಗೆ ಮಸ್ಟ್ ವಿನ್ ಗೇಮ್ ಆಗಿದೆ. ಏಕೆಂದರೆ ಮೂರು ಪಂದ್ಯಗಳ ಸರಣಿಯಲ್ಲಿ ಈಗಾಗಲೇ ಕಿವೀಸ್ ಮೊದಲ ಪಂದ್ಯ ಸೋಲು ಕಂಡಿದೆ. ಸರಣಿಯನ್ನು ಜೀವಂತವಿರಿಸಬೇಕಿದ್ದರೆ ಕಿವೀಸ್ಗೆ ಈ ಪಂದ್ಯದಲ್ಲಿ ಗೆಲುವು ಅತ್ಯಗತ್ಯ. ಹೀಗಾಗಿ ಈ ಪಂದ್ಯ ಹೈವೋಲ್ಟೇಜ್ ಎಂದು ನಿರೀಕ್ಷಿಸಬಹುದು.
ಪಿಚ್ ರಿಪೋರ್ಟ್
ಶಾಹೀದ್ ವೀರ್ ನಾರಾಯಣ ಸಿಂಗ್ ಸ್ಟೇಡಿಯಂನ ಪಿಚ್ ಬ್ಯಾಟರ್ಗಳಿಗೆ ಹೆಚ್ಚು ನೆರವಾಗಲಿದೆ. ಇಲ್ಲಿ ನಡೆದ ದೇಶಿಯ ಟಿ20 ಪಂದ್ಯದಲ್ಲಿ 200 ಪ್ಲಸ್ ರನ್ ದಾಖಲಾಗಿದೆ. ಹೀಗಾಗಿ ಈ ಪಂದ್ಯದಲ್ಲಿಯೂ ದೊಡ್ಡ ಮೊತ್ತವನ್ನು ನಿರೀಕ್ಷಿಸಬಹುದು. ಆದರೆ ಇಲ್ಲಿ ಮೊದಲ ಏಕದಿನ ಪಂದ್ಯ ನಡೆಯುತ್ತಿರುವುದರಿಂದ ಪಿಚ್ ಹೇಗೆ ವರ್ತಿಸಲಿದೆ ಎನ್ನುವುದು ಕೂಡ ಮುಖ್ಯವಾಗಿದೆ.
ಸಂಭಾವ್ಯ ತಂಡ
ಭಾರತ: ರೋಹಿತ್ ಶರ್ಮ (ನಾಯಕ), ಶುಭ್‌ಮನ್ ಗಿಲ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್/ಉಮ್ರಾನ್ ಮಲಿಕ್ , ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್
ನ್ಯೂಜಿಲ್ಯಾಂಡ್: ಟಾಮ್ ಲಾಥಮ್ (ನಾಯಕ), ಫಿನ್ ಅಲೆನ್, ಡೆವೋನ್ ಕಾನ್ವೆ, ಹೆನ್ರಿ ನಿಕೋಲ್ಸ್, ಡ್ಯಾರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮೈಕಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್, ಹೆನ್ರಿ ಶಿಪ್ಲೆ, ಲ್ಯಾಕಿ ಫರ್ಗ್ಯುಸನ್, ಬ್ಲೇರ್ ಟಿಕ್ನರ್.
ಇದನ್ನೂ ಓದಿ | IND VS SA | ವನಿತೆಯರ ಟಿ20; ದಕ್ಷಿಣ ಆಫ್ರಿಕಾ ಮಣಿಸಿ ಗೆಲುವಿನ ಶುಭಾರಂಭ ಕಂಡ ಭಾರತ