ವೆಲ್ಲಿಂಗ್ಟನ್: ಪ್ರವಾಸಿ ಭಾರತ ಮತ್ತು ಆತಿಥೇಯ ನ್ಯೂಜಿಲ್ಯಾಂಡ್ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಸ್ಥಾನ ಪಡೆದಿದ್ದ ಕೇರಳ ಮೂಲದ ಕ್ರಿಕೆಟಿಗ ಸಂಜು ಸ್ಯಾಮ್ಸನ್ ಅವರನ್ನು ಎರಡನೇ ಏಕದಿನ ಪಂದ್ಯದಿಂದ ಕೈಬಿಟ್ಟಿದಕ್ಕೆ ಅಭಿಮಾನಿಗಳು ಬಿಸಿಸಿಐ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನ್ಯೂಜಿಲ್ಯಾಂಡ್ ವಿರುದ್ಧದ ದ್ವಿತೀಯ ಏಕದಿನ ಪಂದ್ಯದಲ್ಲಿ ಟಾಸ್ ಸೋತು ಭಾರತ ಮೊದಲು ಬ್ಯಾಟಿಂಗ್ ನಡೆಸುವ ಅವಕಾಶ ಪಡೆಯಿತು. ಆದರೆ ಈ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಅವರಿಗೆ ಅವಕಾಶ ನೀಡದಕ್ಕೆ ಅಭಿಮಾನಿಗಳು ನಾಯಕ ಶಿಖರ್ ಧವನ್ ಹಾಗೂ ಟೀಮ್ ಇಂಡಿಯಾ ಮ್ಯಾನೇಜ್‌ಮೆಂಟ್ ವಿರುದ್ಧ ಕಿಡಿಕಾರಿದ್ದಾರೆ.
ಸತತ ಬ್ಯಾಟಿಂಗ್ ವೈಫಲ್ಯ ಕಾಣುತ್ತಿರುವ ರಿಷಭ್ ಪಂತ್‌ಗೆ ಅವಕಾಶ ನೀಡಿ ಸಂಜು ಸ್ಯಾಮ್ಸನ್ ಅವರನ್ನು ಹೊರಗಿಟ್ಟಿದ್ದು ಸರಿಯಾದ ಕ್ರಮವಲ್ಲ. ಎಲ್ಲದಕ್ಕೂ ಒಂದು ಮಿತಿ ಇದೆ. ಏಕ ದಿನ ಕ್ರಿಕೆಟ್‌ನಲ್ಲಿ ಸಂಜು ಸ್ಯಾಮ್ಸನ್ ಸ್ಥಿರ ಪ್ರದರ್ಶನ ನೀಡುತ್ತಾ ಬಂದಿದ್ದರೂ ಕೂಡಾ ಅವರನ್ನು ತಂಡದಿಂದ ಹೊರಗಿಟ್ಟಿದ್ದೇಕೆ ಎಂದು ಅಭಿಮಾನಿಗಳು ಮ್ಯಾನೇಜ್‌ಮೆಂಟ್‌ಗೆ ಪ್ರಶ್ನಿಸಿದ್ದಾರೆ.
ಸಂಜು ಸ್ಯಾಮ್ಸನ್, ನ್ಯೂಜಿಲ್ಯಾಂಡ್ ಎದುರಿನ ಮೂರು ಪಂದ್ಯಗಳ ಟಿ20 ಸರಣಿಗೆ ಆಯ್ಕೆಯಾಗಿದ್ದರೂ ಸಹಾ, ಒಂದೇ ಒಂದು ಪಂದ್ಯ ಆಡಲು ಅವಕಾಶ ಸಿಕ್ಕಿರಲಿಲ್ಲ. ಇನ್ನು ಇದೇ ವೇಳೆ ರಿಷಭ್ ಪಂತ್‌ಗೆ ಎಲ್ಲ ಪಂದ್ಯಗಳಲ್ಲೂ ಅವಕಾಶ ಸಿಕ್ಕಿದರೂ ಅಲ್ಪ ಮೊತ್ತಕ್ಕೆ ವಿಕೆಟ್ ಒಪ್ಪಿಸುವ ಮೂಲಕ ನಿರಾಸೆ ಮೂಡಿಸುತ್ತಲೇ ಬಂದಿದ್ದಾರೆ. ಹೀಗಿದ್ದರೂ ಪಂತ್‌ಗೆ ಸ್ಥಾನ ನೀಡಿ ಸ್ಯಾಮ್ಸನ್ ಅವರನ್ನು ಕೈಬಿಟ್ಟಿದ್ದರ ಬಗ್ಗೆ ನೆಟ್ಟಿಗರು ಸೇರಿ ಅಭಿಮಾನಿಗಳು ಟ್ವಿಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ.
ಇದನ್ನೂ ಓದಿ | Suresh Raina | 36ನೇ ವರ್ಷಕ್ಕೆ ಕಾಲಿಟ್ಟ ಸುರೇಶ್ ರೈನಾ