ಹೈದರಾಬಾದ್: ಭಾರತ ಮತ್ತು ನ್ಯೂಜಿಲ್ಯಾಂಡ್(IND VS NZ) ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಹೈದರಾಬಾದ್ನಲ್ಲಿ ನಡೆಯಲಿದೆ. ಈ ಪಂದ್ಯ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ಗೆ ತವರಿನ ಪಂದ್ಯವಾಗಿದೆ.
ಈಗಾಗಲೇ ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಘಾತಕ ಬೌಲಿಂಗ್ ನಡೆಸಿರುವ ಸಿರಾಜ್ ಇದೀಗ ತವರಿನ ಪಂದ್ಯದಲ್ಲಿಯೂ ತಮ್ಮ ಕರಾರುವಾಕ್ ಬೌಲಿಂಗ್ ಪ್ರದರ್ಶನ ತೋರಲು ಸಜ್ಜಾಗಿದ್ದಾರೆ. ಜತೆಗೆ ತವರಿನ ಅಭಿಮಾನಿಗಳಿಗೆ ಭರಪೂರ ರಂಜನೆ ನೀಡುವ ವಿಶ್ವಾಸದಲ್ಲಿದ್ದಾರೆ. ಕಳೆದ ಲಂಕಾ ವಿರುದ್ಧದ ಸರಣಿಯಲ್ಲಿ ಸಿರಾಜ್ ಒಟ್ಟು 9 ವಿಕೆಟ್ ಉರುಳಿಸಿದ್ದರು. ಆದ್ದರಿಂದ ಈ ಸರಣಿಯಲ್ಲೂ ಅವರ ಮೇಲೆ ಹೆಚ್ಚಿನ ನಿರೀಕ್ಷೆ ಇರಿಸಲಾಗಿದೆ.
ಕಳೆದ ಒಂದು ವರ್ಷಗಳಿಂದ ಮೊಹಮ್ಮದ್ ಸಿರಾಜ್ ಟೀಮ್ ಇಂಡಿಯಾ ಪರ ಮೂರು ಮಾದರಿ ಕ್ರಿಕೆಟ್ನಲ್ಲಿ ಉತ್ತಮ ಪ್ರದರ್ಶನ ತೋರುತ್ತಿದ್ದು ವಿಕೆಟ್ ಟೇಕರ್ ಬೌಲರ್ ಆಗಿ ಗುರುತಿಸಿಕೊಂಡಿದ್ದಾರೆ. ಅವರ ಈ ಪ್ರದರ್ಶನವನ್ನು ಗಮನಿಸುವಾಗ ಭಾರತ ಆತಿಥ್ಯದಲ್ಲಿ ಇದೇ ವರ್ಷ ನಡೆಯಲಿರುವ ಏಕ ದಿನ ವಿಶ್ವ ಕಪ್ ತಂಡದಲ್ಲಿ ಸ್ಥಾನ ಪಡೆಯುವ ಎಲ್ಲ ಸಾಧ್ಯತೆಯೂ ಗೋಚರವಾಗಿದೆ.
ಸಂಭಾವ್ಯ ತಂಡ
ಭಾರತ: ರೋಹಿತ್ ಶರ್ಮಾ(ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ಶಾರ್ದೂಲ್ ಠಾಕೂರ್/ ಉಮ್ರಾನ್ ಮುಲಿಕ್, ಕುಲ್ದೀಪ್ ಯಾದವ್ , ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ , ವಾಷಿಂಗ್ಟನ್ ಸುಂದರ್/ಶಾಬಾಜ್ ಅಹ್ಮದ್
ನ್ಯೂಜಿಲ್ಯಾಂಡ್: ಟಾಮ್ ಲ್ಯಾಥಮ್(ನಾಯಕ), ಡೆವೊನ್ ಕಾನ್ವೆ, ಫಿನ್ ಅಲೆನ್, ಮೈಕೆಲ್ ಬ್ರೇಸ್ವೆಲ್/ ಮಾರ್ಕ್ ಚಾಪ್ಮನ್, ಲಾಕಿ ಫರ್ಗ್ಯೂಸನ್, ಡ್ಯಾರಿಲ್ ಮಿಚೆಲ್, ಮಿಚೆಲ್ ಸ್ಯಾಂಟ್ನರ್, ಗ್ಲೆನ್ ಫಿಲಿಪ್ಸ್, ಹೆನ್ರಿ ಶಿಪ್ಲಿ, ಇಶ್ ಸೋಧಿ, ಬ್ಲೇರ್ ಟಿಕ್.
ಇದನ್ನೂ ಓದಿ | IND VS NZ | ಮೊದಲ ಏಕದಿನ; ಕಿವೀಸ್ ಕಿವಿ ಹಿಂಡೀತೇ ಟೀಮ್ ಇಂಡಿಯಾ?