ಹೈದರಾಬಾದ್: ಪ್ರವಾಸಿ ನ್ಯೂಜಿಲ್ಯಾಂಡ್(IND VS NZ) ಮತ್ತು ಭಾರತ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಬುಧವಾರದಿಂದ ಆರಂಭವಾಗಲಿದೆ. ಉಭಯ ತಂಡಗಳ ಈ ಮುಖಾಮುಖಿ ಹೈದರಾಬಾದ್ನಲ್ಲಿ ನಡೆಯಲಿದೆ. ಈ ಪಂದ್ಯದ ಪಿಚ್ ರಿಪೋರ್ಟ್ ಮಾಹಿತಿ ಈ ಕೆಳಗಿನಂತಿದೆ.
ಪಿಚ್ ರಿಪೋರ್ಟ್
ಹೈದರಾಬಾದ್ನ ರಾಜೀವ್ ಗಾಂಧಿ ಇಂಟರ್‌ನ್ಯಾಷನಲ್ ಸ್ಟೇಡಿಯಂನ ಪಿಚ್ ಮೊದಲು ಬ್ಯಾಟಿಂಗ್ ನಡೆಸುವ ತಂಡಕ್ಕೆ ಹೆಚ್ಚು ನೆರವಾಗಲಿದೆ. ಇಲ್ಲಿ ಆಡಲಾದ ಬುಹುತೇಕ ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ತಂಡಗಳೇ ವಿಜಯಶಾಲಿಯಾಗಿದೆ. ದ್ವಿತೀಯ ಇನಿಂಗ್ಸ್ ವೇಳೆ ಈ ಪಿಚ್, ಬೌಲರ್ಗಳಿಗೆ ಹೆಚ್ಚು ಸಹಕರಿಸಲಿದೆ. ಅದರಲ್ಲೂ ಸ್ಪಿನ್ ಬೌಲರ್ಗಳಿಗೆ ಇದು ನೆಚ್ಚಿನ ತಾಣವಾಗಿದೆ. ಆದ್ದರಿಂದ ಉಭಯ ತಂಡಗಳು ಸ್ಪಿನ್ ಬೌಲಿಂಗ್ಗೆ ಹೆಚ್ಚಿನ ಪ್ರಾಧಾನ್ಯತೆ ನೀಡುವ ಸಾಧ್ಯತೆ ಇದೆ. ಜತೆಗೆ ಟಾಸ್ ಗೆದ್ದ ತಂಡ ಮೊದಲು ಬ್ಯಾಟಿಂಗ್ ಆಯ್ದುಕೊಳ್ಳಬಹುದು.
ಮುಖಾಮುಖಿ
ಭಾರತ ಮತ್ತು ನ್ಯೂಜಿಲ್ಯಾಂಡ್ ತಂಡಗಳು ಇದುವರೆಗೆ ಏಕದಿನ ಪಂದ್ಯದಲ್ಲಿ 113 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಭಾರತ 55, ನ್ಯೂಜಿಲ್ಯಾಂಡ್ 50 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಒಂದು ಪಂದ್ಯ ಡ್ರಾಗೊಂರೆ ಉಳಿದ 7 ಪಂದ್ಯಗಳು ಫಲಿತಾಂಶ ಕಂಡಿಲ್ಲ. ಬಲಾಬಲದ ಲೆಕ್ಕಾಚಾರದಲ್ಲಿ ಭಾರತ ಮುಂದಿದ್ದರೂ ಕಿವೀಸ್ ಸವಾಲನ್ನು ಕಡೆಗಣಿಸುವಂತಿಲ್ಲ. ಏಕೆಂದರೆ ನ್ಯೂಜಿಲ್ಯಾಂಡ್ ತಂಡ ಭಾರತದಲ್ಲಿ ಆಡಿದ ಸರಣಿಯಲ್ಲಿ ಹೆಚ್ಚು ಪ್ರಾಬಲ್ಯ ತೋರಿದೆ. ಹೀಗಾಗಿ ಭಾರತ ಎಚ್ಚರಿಕೆ ಆಡವಾಡುವುದು ಅಗತ್ಯ.
ಪಂದ್ಯದ ವಿವರ
ಭಾರತ vs ನ್ಯೂಜಿಲ್ಯಾಂಡ್
ದಿನಾಂಕ: ಜನವರಿ 18, 2023
ಸಮಯ: ಮಧ್ಯಾನ 01: 30ಕ್ಕೆ
ಸ್ಥಳ: ರಾಜೀವ್ ಗಾಂಧಿ ಇಂಟರ್‌ನ್ಯಾಷನಲ್ ಸ್ಟೇಡಿಯಂ, ಹೈದರಾಬಾದ್
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್
ಇದನ್ನೂ ಓದಿ | IND VS NZ | ಕರಾಚಿಯಿಂದ ಭಾರತಕ್ಕೆ ಬಂದಿಳಿದ ನ್ಯೂಜಿಲ್ಯಾಂಡ್ ಕ್ರಿಕೆಟ್ ತಂಡ!