ಅಹಮದಾಬಾದ್: ನ್ಯೂಜಿಲ್ಯಾಂಡ್(IND VS NZ) ವಿರುದ್ಧದ ಅಂತಿಮ ಟಿ20 ಪಂದ್ಯದಲ್ಲಿ ಶತಕ ಬಾರಿಸುವ ಮೂಲಕ ಶುಭಮನ್ ಗಿಲ್(shubman gill) ವಿಶೇಷ ಸಾಧನೆ ಮಾಡಿದ್ದಾರೆ. ಭಾರತ ತಂಡದ ಪರ ಮೂರೂ ಮಾದರಿಯ ಕ್ರಿಕೆಟ್ನಲ್ಲಿ ಶತಕ ಬಾರಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.
ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಅಂತಿಮ ಟಿ20 ಈ ಪಂದ್ಯದಲ್ಲಿ ಶುಭಮನ್ ಗಿಲ್ ಅಜೇಯ 126 ರನ್ ಬಾರಿಸಿ ಮಿಂಚಿದರು. ಇದೇ ವೇಳೆ ಅವರು ಮೂರೂ ಮಾದರಿಯ ಕ್ರಿಕೆಟ್ನಲ್ಲಿ ಶತಕ ಬಾರಿಸಿದ ಭಾರತದ ನಾಲ್ಕನೇ ಆಟಗಾರನಾಗಿ ಮೂಡಿಬಂದರು.
ಇದನ್ನೂ ಓದಿ IND VS NZ: ಕಿವೀಸ್ ವಿರುದ್ಧ ಶತಕ ಬಾರಿಸಿ ವಿರಾಟ್, ರೋಹಿತ್ ದಾಖಲೆ ಮುರಿದ ಗಿಲ್
ಸುರೇಶ್ ರೈನಾ ಅವರು ಭಾರತ ತಂಡದ ಪರ ಮೂರೂ ಮಾದರಿಯ ಕ್ರಿಕೆಟ್ನಲ್ಲಿ ಶತಕ ಬಾರಿಸಿದ ಮೊದಲ ಆಟಗಾರನಾಗಿದ್ದಾರೆ. ಆ ಬಳಿಕ ಕ್ರಮವಾಗಿ ರೋಹಿತ್ ಶರ್ಮ, ಕೆ. ಎಲ್ ರಾಹುಲ್, ವಿರಾಟ್ ಕೊಹ್ಲಿ ಈ ಸಾಧನೆ ಮಾಡಿದ ಆಟಗಾರರಾಗಿದ್ದಾರೆ. ಇದೀಗ ಗಿಲ್ ಕೂಡ ಈ ಪಟ್ಟಿಗೆ ಸೇರ್ಪಡೆಗೊಂಡಿದ್ದಾರೆ. ಏಕದಿನ ಕ್ರಿಕೆಟ್ನಲ್ಲಿಯೂ ಗಿಲ್ ದ್ವಿಶತಕ ಬಾರಿಸಿ ಮಿಂಚಿದ್ದರು