ಆಕ್ಲೆಂಡ್: ಆತಿಥೇಯ ನ್ಯೂಜಿಲ್ಯಾಂಡ್ ವಿರುದ್ಧ ಟೀಮ್ ಇಂಡಿಯಾ(IND VS NZ) ಮೂರು ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿಯಲ್ಲಿ ಪೈಪೋಟಿ ನಡೆಸಲಿದ್ದು, ಮೊದಲ ಹಣಾಹಣಿ ಶುಕ್ರವಾರ (ನವೆಂಬರ್ 25) ಆಕ್ಲೆಂಡ್‌ನ ಈಡನ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಹಾರ್ದಿಕ್ ಪಾಂಡ್ಯ ಸಾರಥ್ಯದಲ್ಲಿ ಟಿ20 ಕ್ರಿಕೆಟ್ ಸರಣಿ ಗೆದ್ದ ಭಾರತ ತಂಡ ಇದೀಗ ಶಿಖರ್ ಧವನ್ ನೇತೃತ್ವದಲ್ಲಿ ಏಕದಿನ ಸರಣಿಯನ್ನೂ ವಶಪಡಿಸಿಕೊಳ್ಳುವ ನಿರೀಕ್ಷೆಯಲ್ಲಿದೆ.
ಹಿರಿಯರ ಅನುಪಸ್ಥಿಯಲ್ಲಿ ಟಿ20 ಸರಣಿಯಲ್ಲಿ ಆಡಿದ್ದ ಬಹುತೇಕ ಯುವ ಆಟಗಾರೇ ಈಗ ಏಕದಿನ ಸರಣಿಯಲ್ಲೂ ಅವಕಾಶ ಪಡೆದಿದ್ದಾರೆ. ಆದರೆ ಟಿ20 ಕ್ರಿಕೆಟ್ನಂತೆ ಇಲ್ಲಿ ಹೊಡಿ ಬಡಿ ಆಟ ಸಲ್ಲದು. ತಾಳ್ಮೆ ಮತ್ತು ಇನಿಂಗ್ಸ್ ಬೆಳೆಸುವ ಸಾಮರ್ಥ್ಯ ಇಲ್ಲಿ ಬಹಳ ಮುಖ್ಯವಾಗಿದೆ. ಆದ್ದರಿಂದ ಟಿ20 ಕ್ರಿಕೆಟ್ಗೆ ಹೆಚ್ಚಾಗಿ ಒಗ್ಗಿಕೊಂಡಿರುವ ಸೂರ್ಯಕುಮಾರ್ ಯಾದವ್, ಇಶಾನ್ ಕಿಶಾನ್, ದೀಪಕ್ ಹೂಡಾ ಇಲ್ಲಿ ನಿಂತು ಆಡಬೇಕಿದೆ.
ಕೇನ್ ವಿಲಿಯಮ್ಸನ್ ಆಗಮನ
ಅಂತಿಮ ಟಿ20 ಪಂದ್ಯದಿಂದ ಹೊರಗುಳಿದಿದ್ದ ಕೇನ್ ವಿಲಿಯಮ್ಸನ್ ಮತ್ತೆ ತಂಡಕ್ಕೆ ಆಗಮಿಸಿದ್ದು ತಂಡದ ನಾಯಕತ್ವ ವಹಿಸಿದ್ದಾರೆ. ಭಾರತ ತಂಡಕ್ಕೆ ಹೋಲಿಸಿದರೆ ನ್ಯೂಜಿಲ್ಯಾಂಡ್ ತಂಡ ಬಲಿಷ್ಠವಾಗಿ ಗೋಚರಿಸಿದೆ. ತಂಡದಲ್ಲಿ ಹೆಚ್ಚಾಗಿ ಅನುಭವಿ ಆಟಗಾರರೇ ತುಂಬಿದ್ದಾರೆ. ಡೆವೋನ್ ಕಾನ್ವೆ, ಟಾಮ್ ಲ್ಯಾಥಮ್, ಡ್ಯಾರಿಲ್ ಮಿಚೆಲ್, ಟಿಮ್ ಸೌಥಿ ಅವರನ್ನೊಳಗೊಂಡ ಕಿವೀಸ್ ಹೆಚ್ಚು ಅಪಾಯಕಾರಿ. ಆದರೆ ಭಾರತದ ಯುವ ಆಟಗಾರರನ್ನು ಕಡೆಗಣಿಸುವಂತಿಲ್ಲ. ಏಕೆಂದರೆ ಭಾರತದ ಸಾಮರ್ಥ್ಯ ಟಿ20 ಸರಣಿಯಿಂದ ಸಾಬೀತಾಗಿದೆ.
ಸಂಭಾವ್ಯ ತಂಡಗಳು
ಭಾರತ
ಶಿಖರ್ ಧವನ್ (ನಾಯಕ), ಶುಬ್ಮನ್ ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್/ ರಿಷಭ್ ಪಂತ್, ಶಾರ್ದೂಲ್ ಠಾಕೂರ್, ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್, ಅರ್ಶ್‌ದೀಪ್ ಸಿಂಗ್/ ದೀಪಕ್ ಚಹಾರ್, ಉಮ್ರಾನ್ ಮಲಿಕ್.
ನ್ಯೂಜಿಲ್ಯಾಂಡ್
ನ್ಯೂಜಿಲ್ಯಾಂಡ್: ಕೇನ್ ವಿಲಿಯಮ್ಸನ್ (ನಾಯಕ), ಫಿನ್ ಅಲೆನ್, ಮೈಕೆಲ್ ಬ್ರೇಸ್‌ವೆಲ್, ಡೆವೊನ್ ಕಾನ್ವೇ, ಲಾಕಿ ಫರ್ಗ್ಯುಸನ್, ಮ್ಯಾಟ್ ಹೆನ್ರಿ, ಟಾಮ್ ಲ್ಯಾಥಮ್, ಆಡಮ್ ಮಿಲ್ನ್, ಡ್ಯಾರಿಲ್ ಮಿಚೆಲ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ.
ಇದನ್ನೂ ಓದಿ | IND VS NZ | ಏಕದಿನ ಕ್ರಿಕೆಟ್ಗೆ ಪದಾರ್ಪಣೆ ಮಾಡಲಿದ್ದಾರಾ ಅರ್ಶ್‌ದೀಪ್ ಸಿಂಗ್?