ಮೌಂಟ್ ಮೌಂಗನಿ: ಪ್ರವಾಸಿ ಭಾರತ ಮತ್ತು ಆತಿಥೇಯ ನ್ಯೂಜಿಲ್ಯಾಂಡ್ (IND VS NZ) ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿ ಪೈಕಿ ಮೊದಲ ಕದನ ಸಂಪೂರ್ಣವಾಗಿ ಮಳೆಗೆ ಆಹುತಿಯಾಗಿತ್ತು. ಶುಕ್ರವಾರ ವೆಲ್ಲಿಂಗ್ಟನ್ ಮೈದಾನದಲ್ಲಿ ನಡೆಯಬೇಕಿದ್ದ ಈ ಪಂದ್ಯ ಒಂದೂ ಎಸೆತ ಕಾಣದೆ ರದ್ದುಗೊಂಡಿತ್ತು. ಇದೀಗ ದ್ವಿತೀಯ ಟಿ20 ಪಂದ್ಯ ಕೂಡ ನಡೆಯುವುದು ಅನುಮಾನ ಎನ್ನಲಾಗಿದೆ.
ನವೆಂಬರ್ 20 ಭಾನುವಾರ ಮೌಂಟ್ ಮೌಂಗನಿ ಬೇ ಓವಲ್ ಮೈದಾನದಲ್ಲಿ ನಡೆಯಲಿರುವ ದ್ವಿತೀಯ ಟಿ20 ಪಂದ್ಯಕ್ಕೂ ಮಳೆ ಭೀತಿ ಕಾಡಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರತೀಯ ಕಾಲಮಾನದ ಪ್ರಕಾರ ಪಂದ್ಯ ಮಧ್ಯಾಹ್ನ 12 ಗಂಟೆಗೆ ಆರಂಭವಾಗಲಿದೆ. ಆದರೆ ನ್ಯೂಜಿಲ್ಯಾಂಡ್ ಕಾಲಮಾನದ ಪ್ರಕಾರ ಪಂದ್ಯ ರಾತ್ರಿ 7:30ಕ್ಕೆ ಆರಂಭವಾಗುತ್ತದೆ. ಈ ಹೊತ್ತಿಗೆ ಶೇ. 36 ರಷ್ಟು ಮಳೆ ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದರೆ ಶನಿವಾರ ಇಲ್ಲಿ ಮಳೆ ಕಾಟ ಇರಲಿಲ್ಲ. ಒಂದೊಮ್ಮೆ ಈ ಪಂದ್ಯವೂ ಮಳೆಯಿಂದ ರದ್ದಾದರೆ ಹಿರಿಯರ ಅನುಪಸ್ಥಿಯಲ್ಲಿ ಆಡಲು ಎದುರುನೋಡುತ್ತಿದ್ದ ಯುವ ಆಟಗಾರರಿಗೆ ನಿರಾಸೆಯಾಗಲಿದೆ.
ಇದನ್ನೂ ಓದಿ | IND VS NZ | ಕಿವೀಸ್ ವಿರುದ್ಧದ ಮೊದಲ ಟಿ20 ಮಳೆಯಿಂದ ರದ್ದು; ಭಾರತದ ಯುವ ಆಟಗಾರರಿಗೆ ನಿರಾಸೆ