Site icon Vistara News

IND vs PAK: ಭಾರತ-ಪಾಕ್​ ಪಂದ್ಯಕ್ಕೆ 4 ಹಂತದ ಭದ್ರತಾ ವ್ಯವಸ್ಥೆ; ಮೈದಾನಕ್ಕೆ ನುಗ್ಗಿದರೆ ಜೈಲೂಟ ಖಚಿತ!

IND vs PAK

IND vs PAK: Heightened Security Measures in New York

ನ್ಯೂಯಾರ್ಕ್​: ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ(IND vs PAK) ನಡುವಣ ಟಿ20 ವಿಶ್ವಕಪ್(T20 world cup 2024) ಪಂದ್ಯ​ಕ್ಕೆ ಕ್ಷಣಗಣನೆ ಆರಂಭವಾಗಿದೆ. ಇತ್ತಂಡಗಳ ಈ ಹೋರಾಟ ನಾಳೆ(ಜೂನ್​ 9ರಂದು) ನಡೆಯಲಿದೆ. ಈ ಪಂದ್ಯಕ್ಕೆ ಉಗ್ರರ ದಾಳಿಯ ಭೀತಿ(india vs pak terror threat) ಮತ್ತು ಅಮೆರಿಕ ವಿರುದ್ಧ ಸೋಲು ಕಂಡ ಕಾರಣ ಪಾಕ್​ಗೆ ಭಾರತ ವಿರುದ್ಧ ಗೆಲ್ಲಲೇ ಬೇಕು. ಸೋತರೆ ಟೂರ್ನಿಯಿಂದ ಹೊರಬೀಳುವ ಸಾಧ್ಯತೆ ಅಧಿಕವಾಗಿದೆ. ಹೀಗಾಗಿ ಪಂದ್ಯ ಜಿದ್ದಾಜಿದ್ದಿನಿಂದ ಕೂಡಿರುವ ನಿಟ್ಟಿನಲ್ಲಿ ಅಭಿಮಾನಿಗಳು ಕೂಡ ದೊಡ್ಡ ಸಂಖ್ಯೆಯಲ್ಲಿ ಸ್ಟೇಡಿಯಂಗೆ ಬರುವ ಸಾಧ್ಯತೆ ಇದೆ. ಇದೇ ಕಾರಣದಿಂದ ಸ್ಟೇಡಿಯಂಗೆ 4 ಹಂತದ ಭಾರೀ ಭದ್ರತೆ ಏರ್ಪಡಿಸಲಾಗಿದೆ.

ಕಳೆದ ವಾರ ಐಸಿಸ್-ಕೆ ಹೆಸರಿನ ಭಯೋತ್ಪಾದಕ ಸಂಘಟನೆಯು “ಲೋನ್ ವುಲ್ಫ್” ದಾಳಿ ನಡೆಸುವುದಾಗಿ ಘೋಷಿಸಿತ್ತು. ಹೀಗಾಗಿ ಪಂದ್ಯ ನಡೆಯುವ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ(Nassau County International Cricket Stadium)ಗೆ ನ್ಯೂಯಾರ್ಕ್​ ಪೊಲೀಸರಿಂದ ಮತ್ತು ಮಿಲಿಟರಿ ಪಡೆಯಿಂದ ಬಿಗಿ ಬಂದೋಬಸ್ತ್ ಮಾಡಲಾಗಿದೆ.

1. ಸ್ನೈಪರ್ ಗನ್​ ಕಣ್ಗಾವಲು

ನ್ಯೂಯಾರ್ಕ್​ನ(New York stadium) ವಿಶೇಷ ಮಿಲಿಟರಿ ಪಡೆ ಸ್ನೈಪರ್ ಗನ್ ಹಿಡಿದು ಸ್ಟೇಡಿಯಂನ ಮೇಲ್ಛಾವಣಿಯಲ್ಲಿ ಕಣ್ಗಾವಲಿಟ್ಟಿದೆ. ಇದರ ಫೋಟೊಗಳು ಈಗಾಗಲೇ ವೈರಲ್​ ಆಗಿದೆ.

2. ನೊ-ಫ್ಲೈ ಝೋನ್

ಪಂದ್ಯದ ವೇಳೆ ಡ್ರೋನ್ ದಾಳಿ ನಡೆಸುವ ಸಾಧ್ಯತೆ ಕೂಡ ಕಂಡುಬಂದಿರುವ ಕಾರಣ ಪಂದ್ಯ ನಡೆಯುವ ಕ್ರೀಡಾಂಗಣದ ಸುತ್ತ ‘ನೊ-ಫ್ಲೈ ಝೋನ್’ ಎಂದು ಘೋಷಿಸಲಾಗಿದೆ. ಆದರೆ, ವಿಶೇಷ ಸೇನಾ ಹೆಲಿಕಾಪ್ಟರ್‌ಗಳು ಸ್ಕೈಲೈನ್‌ನಲ್ಲಿ ಗಸ್ತು ತಿರುಗಲಿದೆ.

ಇದನ್ನೂ ಓದಿ Rohit Sharma Injury: ಪಾಕ್​ ಪಂದ್ಯಕ್ಕೂ ಮುನ್ನ ಭಾರತಕ್ಕೆ ಆತಂಕ; ಅಭ್ಯಾಸದ ವೇಳೆ ರೋಹಿತ್​ಗೆ ಗಾಯ

3. ಸಿಸಿಟಿವಿ ಕಣ್ಗಾವಲು

ಪಂದ್ಯ ನೋಡಲು ಬರುವ ಪ್ರೇಕ್ಷಕರ ಗುಂಪಿನ ಚಲನವಲನಗಳನ್ನು ಮೇಲ್ವಿಚಾರಣೆ ಮಾಡಲು ಮತ್ತು ಯಾವುದೇ ಅನುಮಾನಾಸ್ಪದ ಚಟುವಟಿಕೆಯನ್ನು ಪತ್ತೆಹಚ್ಚಲು ಸ್ಟೇಡಿಯಂ ಒಳಗಡೆ ಮತ್ತು ಹೊರಗಡೆ ಹೈಟೆಕ್ ಸಿಸಿಟಿವಿ ಕ್ಯಾಮೆರಾಗಳನ್ನು ಬಳಸಲಾಗಿದೆ. ಇದು ಕ್ರೀಡಾಂಗಣ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಳವಡಿಸಲಾಗಿದೆ.

4. ವಿಶೇಷ ಪೊಲೀಸ್​ ಪಡೆ

ನ್ಯೂಯಾರ್ಕ್ ಪೊಲೀಸ್ ಇಲಾಖೆ (NYPD) ಮತ್ತು ಇತರ ಭದ್ರತಾ ಏಜೆನ್ಸಿಗಳು ಸಮಗ್ರ ಭದ್ರತಾ ಯೋಜನೆಯನ್ನು ಕಲ್ಪಿಸಿದೆ. ಪಂದ್ಯದ ವೇಳೆ ಯಾರು ಕೂಡ ಮೈದಾನಕ್ಕೆ ನುಗ್ಗದಂತೆ ಎಚ್ಚರ ವಹಿಸಲಾಗಿದೆ. ಅಲ್ಲದೆ ಭದ್ರತಾ ನಿಯಮಗಳನ್ನು ಕೂಡ ಪ್ರಕಟಿಸಲಾಗಿದೆ. ಯಾರಾದರು ಮೈದಾನಕ್ಕೆ ನುಗ್ಗಿ ಆಟಗಾರರನ್ನು ತಬ್ಬಿಕೊಂಡರೆ ಜೈಲು ಶಿಕ್ಷೆಗೆ ಗುರಿಯಾಗುವ ಸಾಧ್ಯತೆ ಇದೆ.

ಹೈವೋಲ್ಟೇಜ್ ಕದನ ನ್ಯೂಯಾರ್ಕ್(NEW YORK) ಹೊರವಲಯದಲ್ಲಿ 34,000 ಆಸನ ಸಾಮರ್ಥ್ಯವುಳ್ಳ ತಾತ್ಕಾಲಿಕ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತ ಮತ್ತು ಪಾಕ್​ ನಡುವಣ ಪಂದ್ಯ ನ್ಯೂಯಾರ್ಕ್‌ನಲ್ಲಿಯೇ ನಡೆಸಲು ಕೂಡ ಕಾರಣ ಇದೆ. ಏಕೆಂದರೆ ಈ ಪ್ರದೇಶದಲ್ಲಿ 7,11,000 ಭಾರತೀಯ ಮತ್ತು ಸುಮಾರು 1,00,000 ಪಾಕಿಸ್ತಾನ ಮೂಲದ ಜನರು ವಾಸಿಸುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ಈ ಪಂದ್ಯ ಇಲ್ಲಿ ಏರ್ಪಡಿಸಲಾಗಿದೆ ಎನ್ನಲಾಗಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ ಕೀಪರ್​), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್​ ಸಿಂಗ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್.

ಪಾಕಿಸ್ತಾನ ತಂಡ: ಬಾಬರ್ ಅಜಂ (ನಾಯಕ), ಅಬ್ರಾರ್ ಅಹ್ಮದ್, ಅಜಮ್ ಖಾನ್, ಫಖರ್ ಜಮಾನ್, ಹ್ಯಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಇಮಾದ್ ವಾಸಿಮ್, ಮೊಹಮ್ಮದ್ ಅಬ್ಬಾಸ್ ಅಫ್ರಿದಿ, ಮೊಹಮ್ಮದ್ ಅಮೀರ್, ಮೊಹಮ್ಮದ್ ರಿಜ್ವಾನ್, ನಸೀಮ್ ಶಾ, ಸೈಮ್ ಅಯೂಬ್, ಶಾದಾಬ್ ಖಾನ್, ಶಾಹೀನ್ ಶಾಹ್ಮಾನ್ ಅಫ್ರಿದಿ, ಉಸ್ಮಾನ್ ಖಾನ್.

Exit mobile version