ಅಹಮದಾಬಾದ್: ವಿಶ್ವಕಪ್ ಟೂರ್ನಿಯ(icc world cup 2023) ವೇಳಾಪಟ್ಟಿ ಪ್ರಕಟಗೊಳ್ಳುವ ಮೊದಲೇ ಅಹಮದಾಬಾದ್‌ನ ಹೋಟೆಲ್(Ahmedabad hotel) ದರಗಳು ಗಗನಕ್ಕೇರಿತ್ತು. ಇದಕ್ಕೆ ಕಾರಣ ಇಲ್ಲಿ ನಡೆಯುವ ಭಾರತ ಮತ್ತು ಪಾಕಿಸ್ತಾನ(IND vs PAK) ನಡುವಣ ಪಂದ್ಯ. ಈ ಪಂದ್ಯವನ್ನು ನೋಡಲು ಕ್ರಿಕೆಟ್ ಅಭಿಮಾನಿಗಳು ಟಿಕೆಟ್ ದೊರೆಯುವ ಮುನ್ನವೇ ಹೋಟೆಲ್ ಬುಕಿಂಗ್ ಮಾಡಿದ್ದರು. ಆದರೆ ಟಿಕೆಟ್ ದೊರೆಯದ ಕೆಲವರು ಈಗ ಬುಕಿಂಗ್ ಕ್ಯಾನ್ಸಲ್ ಮಾಡಿದ ಕಾರಣ ಇದೀಗ ಕಡಿಮೆ ದರಕ್ಕೂ ಇಲ್ಲಿ ಹೋಟೆಲ್ ಲಭ್ಯವಾಗುತ್ತಿದೆ ಎಂದು ತಿಳಿದುಬಂದಿದೆ.
ಅಕ್ಟೋಬರ್ 14ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ ಮತ್ತು ಪಾಕ್ ಪಂದ್ಯ ನಡೆಯಲಿದೆ. ಸದ್ಯಕ್ಕೆ ಹೆಚ್ಚಿನ 5-ಸ್ಟಾರ್ ಹೋಟೆಲ್‌ಗಳು ತಮ್ಮ ಸುಂಕವನ್ನು ಶೇ. 150-200ರಷ್ಟು ಹೆಚ್ಚಿಸಿವೆ. ಕೆಲವು ಬುದ್ಧಿವಂತರು ಆಸ್ಪತ್ರೆಯ ಕೊಠಡಿಗಳನ್ನು ಬುಕ್ ಮಾಡಿದ್ದಾರೆ. ಇಲ್ಲಿನ ಸ್ಥಳೀಯ ಮಾಧ್ಯಮ ವರದಿಯ ಪ್ರಕಾರ ಈ ಮೊದಲು ಧರವನ್ನು ಹೆಚ್ಚಿಸಿದ್ದ ಹೋಟೆಲ್‌ಗಳು ಈಗ ಕಡಿಮೆಗೊಳಿಸಿವೆ ಎಂದು ತಿಳಿಸಿದೆ. ಒಂದು ಅಂದಾಜಿನ ಪ್ರಕಾರ ಈ ಬಾರಿಯ ಯಾವುದೇ ಪಂದ್ಯಕ್ಕೂ ಅಷ್ಟಾಗಿ ಜನ ಆಸಕ್ತಿ ತೋರುತಿಲ್ಲ. ಭಾರತ ಪಂದ್ಯವಿದ್ದರೂ ಸ್ಟೇಡಿಯಂ ಮಾತ್ರ ಭರ್ತಿಗೊಳ್ಳುತ್ತಿಲ್ಲ. ಕ್ರಿಕೆಟ್ ಕ್ರೇಜ್ ಕಡಿಮೆಯಾಗುತ್ತಿದ್ದಂತೆ ಪಂದ್ಯ ನಡೆಯುವ ನಗರಗಳ ಹೋಟೆಲ್ ದರವೂ ಕುಸಿಯುತ್ತಿದೆ.
ಕೆಲವು ಹೋಟೆಲ್‌ಗಳು ಈಗಾಗಲೇ ಸುಮಾರು 1 ಲಕ್ಷ ರೂ.ಗಳನ್ನು ವಿಧಿಸಿತ್ತು. ಆದರೂ ಹೆಚ್ಚಿನವು ಈಗಾಗಲೇ ಬುಕ್ಕಿಂಗ್ ಕೂಡ ಆಗಿದೆ ಎಂದು ವರದಿಯಾಗಿದೆ. ಸಾಮಾನ್ಯ ದಿನಗಳಲ್ಲಿ ನಗರದ ಐಷಾರಾಮಿ ಹೋಟೆಲ್‌ಗಳ ದರ 5ರಿಂದ 8 ಸಾವಿರ ಇರುತ್ತದೆ. ಆದರೆ ಭಾರತ ಮತ್ತು ಪಾಕ್ ಪಂದ್ಯ ನಡೆಯುವ ದಿನದಂದು ದರ 40,000 ರೂ.ಗೆ ಜಿಗಿದಿದೆ. ಆದರೂ ಕಡಿಮೆ ಖರ್ಚಿನ ಹೋಟೆಲ್‌ಗಳು ಲಭ್ಯವಿದೆ ಎಂದು ತಿಳಿದುಬಂದಿದೆ.
ವಿಶ್ವಕಪ್ ಇತಿಹಾಸದಲ್ಲಿ ಭಾರತ-ಪಾಕಿಸ್ತಾನ ತಂಡಗಳದ್ದೇ ಒಂದು ಪ್ರತ್ಯೇಕ ಇತಿಹಾಸ! ಬಗೆದಷ್ಟೂ ರೋಚಕ ಅಂಕಿಅಂಶ, ಘಟನಾವಳಿ, ರೋಮಾಂಚನ ಹಾಗೂ ಉದ್ವೇಗದ ಕ್ಷಣಗಳು ಉಕ್ಕಿ ಬರುತ್ತವೆ. ಇವುಗಳಲ್ಲಿ ಪ್ರಮುಖವಾದುದೆಂದರೆ, ಪಾಕಿಸ್ಥಾನ ವಿರುದ್ಧದ ಏಕದಿನ ವಿಶ್ವಕಪ್ ಮುಖಾಮುಖೀಯಲ್ಲಿ ಭಾರತ ಸೋಲರಿಯದ ಸರದಾರನಾಗಿ ಮೆರೆದಿರುವುದು. ಈ ಪ್ರತಿಷ್ಠಿತ ಕೂಟದಲ್ಲಿ ಆಡಿದ ಏಳೂ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಪಾಕಿಸ್ತಾನವನ್ನು ಮಣ್ಣುಮುಕ್ಕಿಸಿದೆ!. ಇದೀಗ ಎಂಟನೇ ಮುಖಾಮುಖಿಯಲ್ಲಿಯೂ ಅದರಲ್ಲೂ 7 ವರ್ಷಗಳ ಬಳಿಕ ತವರಿನಲ್ಲಿ ಮತ್ತೊಮ್ಮೆ ಸೋಲಿನ ಪಂಚ್ ನೀಡಲು ಭಾರತ ಸಜ್ಜಾಗಿದೆ. ಆದರೆ ಪಾಕ್ ಸವಾಲನ್ನು ಅಷ್ಟು ಸುಲಭವಾಗಿ ಕಡೆಗಣಿಸುವಂತಿಲ್ಲ.
ಇದನ್ನೂ ಓದಿ IND vs ENG: ಭಾರತ-ಇಂಗ್ಲೆಂಡ್ ಪಂದ್ಯಕ್ಕೆ ಸಾಕ್ಷಿಯಾಗಲಿದ್ದಾರೆ ಮೋದಿ,ಸುನಕ್
ಉಭಯ ವಿಶ್ವಕಪ್ ತಂಡಗಳು
ಪಾಕಿಸ್ತಾನ: ಬಾಬರ್ ಅಜಂ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಇಮಾಮ್ ಉಲ್ ಹಕ್, ಫಕಾರ್ ಜಮಾನ್, ಇಫ್ತಿಕಾರ್ ಅಹ್ಮದ್, ಮೊಹಮ್ಮದ್ ನವಾಜ್, ಶದಾಬ್ ಖಾನ್, ಹಸನ್ ಅಲಿ, ಹ್ಯಾರೀಸ್ ರಾವುಫ್, ಮೊಹಮ್ಮದ್ ವಾಸಿಂ, ಶಹೀನ್ ಅಫ್ರಿಧಿ, ಸೌದ್ ಶಕೀಲ್, ಸಲ್ಮಾನ್ ಅಲಿ ಆಘಾ, ಉಸ್ಮಾನ್ ಮೀರ್, ಅಬ್ದುಲ್ಲಾ ಶಫೀಕ್
ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ (ಉಪನಾಯಕ), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ , ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್.