Site icon Vistara News

IND vs PAK: ಭಾರತ-ಪಾಕ್​ ಹೈವೋಲ್ಟೇಜ್​ ಪಂದ್ಯದ ಹವಾಮಾನ ವರದಿ, ಆಡುವ ಬಳಗ ಹೇಗಿದೆ?

IND vs PAK

IND vs PAK: rain-threatens-india-vs-pakistan-t20-world-cup-2024-match-in-new-york

ನ್ಯೂಯಾರ್ಕ್​: ಕ್ರಿಕೆಟ್​ ಅಭಿಮಾನಿಗಳು ಬಹಳ ನಿರೀಕ್ಷೆಯಿಂದ ಕಾಯುತ್ತಿರುವ ಭಾರತ ಮತ್ತು ಪಾಕಿಸ್ತಾನ(IND vs PAK) ನಡುವಣ ಹೈವೋಲ್ಟೇಜ್​ ಪಂದ್ಯ ನಡೆಯುವುದು ಅನುಮಾನ ಎನ್ನುವಂತಿದೆ. ಪಂದ್ಯಕ್ಕೆ(IND vs PAK match Weather Reports) ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿದೆ.

ಮಳೆ ಭೀತಿ


ಸದ್ಯದ ಮುನ್ಸೂಚನೆಯಂತೆ ಪಂದ್ಯ ನಡೆಯುವ ಭಾನುವಾರ ನ್ಯೂಯಾರ್ಕ್​ನಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಅಕ್ಯುವೆದರ್‌ನ ಮುನ್ಸೂಚನೆಯ ಪ್ರಕಾರ ಅಮೆರಿಕದ ಕಾಲಮಾನದ ಪ್ರಕಾರ ಬೆಳಗ್ಗೆ 11 ಸುಮಾರಿಗೆ ಶೇ. 51 ಪ್ರತಿಶತದಷ್ಟು ಮಳೆಯಾಗುವ ಸಾಧ್ಯತೆಯಿದೆ ಎಂದು ತನ್ನ ವರದಿಯಲ್ಲಿ ತಿಳಿಸಿದೆ. ಭಾರತದಲ್ಲಿ ಈ ಪಂದ್ಯ ರಾತ್ರಿ ಪ್ರಸಾರವಾಗುತ್ತದೆ. ಮಳೆಯಿಂದ ಪಂದ್ಯ ರದ್ದುಗೊಂಡರೆ ಉಭಯ ತಂಡಗಳಿಗೂ ತಲಾ 1 ಅಂಕ ನೀಡಲಾಗುತ್ತದೆ. ಏಕೆಂದರೆ ಲೀಗ್​ ಪಂದ್ಯಗಳಿಗೆ ಮೀಸಲು ದಿನ ಇಲ್ಲ.

ಪಂದ್ಯದ ಪ್ರಸಾರ


ನ್ಯೂಯಾರ್ಕ್​ನಲ್ಲಿ ಈ ಪಂದ್ಯ ಹಗಲು ನಡೆದರೂ ಕೂಡ ಭಾರತದಲ್ಲಿ ರಾತ್ರಿ 8 ಗಂಟೆಗೆ ಪಂದ್ಯ ಪ್ರಸಾರಗೊಳ್ಳಲಿದೆ. ಸ್ಟಾರ್​ ಸ್ಪೋರ್ಟ್ಸ್​ ಮತ್ತು ಡಿಡಿ ದೂರದರ್ಶನದಲ್ಲಿ ಪಂದ್ಯಗಳು ನೇರಪ್ರಸಾರ ಇರಲಿದೆ. ಪಂದ್ಯದ ಲೈವ್ ಸ್ಟ್ರೀಮಿಂಗ್ ಡಿಸ್ನಿ + ಹಾಟ್‌ಸ್ಟಾರ್‌ ಮೊಬೈಲ್​ನಲ್ಲಿ ಉಚಿತವಾಗಿ ವೀಕ್ಷಿಸಬಹುದು.

ಇದನ್ನೂ ಓದಿ IND vs PAK: ಬಾಬರ್‌ ಪಡೆಯನ್ನು ಬೆಂಡೆತ್ತಲಿ ರೋಹಿತ್​ ಸಾರಥ್ಯದ ಟೀಮ್​ ಇಂಡಿಯಾ

ಮುಖಾಮುಖಿ


ಒಟ್ಟು 7 ಬಾರಿ ಇತ್ತಂಡಗಳು ಟಿ20 ವಿಶ್ವಕಪ್​ನಲ್ಲಿ ಮುಖಾಮುಖಿಯಾಗಿವೆ. ಈ ಪೈಕಿ ಭಾರತ 6 ಪಂದ್ಯ ಗೆದ್ದರೆ, ಪಾಕಿಸ್ತಾನ ಒಂದು ಪಂದ್ಯ ಗೆದ್ದಿದೆ. ಭಾರತಕ್ಕೆ ಸೋಲು ಎದುರಾದದ್ದು 2021ರಲ್ಲಿ ದುಬೈನಲ್ಲಿ ನಡೆದಿದ್ದ ಟೂರ್ನಿಯಲ್ಲಿ. ವಿರಾಟ್​ ಕೊಹ್ಲಿ ಸಾರಥ್ಯದ ಟೀಮ್​ ಇಂಡಿಯಾ 10 ವಿಕೆಟ್​ಗಳ ಹೀನಾಯ ಸೋಲು ಕಂಡಿತ್ತು. ಒಟ್ಟಾರೆಯಾಗಿ ಉಭಯ ತಂಡಗಳು ಇದುವರೆಗೆ ಟಿ20 ಮಾದರಿಯಲ್ಲಿ 12 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ಭಾರತ ಗರಿಷ್ಠ 9 ಪಂದ್ಯಗಳಲ್ಲಿ ಗೆದ್ದು ಬೀಗಿದೆ. ಪಾಕಿಸ್ತಾನ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಈ ಲೆಕ್ಕಾಚಾರದಲ್ಲಿ ಭಾರತ ಬಲಿಷ್ಠವಾಗಿದ್ದರೂ ಕೂಡ ಪಾಕ್​ ಸವಾಲನ್ನು ಅಷ್ಟು ಹಗುರವಾಗಿ ಕಡೆಗಣಿಸುವಂತಿಲ್ಲ.

ಪಿಚ್​ ರಿಪೋರ್ಟ್​


ನಾಸ್ಸೌ ಕ್ರಿಕೆಟ್​ ಸ್ಟೇಡಿಯಂನ ಪಿಚ್​ನಲ್ಲಿ ಹಲವು ಬಿರುಕು ಇರುವುದರಿಂದ ಇದು ಬೌಲರ್​ಗಳಿಗೆ ಯೋಗ್ಯವಾಗಿದೆ. ಆದರೆ ಬ್ಯಾಟರ್​ಗಳು ರನ್​ ಗಳಿಸಲು ಪರದಾಡುವ ಜತೆಗೆ ಗಾಯಗೊಳ್ಳುವ ಸಾಧ್ಯತೆಯೂ ಅಧಿಕವಾಗಿದೆ. ಇಲ್ಲಿ ಇದುವರೆಗೆ ನಡೆದ ಎಲ್ಲ ಪಂದ್ಯಗಳು ಕೂಡ ಕನಿಷ್ಠ ಮೊತ್ತದ ಪಂದ್ಯಗಳಾಗಿವೆ. ಪಿಚ್​ ಬಗ್ಗೆ ಈಗಾಗಲೇ ಹಲವು ತಂಡಗಳ ಆಟಗಾರರು ಅಸಮಾಧಾನ ಹೊರಹಾಕಿದ್ದಾರೆ.

ಸಂಭ್ಯಾವ್ಯ ತಂಡಗಳು


ಭಾರತ:
ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕಟ್​ ಕೀಪರ್​), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಜಸ್​ಪ್ರೀತ್​ ಬುಮ್ರಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್.

ಪಾಕಿಸ್ತಾನ: ಬಾಬರ್ ಆಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್​ ಕೀಪರ್​), ಉಸ್ಮಾನ್ ಖಾನ್, ಫಖರ್ ಜಮಾನ್, ಅಜಮ್ ಖಾನ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಶಾಹೀನ್ ಅಫ್ರಿದಿ, ನಸೀಮ್ ಶಾ, ಮೊಹಮ್ಮದ್ ಅಮೀರ್, ಹಾರಿಸ್ ರೌಫ್.

Exit mobile version