Site icon Vistara News

IND vs PAK T20 World Cup: ಪಾಕಿಸ್ತಾನ​ ವಿರುದ್ಧ ಭಾರತಕ್ಕೆ ಗೆಲುವು ಖಚಿತ ಎಂದ ಪಾಕ್​ ಆಟಗಾರ

IND vs PAK

IND vs PAK T20 World Cup kamran Akmal backs India to 'definitely' defeat Pakistan

ಕರಾಚಿ: ಸಾಂಪ್ರದಾಯಿಕ ಬುದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ(IND vs PAK T20 World Cup) ನಡುವಣ ಟಿ20 ವಿಶ್ವಕಪ್(T20 World Cup 2024)​ ಪಂದ್ಯ ಜೂನ್ 9ರಂದು ನಡೆಯಲಿದೆ. ಈ ಪಂದ್ಯವನ್ನು ಕಣ್ತುಂಬಿಕೊಳ್ಳಲು ಉಭಯ ದೇಶಗಳ ಅಭಿಮಾನಿಗಳು ಮಾತ್ರವಲ್ಲದೆ ಇಡೀ ವಿಶ್ವವೇ ಕಾದು ಕುಳಿತಿದೆ. ಪಂದ್ಯಕ್ಕೂ ಮುನ್ನವೇ ಯಾವ ತಂಡ ಗೆಲ್ಲಲಿದೆ ಎಂದು ಕ್ರಿಕೆಟ್​ ಪಂಡಿತರು ಭವಿಷ್ಯ ನುಡಿಯಲಾರಂಭಿಸಿದ್ದಾರೆ. ಆದರೆ ಪಾಕಿಸ್ತಾನದ ಮಾಜಿ ಕ್ರಿಕೆಟಿಗನ ಭವಿಷ್ಯವೊಂದು ಅಚ್ಚರಿಗೆ ಕಾರಣವಾಗಿದೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ಯಾರು ಗೆಲ್ಲಬಹುದು ಎಂಬ ಪ್ರಶ್ನೆಗೆ ಉತ್ತರಿಸಿದ ಪಾಕ್​ ತಂಡದ ಮಾಜಿ ವಿಕೆಟ್​ ಕೀಪರ್​ ಕಮ್​ ಬ್ಯಾಟರ್​ ಕಮ್ರಾನ್​ ಅಕ್ಮಲ್(Kamran Akmal)​, ಪಾಕಿಸ್ತಾನವನ್ನು ಭಾರತ ಸೋಲಿಸುವುದರಲ್ಲಿ ಯಾವುದೇ ಅನುಮಾನ ಬೇಡ ಎಂದು ಹೇಳಿದ್ದಾರೆ.

“ಇತ್ತೀಚಿನ ವರ್ಷಗಳಲ್ಲಿ ಪಾಕಿಸ್ತಾನ​ ತಂಡದ ಪ್ರದರ್ಶನವನ್ನು ನೋಡುವಾಗ ಅದು ಕೂಡ ಭಾರತದಂತಹ ಬಲಿಷ್ಠ ತಂಡದ ವಿರುದ್ಧ ಗೆಲ್ಲುವುದು ಕನಸಿನ ಮಾತು. ಐರ್ಲೆಂಡ್‌ನಂತಹ ಸಣ್ಣ ತಂಡಗಳ ವಿರುದ್ಧವೇ ಪಾಕಿಸ್ತಾನ ಸೋಲು ಕಂಡಿದೆ. ಹೀಗಿರುವಾಗ ಭಾರತದ ವಿರುದ್ಧ ಗೆಲ್ಲಲು ಸಾಧ್ಯವೇ? ಗುಣಮಟ್ಟದ ಕ್ರಿಕೆಟ್ ಆಡುವ ಮತ್ತು ಎಲ್ಲಾ ತಯಾರಿಗಳೊಂದಿಗೆ ಬಂದಿರುವ ಭಾರತ ತಂಡವು ಪಾಕಿಸ್ತಾನವನ್ನು ಸೋಲಿಸುವುದರಲ್ಲಿ ಅನುಮಾನವೇ ಬೇಡ” ಎಂದು ಹೇಳಿದ್ದಾರೆ. ಅಕ್ಮಲ್ ಅವರ ಈ ಹೇಳಿಕೆ ಪಾಕಿಸ್ತಾನದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಕೆಲ ಪಾಕಿಸ್ತಾನಿ ನೆಟ್ಟಿಗರು ಅಕ್ಮಲ್​ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಹಿಗ್ಗಾಮುಗ್ಗಾ ಜಾಡಿಸಿ ದೇಶ ವಿರೋಧಿ ಎಂದು ಹೇಳಿದ್ದಾರೆ. ಪಾಕಿಸ್ತಾನ ಇಂಗ್ಲೆಂಡ್​ ವಿರುದ್ಧ ಆಡಿದ ಟಿ20 ಸರಣಿಯಲ್ಲೂ ಹೀನಾಯವಾಗಿ ಸೋಲು ಕಂಡಿತ್ತು.

ಇದನ್ನೂ ಓದಿ IND vs PAK: ಉಗ್ರರಿಂದ ‘ಒಂಟಿ ತೋಳ’ ದಾಳಿ ಬೆದರಿಕೆ; ಭಾರತ-ಪಾಕ್​ ಪಂದ್ಯಕ್ಕೆ ಭಾರೀ ಭದ್ರತಾ ವ್ಯವಸ್ಥೆ

ಭಾರತ ಮತ್ತು ಪಾಕಿಸ್ತಾನ(IND vs PAK) ನಡುವಣ ಪಂದ್ಯಕ್ಕೆ ಉಗ್ರರಿಂದ ದಾಳಿಯ ಬೆದರಿಕೆ ಬಂದಿರುವ ಕಾರಣ ಕ್ರೀಡಾಂಗಣದಲ್ಲಿ ಭಾರೀ ಭದ್ರತಾ ವ್ಯವಸ್ಥೆ ಕೈಗೊಳಲಾಗಿದೆ. ಐಸಿಸ್-ಕೆ ಹೆಸರಿನ ಭಯೋತ್ಪಾದಕ ಸಂಘಟನೆಯು “ಲೋನ್ ವುಲ್ಫ್” ದಾಳಿ ನಡೆಸುವುದಾಗಿ ಘೋಷಿಸಿತ್ತು. ಹೀಗಾಗಿ ಪಂದ್ಯಕ್ಕೆ ಸುಧಾರಿತ ಕಣ್ಗಾವಲು ಏರ್ಪಡಿಸಲಾಗಿದೆ.

ಹೈವೋಲ್ಟೇಜ್ ಕದನಕ್ಕೆ ನ್ಯೂಯಾರ್ಕ್(NEW YORK) ಹೊರವಲಯದಲ್ಲಿ 34,000 ಆಸನ ಸಾಮರ್ಥ್ಯವುಳ್ಳ ತಾತ್ಕಾಲಿಕ ಕ್ರೀಡಾಂಗಣವನ್ನು ನಿರ್ಮಿಸಲಾಗಿದೆ. ಭಾರತ ಮತ್ತು ಪಾಕ್​ ನಡುವಣ ಪಂದ್ಯ ನ್ಯೂಯಾರ್ಕ್‌ನಲ್ಲಿಯೇ ನಡೆಸಲು ಕಾರಣವೂ ಕೂಡ ಇದೆ. ಏಕೆಂದರೆ ಈ ಪ್ರದೇಶದಲ್ಲಿ 7,11,000 ಭಾರತೀಯ ಮತ್ತು ಸುಮಾರು 1,00,000 ಪಾಕಿಸ್ತಾನ ಮೂಲದ ಜನರು ವಾಸಿಸುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ಈ ಪಂದ್ಯ ಇಲ್ಲಿ ಏರ್ಪಡಿಸಲಾಗಿದೆ ಎನ್ನಲಾಗಿದೆ.

ಟಿ20 ಮುಖಾಮುಖಿ

ಉಭಯ ತಂಡಗಳು ಇದುವರೆಗೆ ಟಿ20 ಮಾದರಿಯಲ್ಲಿ 12 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ಭಾರತ ಗರಿಷ್ಠ 9 ಪಂದ್ಯಗಳಲ್ಲಿ ಗೆದ್ದು ಬೀಗಿದೆ. ಪಾಕಿಸ್ತಾನ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಭಾರತಕ್ಕೆ ಇದರಲ್ಲೊಂದು ಸೋಲು 2021ರಲ್ಲಿ ನಡೆದಿದ್ದ ವಿಶ್ವಕಪ್​ನಲ್ಲಿ ಎದುರಾಗಿತ್ತು. ಅದು ಕೂಡ 10 ವಿಕೆಟ್​ ಅಂತರದ ಹೀನಾಯ ಸೋಲಾಗಿತ್ತು.

Exit mobile version