Site icon Vistara News

IND vs PAK: ಬಾಬರ್‌ ಪಡೆಯನ್ನು ಬೆಂಡೆತ್ತಲಿ ರೋಹಿತ್​ ಸಾರಥ್ಯದ ಟೀಮ್​ ಇಂಡಿಯಾ

IND vs PAK

IND vs PAK: Title contenders India meet bruised neighbours Pakistan in mother of all clashes

ನ್ಯೂಯಾರ್ಕ್​: ಕ್ರೀಡಾ ಲೋಕವೇ ನ್ಯೂಯಾರ್ಕ್​ನತ್ತ ಮುಖ ಮಾಡಿ ಸೂಪರ್‌ ಸಂಡೆಯ ಕ್ಷಣಗಣನೆಯಲ್ಲಿ ತೊಡಗಿದೆ. ಅಭಿಮಾನಿಗಳ ಕಾತರ, ಕೌತುಕಗಳೆಲ್ಲ ಸೀಮೆಯನ್ನು ಮೀರಿವೆ. ಇದಕ್ಕೆಲ್ಲ ಒಂದೇ ಕಾರಣ, ಭಾರತ- ಪಾಕಿಸ್ತಾನ(IND vs PAK) ನಡುವಿನ ಟಿ20 ವಿಶ್ವಕಪ್‌ ಪಂದ್ಯ(T20 World Cup 2024).

ಭಾನುವಾರ ರಾತ್ರಿ ನಡೆಯುವ ‘ಎ’ ವಿಭಾಗದ ಪಂದ್ಯದಲ್ಲಿ ಬುದ್ಧ ಎದುರಾಳಿಗಳಾದ ಭಾರತ-ಪಾಕಿಸ್ತಾನ ಮುಖಾಮುಖಿಯಾಗಲಿವೆ. ಉಳಿದೆಲ್ಲ ಪಂದ್ಯಗಳಿಗಿಂದ ಈ ಸಾಂಪ್ರದಾಯಿಕ ಎದುರಾಳಿಗಳ ನಡುವಿನ ಪಂದ್ಯದ ಜೋಶ್‌ ದೊಡ್ಡ ಮಟ್ಟದಲ್ಲೇ ಇರುತ್ತದೆ. ಅಕ್ಷರಶಃ ಇದೊಂದು ಕದನವೇ ಆಗಿರುತ್ತದೆ. ಗೆದ್ದರೆ ಯುದ್ಧವನ್ನೇ ಜಯಿಸಿದ ಮಹಾಸಂಭ್ರಮ. ರೋಹಿತ್​ ಪಡೆಯ ಮೇಲಿನ ನಿರೀಕ್ಷೆ ದೊಡ್ಡ ಮಟ್ಟದಲ್ಲೇ ಇದೆ. ಹಾಗೆಯೇ ಅಮೆರಿಕ ವಿರುದ್ಧ ಸೋತಿರುವ ಪಾಕಿಸ್ತಾನಕ್ಕೆ ಒತ್ತಡವೂ ಇದೆ. ಗೆದ್ದರಷ್ಟೇ ಮುಂದಿನ ಹಂತಕ್ಕೇರಬಹುದು. ಹೀಗಾಗಿ ಪಂದ್ಯ ಜಿದ್ದಾಜಿದ್ದಿನಿಂದ ಕೂಡಿರುವ ಸಾಧ್ಯತೆ ಹೆಚ್ಚು.

ಭಾರತ ಬಲಿಷ್ಠ ಆದರೆ…


ಮೇಲ್ನೋಟಕೆ ಭಾರತ ಈ ಬಾರಿಯ ಕೂಟದಲ್ಲಿ ಫೇವರಿಟ್‌ ಆಗಿ ಗುರುತಿಸಿಕೊಂಡಿದೆ. ಆದರೆ ಅತಿಯಾದ ಆತ್ಮವಿಶ್ವಾಸ ಸಲ್ಲದು. ಎಲ್ಲ ಪಂದ್ಯದಲ್ಲಿಯೂ ಎಚ್ಚರ ಅಗತ್ಯ. ಅದರಂತೆ ಯಾವುದೇ ಕಾರಣಕ್ಕೂ ಎದುರಾಳಿಗಳನ್ನು ಕಡೆಗಣಿಸುವಂತಿಲ್ಲ. ಇದಕ್ಕೆ ಅಮೆರಿಕ ವಿರುದ್ಧ ಪಾಕ್​, ಅಫಘಾನಿಸ್ತಾನ ವಿರುದ್ಧ ನ್ಯೂಜಿಲ್ಯಾಂಡ್​ ಸೋಲು ಕಂಡಿರುವುದೇ ಉತ್ತಮ ನಿದರ್ಶನ. ಏಕದಿನ ವಿಶ್ವಕಪ್​ನಲ್ಲಿ ಪಾಕ್​ ವಿರುದ್ಧ ಭಾರತ ಅಜೇಯವಾಗಿದ್ದರೂ ಕೂಡ, ಟಿ20ಯಲ್ಲಿ ಅಜೇಯವಲ್ಲ. ಭಾರತದ ಆತಿಥ್ಯದಲ್ಲೇ ದುಬೈನಲ್ಲಿ 2021ರಲ್ಲಿ ನಡೆದಿದ್ದ ಟೂರ್ನಿಯಲ್ಲಿ ಭಾರತ 10 ವಿಕೆಟ್​ಗಳ ಹೀನಾಯ ಸೋಲು ಕಂಡಿತ್ತು. 2022ರಲ್ಲಿ ನಡೆದಿದ್ದ ಟೂರ್ನಿಯಲ್ಲಿ ಭಾರತ ಕೊನೆಯ ಎಸೆತದಲ್ಲಿ ಗೆಲುವು ಸಾಧಿಸಿತ್ತು. ಟಿ20ಯಲ್ಲಿ ಪಾಕಿಸ್ತಾನ ತಂಡ ಭಾರತಕ್ಕೆ ಪೈಪೋಟಿ ನೀಡುತ್ತಿದೆ. ಹೀಗಾಗಿ ಎಚ್ಚರದಿಂದ ಆಡಬೇಕು.

ಇದನ್ನೂ ಓದಿ IND vs PAK: ಪಾಕ್​ ವಿರುದ್ಧದ ಪಂದ್ಯದಲ್ಲಿ ವಿಶ್ವ ದಾಖಲೆ ನಿರ್ಮಿಸಲು ಕೊಹ್ಲಿ ಸಜ್ಜು; ಯಾವುದು ಈ ದಾಖಲೆ?

ಬುಮ್ರಾ ಮೇಲೆ ತಂಡ ಅವಲಂಬಿತ


ವೇಗಿ ಮೊಹಮ್ಮದ್​ ಶಮಿ ಗೈರಿನಲ್ಲಿ ಜಸ್​ಪ್ರೀತ್​ ಬುಮ್ರಾ ಬೌಲಿಂಗ್‌ ಮೇಲೆ ಇಡೀ ತಂಡ ಅವಲಂಬಿತವಾಗಿದೆ! ಹಾಗಾಗಿ ಬುಮ್ರಾ ಬೌಲಿಂಗ್‌ನಲ್ಲಿ ಪೂರ್ಣ ಭಾರವನ್ನು ಹೊರಲೇಬೇಕಾಗಿದೆ. ಅವರಿಗೆ ವೇಗಿ ಸಿರಾಜ್​, ಅರ್ಶ್‌ದೀಪ್‌ ಸಿಂಗ್‌, ಆಲ್​ರೌಂಡರ್​ ಹಾರ್ದಿಕ್​ ಪಾಂಡ್ಯ ಸ್ಪಿನ್ನರ್‌ಗಳಾದ ಜಡೇಜಾ​, ಅಕ್ಷರ್​ ನೆರವು ನೀಡಬೇಕಾಗಿದೆ. ಇವರೆಲ್ಲ ಒಂದಾಗಿ ತಮ್ಮ ಬೌಲಿಂಗ್‌ ಸಾಮರ್ಥ್ಯವನ್ನು ತೋರಿದರೆ ಭಾರತದ ಅಶ್ವಮೇಧವನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ.

ಕೊಹ್ಲಿ ಮೇಲೆ ನಂಬಿಕೆ


ಐರ್ಲೆಂಡ್​ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಒಂದು ರನ್​ಗೆ ಸೀಮಿತರಾದರೂ ಕೂಡ ಪಾಕ್‌ ವಿರುದ್ಧ ಉತ್ತಮ ದಾಖಲೆಯನ್ನೇ ಹೊಂದಿದ್ದಾರೆ. ಈ ನಿಟಿನಲ್ಲಿ ಕೊಹ್ಲಿ ಬ್ಯಾಟಿಂಗ್‌ ಅಬ್ಬರ ಇಲ್ಲೂ ನಿರೀಕ್ಷಿಸಬಹುದು. ಟಿ20 ನಂ.1 ಬ್ಯಾಟರ್​ ಸೂರ್ಯಕುಮಾರ್​ ಬ್ಯಾಟ್​ ಮಂಕಾದಂತೆ ಕಾಣುತ್ತಿದೆ. ಈ ಬಾರಿಯ ಐಪಿಎಲ್​ನಲ್ಲಿಯೂ ಒಂದೆರಡು ಪಂದ್ಯಗಳನ್ನು ಬಿಟ್ಟರೆ ಬಹುತೇಕ ಪಂದ್ಯಗಳಲ್ಲಿ ವಿಫಲರಾಗಿದ್ದರು. ಹೀಗಾಗಿ ಅವರು ಬ್ಯಾಟಿಂಗ್​ ಫಾರ್ಮ್​ಗೆ ಮರಳುವ ಅನಿವಾರ್ಯತೆ ಇದೆ. ಉಳಿದಂತೆ ಯಾವುದೇ ಸಮಸ್ಯೆಗಳಿಲ್ಲ.

ಪಾಕ್‌ ತಂಡವೂ ಬಲಿಷ್ಠ


ಭಾರತ ತಂಡದಂತೆ ಪಾಕಿಸ್ತಾನ ಕೂಡ ಬಲಿಷ್ಠವಾಗಿದೆ. ಬೌಲಿಂಗ್‌ ಮತ್ತು ಬ್ಯಾಟಿಂಗ್‌ ಎರಡೂ ವಿಭಾಗಲ್ಲಿ ವೈವಿಧ್ಯಮಯವಾಗಿ ಗೋಚರಿಸಿದೆ. ಬ್ಯಾಟಿಂಗ್‌ನಲ್ಲಿ ಮೊಹಮ್ಮದ್‌ ರಿಜ್ವಾನ್‌, ನಾಯಕ ಬಾಬರ್‌ ಅಜಂ, ಇಫ್ತಿಕರ್​, ಫಕಾರ್​ ಜಮಾನ್​ ಬಲವಾದರೆ ಅತ್ತ ಬೌಲಿಂಗ್‌ನಲ್ಲಿ ಶಾಹೀನ್‌ ಅಫ್ರಿದಿ, ಶದಾಬ್‌, ಆಮೀರ್​, ರವೂಫ್‌ ಮತ್ತು ನಶೀಮ್​ ಶಾ ಎದುರಾಳಿಗಳನ್ನು ಕಟ್ಟಿಹಾಕುವಲ್ಲಿ ಸಮರ್ಥರಿದ್ದಾರೆ. ಅದರಲ್ಲೂ ಹೊಸ ಚೆಂಡಿನಲ್ಲಿ ಅಫ್ರಿದಿ ಬೆಂಕಿ ಎಸೆತಗಳನ್ನು ಎಸೆಯುವುದರಲ್ಲಿ ಎತ್ತಿದ ಕೈ.

Exit mobile version