Site icon Vistara News

IND vs SA 3rd ODI: ಅಂತಿಮ ಪಂದ್ಯದ ಪಿಚ್​ ರಿಪೋರ್ಟ್​, ಹವಾಮಾನ ವರದಿ ಹೇಗಿದೆ?

Boland Park, Paarl

ಪಾರ್ಲ್: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಈಗಾಗಲೇ 2 ಪಂದ್ಯಗಳು ನಡೆದಿವೆ. ಇತ್ತಂಡಗಳು 1-1 ಸಮಬಲ ಸಾಧಿಸಿವೆ. ಸರಣಿಯ ಅಂತಿಮ ಮತ್ತು ನಿರ್ಣಾಯಕ(IND vs SA 3rd ODI) ಪಂದ್ಯ ನಾಳೆ(ಗುರುವಾರ) ನಡೆಯಲಿದೆ. ಇಲ್ಲಿ ಯಾರೇ ಗೆದ್ದರೂ ಸರಣಿ ಜಯ ಸಾಧಿಸಲಿದ್ದಾರೆ. ಈ ತಂಡ ಯಾವುದು ಎನ್ನುವುದು ಪಂದ್ಯದ ಕೌತುಕ. ಪಂದ್ಯದ ಪಿಚ್​ ರಿಪೋರ್ಟ್, ಹವಾಮಾನ ವರದಿ ಮತ್ತು ಸಂಭಾವ್ಯ ತಂಡ ಹೀಗಿದೆ.

ಹವಾಮಾನ ವರದಿ

ಪಂದ್ಯ ನಡೆಯುವ ಡಿಸೆಂಬರ್ 21, ಗುರುವಾರದಂದು ಪಾರ್ಲ್‌ನಲ್ಲಿ ಬಿಸಿಲು ಇರಲಿದೆ ಎಂದು ಹವಾಮಾನ ಇಲಾಖೆ ತನ್ನ ವರದಿಯಲ್ಲಿ ತಿಳಿಸಿದೆ. ‘ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಏಕದಿನ ಪಂದ್ಯದ ವೇಳೆ ಮಳೆಯಾಗುವ ಸಾಧ್ಯತೆ ಶೂನ್ಯವಾಗಿರುತ್ತದೆ. ತಾಪಮಾನವು ಸುಮಾರು 35 ಡಿಗ್ರಿ ಸೆಲ್ಸಿಯಸ್‌ನಿಂದ 18 ಡಿಗ್ರಿ ಸೆಲ್ಸಿಯಸ್ ಆಗಿರಬಹುದು. ಓಪನ್​ ಮೈದಾನವಾದ ಕಾರಣ ಗಾಳಿಯ ವೇಗ ಗಂಟೆಗೆ 28 ​​ಕಿ.ಮೀ. ಇರಲಿದೆ’ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಪಿಚ್​ ರಿಪೋರ್ಟ್​

ಪಾರ್ಲ್‌ನಲ್ಲಿರುವ ಬೋಲ್ಯಾಂಡ್ ಪಾರ್ಕ್ ಬ್ಯಾಟಿಂಗ್ ಸ್ನೇಹಿಯಾಗಿದೆ. ಇಲ್ಲಿ ತಂಡಗಳು ಕನಿಷ್ಠ 250 ರನ್ ಮೊತ್ತವನ್ನು ಗಳಿಸುವ ನಿರೀಕ್ಷೆ ಮಾಡಬಹುದು. ಬೋಲ್ಯಾಂಡ್ ಪಾರ್ಕ್‌ನಲ್ಲಿ ಮೊದಲು ಬ್ಯಾಟಿಂಗ್ ಮಾಡುವ ತಂಡಗಳು ಹೆಚ್ಚು ಪಂದ್ಯಗಳನ್ನು ಗೆದ್ದಿರುವ ಕಾರಣ ಟಾಸ್​ ಗೆದ್ದ ತಂಡ ಬ್ಯಾಟಿಂಗ್​ ಆಯ್ದುಕೊಳ್ಳಬಹುದು.

ಇಲ್ಲಿ ಆಡಿದ 15 ಪಂದ್ಯಗಳಲ್ಲಿ, ವೇಗದ ಬೌಲರ್‌ಗಳು 29.29 ಸರಾಸರಿಯಲ್ಲಿ 142 ವಿಕೆಟ್‌ಗಳನ್ನು ಪಡೆದರೆ, ಸ್ಪಿನ್ನರ್‌ಗಳು 15 ಪಂದ್ಯಗಳಲ್ಲಿ 37.93 ಸರಾಸರಿಯಲ್ಲಿ 60 ವಿಕೆಟ್‌ಗಳನ್ನು ಪಡೆದಿದ್ದಾರೆ. ಇಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ತಂಡ 8. ಚೇಸಿಂಗ್​ ನಡೆಸಿದ ತಂಡ 6ರಲ್ಲಿ ಗೆದ್ದಿದೆ. ಒಂದು ಪಂದ್ಯ ಟೈಗೊಂಡಿದೆ.

ಇದನ್ನೂ ಓದಿIND vs SA : ಎರಡನೇ ಏಕದಿನ ಪಂದ್ಯದಲ್ಲಿ ಭಾರತ ತಂಡಕ್ಕೆ ಸೋಲು, ಸರಣಿ 1-1 ಸಮಬಲ

ಮುಖಾಮುಖಿ

ಇತ್ತಂಡಗಳು ಇದುವರೆಗೆ 93 ಏಕದಿನ ಪಂದ್ಯಗಳನ್ನು ಆಡಿದ್ದು ಭಾರತ 39 ಪಂದ್ಯ ಗೆದ್ದರೆ, ದಕ್ಷಿಣ ಆಫ್ರಿಕಾ 51 ಗೆಲುವುಗಳನ್ನು ಕಂಡಿದೆ. ಮೂರು ಪಂದ್ಯಗಳು ಫಲಿತಾಂಶವಿಲ್ಲದೆ ಅಂತ್ಯಗೊಂಡಿವೆ. ಗಮನಾರ್ಹವಾಗಿ, ದಕ್ಷಿಣ ಆಫ್ರಿಕಾದಲ್ಲಿ, ಭಾರತದ ಒಟ್ಟಾರೆ ದಾಖಲೆಯು ಪ್ರಭಾವಶಾಲಿಯಾಗಿಲ್ಲ. ‘ಮೆನ್ ಇನ್ ಬ್ಲೂ’ ತಂಡವು 39 ಪಂದ್ಯಗಳಲ್ಲಿ 11 ಪಂದ್ಯಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ, ಆತಿಥೇಯರು 26 ರಲ್ಲಿ ಜಯಗಳಿಸಿದ್ದಾರೆ, ಎರಡು ಪಂದ್ಯ ಫಲಿತಾಂಶವಿಲ್ಲದೆ ಕೊನೆಗೊಂಡಿದೆ.

ಸಂಭಾವ್ಯ ತಂಡ

ಭಾರತ: ಕೆ.ಎಲ್ ರಾಹುಲ್ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ರುತುರಾಜ್ ಗಾಯಕ್ವಾಡ್, ಸಾಯಿ ಸುದರ್ಶನ್, ತಿಲಕ್ ವರ್ಮಾ, ರಿಂಕು ಸಿಂಗ್, ಅಕ್ಷರ್​ ಪಟೇಲ್​/ಯಜುವೇಂದ್ರ ಚಹಲ್​, ಕುಲದೀಪ್ ಯಾದವ್, ಅರ್ಶ್​ದೀಪ್​ ಸಿಂಗ್, ಅವೇಶ್ ಖಾನ್, ಮುಖೇಶ್ ಕುಮಾರ್.

ದಕ್ಷಿಣ ಆಫ್ರಿಕಾ: ಟೋನಿ ಡಿ ಝೋರ್ಜಿ, ರೀಜಾ ಹೆಂಡ್ರಿಕ್ಸ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಕ್ ಕ್ಲಾಸೆನ್ (ವಿಕೆಟ್​ ಕೀಪರ್​), ಡೇವಿಡ್ ಮಿಲ್ಲರ್, ವಿಯಾನ್ ಮುಲ್ಡರ್, ಕೇಶವ್ ಮಹಾರಾಜ್, ನಾಂಡ್ರೆ ಬರ್ಗರ್, ಲಿಜಾಡ್ ವಿಲಿಯಮ್ಸ್, ಬ್ಯೂರಾನ್ ಹೆಂಡ್ರಿಕ್ಸ್.

Exit mobile version