Site icon Vistara News

IND vs SA Final: 40 ಸಾವಿರ ಅಡಿ ಎತ್ತರದಲ್ಲಿಯೂ ಮೊಳಗಿದ ವಿಶ್ವಕಪ್​ ಗೆಲುವಿನ ಸಂಭ್ರಮ; ವಿಡಿಯೊ ವೈರಲ್​

IND vs SA Final

IND vs SA Final: India's T20 World Cup win celebrated 40,000 feet above sea level

ಲಂಡನ್​: ಭಾರತ ತಂಡ 17 ವರ್ಷಗಳ ಬಳಿಕ ಟಿ20 ವಿಶ್ವಕಪ್(​T20 World Cup 2024) ಗೆಲ್ಲುವ ಮೂಲಕ ಭಾರತೀಯ(IND vs SA Final) ಕ್ರಿಕೆಟ್​ ಅಭಿಮಾನಿಗಳು 13 ವರ್ಷಗಳಿಂದ ಕಾಯುತ್ತಿದ್ದ ಐಸಿಸಿ ಟ್ರೋಫಿಯೊಂದರ ಕನಸು ನನಸಾಯಿತು. ಈ ಗೆಲುವಿನ ಸಂಭ್ರಮವನ್ನು ದೇಶ-ವಿದೇಶದಲ್ಲಿರುವ ಭಾರತೀಯರು ಸಂಭ್ರಮಿಸಿದ್ದಾರೆ. ಇದೀಗ ಸಮುದ್ರ ಮಟ್ಟದಿಂದ 40ಸಾವಿರ ಅಡಿ ಎತ್ತರದಲ್ಲಿಯೂ ಈ ಗೆಲುವಿನ ಸಂಭ್ರಮಾಚರಣೆ ನಡೆದಿದೆ.

ಹೌದು, ಲಂಡನ್‌ಗೆ ಹೋಗುವ ವಿಮಾನದಲ್ಲಿ ಪ್ರಯಾಣಿಕರು ದಕ್ಷಿಣ ಆಫ್ರಿಕಾ ಮತ್ತು ಭಾರತ ನಡುವಣ ಫೈನಲ್​ ಪಂದ್ಯವನ್ನು ತಮ್ಮ ಲ್ಯಾಪ್​ಟಾಪ್​ಗಳಲ್ಲಿ ವೀಕ್ಷಿಸಿದ್ದಾರೆ. ಭಾರತ ಪಂದ್ಯ ಗೆಲ್ಲುತ್ತಿದ್ದಂತೆ ವಿಮಾನದಲ್ಲಿದ್ದ ಭಾರತೀಯರು ಸಂಭ್ರಮಿಸಿದ್ದಾರೆ. ವಿಮಾನದಲ್ಲಿಯೂ ಕೂಡ ಭಾರತದ ಗೆಲುವಿನ ಸುದ್ದಿಯನ್ನು ಘೋಷಿಸಿದರು. ಈ ವಿಡಿಯೊ ವೈರಲ್​ ಆಗಿದೆ.

ವಿಮಾನದಲ್ಲಿ ಪ್ರಯಾಣಿಸಿದ ಹರ್ದೀಪ್ ಸಿಂಗ್ ಎನ್ನುವವರು ಪಂದ್ಯವನ್ನು ವೀಕ್ಷಿಸಲು ತಡೆರಹಿತ ವೈ-ಫೈ ಸೇವೆಯನ್ನು ಒದಗಿಸಿದ ಏರ್‌ಲೈನ್‌ಗೆ ಧನ್ಯವಾದ ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಮೊಳಗಿದ ವಿಜಯೋತ್ಸವ


17ನೇ ವರ್ಷಗಳ ಬಳಿಕ ಟಿ20 ವಿಶ್ವಕಪ್(T20 World Cup final)​ ಗೆದ್ದ ಭಾರತ ತಂಡದ ಈ ಅಭೂತಪೂರ್ವ ಗೆಲುವನ್ನು ಅಭಿಮಾನಿಗಳು ದೇಶಾದ್ಯಂತ ಸಂಭ್ರಮದಿಂದ ಆಚರಿಸಿದ್ದಾರೆ. ದೇಶದ ಮೂಲೆ ಮೂಲೆಯಲ್ಲೂ ತಡರಾತ್ರಿಯೇ ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಿಸಿದ್ದಾರೆ. ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲೂ ಅಭಿಮಾನಿಗಳು ತ್ರಿವರ್ಣ ಧ್ವಜಗಳನ್ನು ಹಿಡಿದು ಗೆಲುವನ್ನು ಸಂಭ್ರಮಿಸಿದ್ದಾರೆ. ಇದರ ಫೋಟೊ ಮತ್ತು ವೈರಲ್​ ಆಗಿದೆ.

ಜಮ್ಮು ಕಾಶ್ಮೀರದ ಕಚಿ ಚೌನಿ ಸೇರಿದಂತೆ ವಿವಿಧ ಭಾಗಗಳಲ್ಲಿ ಚಳಿಯನ್ನು ಕೂಡ ಲೆಕ್ಕಿಸದೆ ಮಧ್ಯರಾತ್ರಿಯೇ ಅಭಿಮಾನಿಗಳು ಮನೆಯಿಂದ ಹೊರ ಬಂದು ಭಾರತದ ಗೆಲುವನ್ನು ಸಂಭ್ರಮಿಸಿದ್ದಾರೆ. ಬೃಹತ್ ತ್ರಿವರ್ಣ ಧ್ವಜ ಹಿಡಿದು ಪಟಾಕಿ ಸಿಡಿಸಿ ಜಯಘೋಷ ಮೊಳಗಿಸಿದ್ದಾರೆ.

ಇದನ್ನೂ ಓದಿ Jay Shah Promise: ಜಯ್​​ ಶಾ ಭವಿಷ್ಯ ನುಡಿದಂತೆ ಟಿ20 ವಿಶ್ವಕಪ್​ ಗೆದ್ದ ಭಾರತ; ವಿಡಿಯೊ ವೈರಲ್​

ಬ್ರಿಜ್‌ಟೌನ್‌ನ ಕೆನ್ಸಿಂಗ್ಟನ್‌ ಓವಲ್‌ ಕ್ರಿಕೆಟ್​ ಸ್ಟೇಡಿಯಂನಲ್ಲಿ ಶನಿವಾರ ರಾತ್ರಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ, ವಿರಾಟ್ ಕೊಹ್ಲಿ ಮತ್ತು ಅಕ್ಷರ್ ಪಟೇಲ್ ಅವರ ಜವಾಬ್ದಾರಿಯುತ ಆಟದ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ಈ ಮೊತ್ತವನ್ನು ಒಂದು ಹಂತದ ವರೆಗೆ ದಿಟ್ಟವಾಗಿ ಬೆನ್ನಟ್ಟಿಕೊಂಡು ಬಂದ ದಕ್ಷಿಣ ಆಫ್ರಿಕಾ 8 ವಿಕೆಟ್​ಗೆ 169 ರನ್​ ಗಳಿಸಲಷ್ಟೇ ಶಕ್ತವಾಯಿತು. ಭಾರತ 7 ರನ್​ ಅಂತರದಿಂದ ಗೆದ್ದು 17 ವರ್ಷಗಳ ಬಳಿಕ 2ನೇ ಟಿ20 ವಿಶ್ವಕಪ್​ ಎತ್ತಿ ಹಿಡಿಯಿತು.

ದ್ರಾವಿಡ್​ಗೆ ಸ್ಮರಣೀಯ ಬೀಳ್ಕೊಡುಗೆ


ನಾಯಕನಾಗಿ ಗೆಲ್ಲಲಾಗದ ವಿಶ್ವಕಪ್(T20 World Cup 2024)​ ಟ್ರೋಫಿಯನ್ನು ರಾಹುಲ್​ ದ್ರಾವಿಡ್‌(Rahul Dravid) ಕೊನೆಗೂ ಭಾರತ ತಂಡದ ತರಬೇತುದಾರಾಗಿ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಅದು ಕೂಡ ತಮ್ಮ ಕೊನೆಯ ಮಾರ್ಗದರ್ಶನದಲ್ಲಿ ಎನ್ನುವುದು ವಿಶೇಷ. 2007ರಲ್ಲಿ ವೆಸ್ಟ್​ ಇಂಡೀಸ್​ನಲ್ಲಿ ನಡೆದಿದ್ದ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ರಾಹುಲ್​ ದ್ರಾವಿಡ್​ ಅವರ ನಾಯಕತ್ವದಲ್ಲಿ ಭಾರತ ಅತ್ಯಂತ ಕಳಪೆ ಪ್ರದರ್ಶನ ತೋರುವ ಮೂಲಕ ಲೀಗ್​ ಹಂತದಿಂದಲೇ ನಿರ್ಗಮಿಸಿತ್ತು. ದುರ್ಬಲ ಬಾಂಗ್ಲಾದೇಶ ವಿರುದ್ದವೂ ಕೂಡ ಗೆಲುವು ಸಾಧಿಸಲು ಸಾಧ್ಯವಾಗ ಅವಮಾನಕ್ಕೆ ಸಿಲುಕಿತ್ತು. ಅಂದು ಅವಮಾನ ಎದುರಿಸಿದ ವಿಂಡೀಸ್​ ನೆಲದಲ್ಲೇ ಇದೀಗ ದ್ರಾವಿಡ್​ ತರಬೇತುದಾರನಾಗಿ ಕಪ್​ ಗೆದ್ದು ಸಂಭ್ರಮಿಸಿದ್ದಾರೆ.

Exit mobile version