Site icon Vistara News

IND vs SA Final: ರಾಮನಾಮ ಸ್ಮರಣೆ ಮಾಡಿ ಭಾರತ ವಿರುದ್ಧ ಫೈನಲ್​ ಆಡಲಿದ್ದಾರೆ ದಕ್ಷಿಣ ಆಫ್ರಿಕಾ ಕ್ರಿಕೆಟಿಗ

IND vs SA Final

IND vs SA Final: Keshav Maharaj remembering Lord Rama before entering the Barbados field

ಬಾರ್ಬಡೋಸ್​: ವಿಶ್ವಕಪ್‌ ಇತಿಹಾಸದಲ್ಲೇ ಮೊದಲ ಸಲ ಪ್ರಶಸ್ತಿ ಸುತ್ತಿಗೆ ಕಾಲಿಟ್ಟಿರುವ ದಕ್ಷಿಣ ಆಫ್ರಿಕಾ(IND vs SA Final) ಕಪ್​ ಗೆದ್ದು ಇತಿಹಾಸ ಬರೆಯಲು ಸಜ್ಜಾಗಿ ನಿಂತಿದೆ. ಬ್ರಿಜ್‌ಟೌನ್‌ನ “ಕೆನ್ಸಿಂಗ್ಟನ್‌ ಓವಲ್‌’ನಲ್ಲಿ ಇಂದು ರಾತ್ರಿ ನಡೆಯುವ ಟಿ20 ವಿಶ್ವಕಪ್(T20 World Cup 2024)​ ಫೈನಲ್​ ಪಂದ್ಯದಲ್ಲಿ ಭಾರತ ವಿರುದ್ಧ ಕಣಕ್ಕಿಳಿಯಲಿದೆ. ಈ ಪಂದ್ಯಕ್ಕೂ ಮುನ್ನ ದಕ್ಷಿಣ ಆಫ್ರಿಕಾದ ಆಟಗಾರ ಕೇಶವ್​ ಮಹಾರಾಜ್(keshav maharaj)​ ಅವರು ರಾಮನಾಮ ಸ್ಮರಣೆ ಮಾಡಿದ್ದಾರೆ.

ಆಂಜನೇಯನ ಮತ್ತು ರಾಮನ ಪರಮ ಭಕ್ತನಾಗಿರುವ ಕೇಶವ್​ ಮಹಾರಾಜ್, ಬ್ಯಾಟಿಂಗ್​ ನಡೆಸಲು ಮೈದಾನಕ್ಕೆ ಬಂದಾಗಲೆಲ್ಲ ‘ರಾಮ್ ಸಿಯಾ ರಾಮ್’ ಹಾಡನ್ನು ಸ್ಟೇಡಿಯಂನಲ್ಲಿ ಜೋರಾಗಿ ಹಾಕಲಾಗುತ್ತದೆ. ಈ ಹಾಡನ್ನು ಕೇಳಿದರೆ ತನಗೆ ಆತ್ಮವಿಶ್ವಾಸ ಹೆಚ್ಚಾಗುತ್ತದೆ ಎಂದು ಹಿಂದೊಮ್ಮೆ ಸಂದರ್ಶನದಲ್ಲಿ ಅವರು ಹೇಳಿದ್ದರು. ಇದೀಗ ಫೈನಲ್​ ಪಂದ್ಯಕ್ಕೂ ಕೂಡ ರಾಮನಾಮ ಜಪಿಸಿ ತಂಡದ ಯಶಸ್ಸಿಗೆ ಪ್ರಾರ್ಥಿಸಿಕೊಂಡಿದ್ದಾರೆ.

ಕೇಶವ್​ ಮಹಾರಾಜ್​ ಮೂಲತಃ ಭಾರತೀಯರಾಗಿದ್ದು, ದಕ್ಷಿಣ ಆಫ್ರಿಕಾದಲ್ಲಿ ನೆಲೆಸಿದ್ದಾರೆ. ಆದರೆ ಅವರು ಭಾರತಕ್ಕೆ ಬಂದಾಗಲೆಲ್ಲಾ ಕುಟುಂಬ ಸಮೇತರಾಗಿ ಇಲ್ಲಿನ ದೇವಸ್ಥಾನಗಳಿಗೆ ಭೇಟಿ ನೀಡುತ್ತಾರೆ. ಕಳೆದ ವರ್ಷ ಭಾರತದಲ್ಲಿ ನಡೆದಿದ್ದ ಏಕದಿನ ವಿಶ್ವಕಪ್​ ಟೂರ್ನಿಯ ವೇಳೆ ಮಹರಾಜ್​ ಕೇರಳದ ದೇವಸ್ಥಾನವೊಂದಕ್ಕೆ ಭಟಿ ನೀಡಿ ಪೂಜೆ ಸಲ್ಲಿಸಿದ್ದರು. ತಮ್ಮ ಬ್ಯಾಟ್ ಮೇಲೆ ಓಂ ಎಂದು ಬರೆದುಕೊಂಡಿದ್ದಾರೆ. ಈ ಬಾರಿಯ ಐಪಿಎಲ್​ (IPL 2024)​ ಭಾಗವಾಗಿ ಭಾರತಕ್ಕೆ ಬಂದಿದ್ದ ವೇಳೆ ಕೇಶವ್​ ಅಯೋಧ್ಯೆ ರಾಮಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು. ‘ಜೈ ಶ್ರೀ ರಾಮ್… ಎಲ್ಲರಿಗು ಒಳಿತು ಮಾಡಲಿ’ ಎಂದು ಬರೆದುಕೊಂಡಿದ್ದರು.

ಮಳೆ ಭೀತಿ

ಫೈನಲ್​ ಪಂದ್ಯಕ್ಕೆ ಹವಾಮಾನ ಇಲಾಖೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಶೇ.70ರಷ್ಟು ಮಳೆಯಾಗಲಿದೆ ಎಂದು ತನ್ನ ವರದಿಯಲ್ಲಿ ತಿಳಿಸಿದೆ. ಒಂದೊಮ್ಮೆ ನಿಗದಿತ ದಿನ ಪಂದ್ಯ ನಡೆಯದೇ ಇದ್ದರೆ, ಮೀಸಲು ದಿನಕ್ಕೆ ಮುಂದುವರಿಯಲಿದೆ, ಒಂದು ವೇಳೆ ಫೈನಲ್‌(T20 World Cup 2024) ಪಂದ್ಯ ಮೀಸಲು ದಿನದಲ್ಲಿಯೂ ನಡೆಯದೇ ಹೋದರೆ, ಆಗ ಎರಡೂ ತಂಡಗಳನ್ನು ಜಂಟಿ ವಿಜೇತರು ಎಂದು ಘೋಷಿಸಲಾಗುತ್ತದೆ.

ಇದನ್ನೂ ಓದಿ IND vs SA Final: ಭಾರತ ಸೋತರೆ ರೋಹಿತ್ ಈ ಅನಾಹುತ ಮಾಡಿಕೊಳ್ಳಬಹುದು; ಮಾಜಿ ನಾಯಕನಿಂದ ಶಾಕಿಂಗ್​ ಹೇಳಿಕೆ ​

ಮುಖಾಮುಖಿ


ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಇದುವರೆಗೆ 26 ಟಿ20 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ಪೈಕಿ ಭಾರತ 14 ಪಂದ್ಯ ಗೆದ್ದರೆ, ದಕ್ಷಿಣ ಆಫ್ರಿಕಾ 11 ಪಂದ್ಯಗಳನ್ನು ಗೆದ್ದಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ. ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಒಟ್ಟು 6 ಪಂದ್ಯಗಳಲ್ಲಿ ಆಡಿದ್ದು, ಭಾರತ 4 ಪಂದ್ಯ ಗೆದ್ದಿದೆ. 2 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಗೆಲುವು ಕಂಡಿದೆ. 2022ರಲ್ಲಿ ನಡೆದಿದ್ದ ವಿಶ್ವಕಪ್​ ಟೂರ್ನಿಯಲ್ಲಿ ರೋಹಿತ್​ ಪಡೆ ದಕ್ಷಿಣ ಆಫ್ರಿಕಾ ವಿರುದ್ಧ 5 ವಿಕೆಟ್​ ಅಂತರದ ಸೋಲು ಕಂಡಿತ್ತು.

ಸಂಭಾವ್ಯ ತಂಡ


ದಕ್ಷಿಣ ಆಫ್ರಿಕಾ:
 ಕ್ವಿಂಟನ್ ಡಿ ಕಾಕ್ (ವಿಕೀ), ರೀಜಾ ಹೆಂಡ್ರಿಕ್ಸ್, ಏಡೆನ್ ಮಾರ್ಕ್ರಮ್​ (ನಾಯಕ), ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಅನ್ರಿಚ್ ನಾರ್ಜೆ, ತಬ್ರೈಜ್ ಶಮ್ಸಿ

ಭಾರತ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೀ), ಸೂರ್ಯಕುಮಾರ್ ಯಾದವ್, ಶಿವಂ ದುಬೆ/ ಯಶಸ್ವಿ ಜೈಸ್ವಾಲ್​, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಜಸ್​ಪ್ರೀತ್​ ಬುಮ್ರಾ.

Exit mobile version