Site icon Vistara News

IND vs SA Final: ವಿಶ್ವಕಪ್​ ಗೆಲ್ಲಲು ಕೊಹ್ಲಿ, ರೋಹಿತ್​, ದ್ರಾವಿಡ್​ಗೆ ಇದು ಕೊನೆಯ ಅವಕಾಶ!

IND vs SA Final

IND vs SA Final: This is the last chance for Kohli, Rohit, Dravid to win the World Cup!

ಬಾರ್ಬಡೋಸ್​: 10 ವರ್ಷಗಳ ಬಳಿಕ ಟಿ20 ವಿಶ್ವಕಪ್(T20 World Cup 2024)​ ಟೂರ್ನಿಯಲ್ಲಿ ಫೈನಲ್​(IND vs SA Final) ಪ್ರವೇಶಿಸಿರುವ ಭಾರತ ತಂಡ ಫೈನಲ್​ ಪಂದ್ಯ ಆಡಲು ಸಜ್ಜಾಗಿ ನಿಂತಿದೆ. ಬ್ರಿಜ್‌ಟೌನ್‌ನ(Bridgetown) “ಕೆನ್ಸಿಂಗ್ಟನ್‌ ಓವಲ್‌’(Kensington Oval) ಮೈದಾನದಲ್ಲಿ ಇಂದು ನಡೆಯುವ ಫೈನಲ್​ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ(South Africa vs India Final) ಸವಾಲು ಎದುರಿಸಲಿದೆ. ರೋಹಿತ್ ಶರ್ಮ ಮತ್ತು ವಿರಾಟ್​ ಕೊಹ್ಲಿಗೆ ಇದು ಬಹುತೇಕ ಕೊನೆಯ ಟಿ20 ವಿಶ್ವಕಪ್​ ಟೂರ್ನಿಯಾಗಿದೆ. ತಮ್ಮ ಅಂತಿಮ ಪ್ರಯತ್ನದಲ್ಲಾದರೂ ಕಪ್​ ಗೆದ್ದು ಸ್ಮರಣೀಯ ವಿದಾಯ ಸಿಗುವಂತಾಗಲಿ ಎಂದು ಉಭಯ ಆಟಗಾರರ ಅಭಿಮಾನಿಗಳ ಹಾರೈಕೆಯಾಗಿದೆ.

ರನ್‌ ಮಷಿನ್‌ ಖ್ಯಾತಿಯ ವಿರಾಟ್​ ಕೊಹ್ಲಿ ಈ ಬಾರಿಯ ವಿಶ್ವಕಪ್​ನಲ್ಲಿ ನಿರೀಕ್ಷಿತ ಪ್ರದರ್ಶನ ತೋರಿಲ್ಲ. ಆಡಿದ 7 ಪಂದ್ಯಗಳಲ್ಲಿ ವಿರಾಟ್‌ ಗಳಿಸಿರುವುದು ಕೇವಲ 75 ರನ್‌. ಪ್ರತಿ ಐಸಿಸಿ ಟೂರ್ನಿಯಲ್ಲಿ ಅಬ್ಬರಿಸುವ ಕೊಹ್ಲಿ ಇಷ್ಟೊಂದು ಕಳಪೆ ಪ್ರದರ್ಶನ ತೋರಿದ್ದು ಇದೇ ಮೊದಲು. ಸ್ವತಃ ಕೊಹ್ಲಿ ಕೂಡ ತಮ್ಮ ಬ್ಯಾಟಿಂಗ್​ ಬಗ್ಗೆ ಚಿಂತಿಸಿ ಕಣ್ಣೀರು ಕೂಡ ಹಾಕಿದ್ದಾರೆ. 35 ವರ್ಷದ ವಿರಾಟ್ ಕೊಹ್ಲಿ ಮತ್ತು 36 ವರ್ಷದ ರೋಹಿತ್​ ಶರ್ಮ ಪಾಲಿಗೆ ಬಹುತೇಕ ಇದೇ ಕೊನೆಯ ಟಿ20 ವಿಶ್ವಕಪ್ ಆಗುವ ಸಾಧ್ಯತೆಯಿದೆ. ಹೀಗಾಗಿ ವಿರಾಟ್ ಮತ್ತು ರೋಹಿತ್​ ತಮ್ಮ ಪಾಲಿನ ಬಹುತೇಕ ಕೊನೆಯ ವಿಶ್ವಕಪ್ ಫೈನಲ್‌ನಲ್ಲಿ ಸ್ಮರಣೀಯ ಇನಿಂಗ್ಸ್ ಆಡಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಬೇಕಿದೆ.

ದ್ರಾವಿಡ್​ಗೆ ಸಿಗಲಿ ಸ್ಮರಣೀಯ ಉಡುಗೊರೆ

ರಾಹುಲ್​ ದ್ರಾವಿಡ್​ ಅವರಿಗೆ ಕೋಚ್​ ಆಗಿ ಇದು ಕೊನೆಯ ಟೂರ್ನಿಯಾಗಿದೆ. ಈ ಟೂರ್ನಿ ಮುಕ್ತಾಯದ ಬಳಿಕ ಅವರು ಕೋಚಿಂಗ್​ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ. 2022ರಲ್ಲಿ ನಡೆದಿದ್ದ ಟಿ20 ವಿಶ್ವಕಪ್​ ರಾಹುಲ್​ ದ್ರಾವಿಡ್​ಗೆ ಕೋಚ್​ ಆಗಿ ಮೊದಲ ಸವಾಲಾಗಿತ್ತು. ಇಲ್ಲಿ ಕಪ್​ ಗೆಲ್ಲಲು ತಂಡ ವಿಫಲವಾಗಿತ್ತು. ಬಳಿಕ ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ನಲ್ಲಿಯೂ ಭಾರತ ಫೈನಲ್​ನಲ್ಲಿ ಸೋಲು ಕಂಡಿತ್ತು. ಇದೀಗ ನಿರ್ಗಮನದ ಹಂತದಲ್ಲಿರುವ ದ್ರಾವಿಡ್​ ತಮ್ಮ ಕೊನೆಯ ಮಾರ್ಗದರ್ಶನದಲ್ಲಿ ಭಾರತ ತಂಡ ಕಪ್​ ಗೆದ್ದರೆ ಅವರಿಗೂ ಕೂಡ ವಿಶ್ವಕಪ್​ ಗೆದ್ದ ಸಂತಸವಿರುತ್ತದೆ. ಜತೆಗೆ ಸ್ಮರಣೀಯ ಉಡುಗೊರೆಯೊಂದು ಲಭಿಸಲಿದೆ. ಇದು ನೆರವೇರಲಿ ಎನ್ನುವುದು ಕೊಟ್ಯಂತರ ಅಭಿಮಾನಿಗಳ ಹಾರೈಕೆಯಾಗಿದೆ.

ಇದನ್ನೂ ಓದಿ IND vs SA Final: ಭಾರತ ತಂಡ ವಿಶ್ವಕಪ್​ ಗೆಲ್ಲಲಿ; ಪ್ರಯಾಗ್ ರಾಜ್​ನಲ್ಲಿ ಅಭಿಮಾನಿಗಳಿಂದ ವಿಶೇಷ ಪೂಜೆ

ಭಾರತ ಬಲಿಷ್ಠ ಆದರೆ ಎಚ್ಚರ ಅಗತ್ಯ


ರೋಹಿತ್‌ ಶರ್ಮ, ವಿರಾಟ್‌ ಕೊಹ್ಲಿ, ಸೂರ್ಯಕುಮಾರ್‌, ಹಾರ್ದಿಕ್‌ ಪಾಂಡ್ಯ, ರಿಷಭ್​ ಪಂತ್​, ಜಸ್​ಪ್ರೀತ್​ ಬುಮ್ರಾ, ಸೂರ್ಯಕುಮಾರ್​ ಇರುವ ಭಾರತ ತಂಡವನ್ನು ಬಲಿಷ್ಠ ಎನ್ನಲೇಬೇಕು. ಆದರೆ, ಭಾರತ ಪೂರ್ಣ ಎಚ್ಚರದಿಂದಲೇ ಫೈನಲ್​ ಆಡಬೇಕು. ಎದುರಾಳಿಯನ್ನು ಒಮ್ಮೆಯೂ ಕಡೆಗಣಿಸುವುದು ಸಾಧ್ಯವೇ ಇಲ್ಲ. ಯಾರು ಯಾರನ್ನು ಕೆಡವಿ ಬೀಳಿಸುತ್ತಾರೆ ಎಂಬುದು ಟಿ20 ಮಾದರಿಯಲ್ಲಿ ಅಂದಾಜಿಸುವುದಕ್ಕೆ ಕಷ್ಟ ಸಾಧ್ಯ. ಕೆಲವೇ ಓವರ್‌ಗಳಲ್ಲಿ ಪಂದ್ಯದ ಚಿತ್ರಣವೇ ಬದಲಾಗುವುದು ಟಿ20 ಪಂದ್ಯಗಳ ಶಕ್ತಿ.

Exit mobile version