Site icon Vistara News

IND vs SA: ಭಾರತ-ದಕ್ಷಿಣ ಆಫ್ರಿಕಾ ಟಿ20 ಮುಖಾಮುಖಿ, ಪಿಚ್​ ರಿಪೋರ್ಟ್ ಹೇಗಿದೆ?

South Africa vs India, 1st T20I Kingsmead, Durban

ಡರ್ಬಾನ್​: ಆಸ್ಟ್ರೇಲಿಯಾ ವಿರುದ್ಧದ ತವರಿನ ಟಿ20 ಸರಣಿ ಗೆದ್ದ ಹುರುಪಿನಲ್ಲಿರುವ ಸೂರ್ಯಕುಮಾರ್​ ಯಾದವ್​ ಸಾರಥ್ಯದ ಯಂಗ್​ ಟೀಮ್​ ಇಂಡಿಯಾ ಭಾನುವಾರ ನಡೆಯುವ ದಕ್ಷಿಣ ಆಫ್ರಿಕಾ(IND vs SA) ವಿರುದ್ಧದ ಮೊದಲ ಟಿ20 ಪಂದ್ಯವನ್ನಾಡಲು ಸಜ್ಜಾಗಿ ನಿಂತಿದೆ. ಇತ್ತಂಡಗಳ ಟಿ20 ಮುಖಾಮುಖಿ, ಸಂಭಾವ್ಯ ತಂಡ ಮತ್ತು ಪಿಚ್​ ರಿಪೋರ್ಟ್​ನ ಸಂಪೂರ್ಣ ಮಾಹಿತಿ ಇಂತಿದೆ.

ಟಿ20 ಮುಖಾಮುಖಿ

ಭಾರತ ಮತ್ತು ದಕ್ಷಿಣ ಆಫ್ರಿಕಾ ಇದುವರೆಗೆ 24 ಟಿ20 ಪಂದ್ಯಗಳಲ್ಲಿ ಪರಸ್ಪರ ಮುಖಾಮುಖಿಯಾಗಿದ್ದು, ಭಾರತವು 13 ಪಂದ್ಯಗಳನ್ನು ಗೆದ್ದಿದೆ. ದಕ್ಷಿಣ ಆಫ್ರಿಕಾ 10 ಪಂದ್ಯಗಳಲ್ಲಿ ಗೆಲುವು ಕಂಡಿದೆ. ಒಂದು ಪಂದ್ಯವು ಫಲಿತಾಂಶವಿಲ್ಲದೆ ಕೊನೆಗೊಂಡಿದೆ. ದಕ್ಷಿಣ ಆಫ್ರಿಕಾದಲ್ಲಿ, ‘ಮೆನ್ ಇನ್ ಬ್ಲೂ’ ಏಳು ಪಂದ್ಯಗಳನ್ನು ಆಡಿ ಐದರಲ್ಲಿ ಗೆದ್ದಿದ್ದರೆ, ಆತಿಥೇಯರು ಎರಡರಲ್ಲಿ ಗೆದ್ದಿದ್ದಾರೆ. ಬಲಾಬಲದ ಲೆಕ್ಕಾಚಾರದಲ್ಲಿ ಭಾರತ ಬಲಿಷ್ಠವಾಗಿದೆ.

ಚೊಚ್ಚಲ ಟಿ20 ಪಂದ್ಯ ಆಡಿದ್ದೇ ಭಾರತ-ದಕ್ಷಿಣ ಆಫ್ರಿಕಾ

ಟಿ20 ಅಂತಾರಾಷ್ಟ್ರೀಯ ಪಂದ್ಯವನ್ನು ಮೊದಲ ಬಾರಿ ಆಡಿದ ತಂಡವೆಂದರೆ ಅದು ಭಾರತ ಮತ್ತು ದಕ್ಷಿಣ ಆಫ್ರಿಕಾ. 2007ರಲ್ಲಿ ನಡೆದ ಚೊಚ್ಚಲ ಅಂತಾರಾಷ್ಟೀಯ ಟಿ20 ಪಂದ್ಯದಲ್ಲಿ ವೀರೇಂದ್ರ ಸೆಹವಾಗ್​ ಸಾರಥ್ಯದ ಭಾರತ ತಂಡ ದಕ್ಷಿಣ ಆಫ್ರಿಕಾವನ್ನು 82 ರನ್​ಗಳಿಂದ ಮಣಿಸಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ್ದ ಭಾರತ 6 ವಿಕೆಟ್​ಗೆ 169 ರನ್​ ಬಾರಿಸಿತ್ತು. ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡ ಕೇವಲ 87 ರನ್​ಗೆ ಸರ್ವಪತನ ಕಂಡಿತ್ತು.

ಕಿಂಗ್ಸ್‌ಮೀಡ್ ಪಿಚ್ ರೆಕಾರ್ಡ್​ ಹೇಗಿದೆ?

ಡರ್ಬಾನ್​ನ ಕಿಂಗ್ಸ್‌ಮೀಡ್ ಪಿಚ್ ಮೈದಾನದಲ್ಲಿ ಆಡಿದ 18 ಪಂದ್ಯಗಳಲ್ಲಿ, ವೇಗದ ಬೌಲರ್‌ಗಳು 23.84 ಸರಾಸರಿಯಲ್ಲಿ 162 ವಿಕೆಟ್‌ಗಳನ್ನು ಪಡೆದರೆ, ಸ್ಪಿನ್ನರ್‌ಗಳು 18 ಪಂದ್ಯಗಳಲ್ಲಿ 26.80 ಸರಾಸರಿಯಲ್ಲಿ 42 ವಿಕೆಟ್‌ಗಳನ್ನು ಪಡೆದಿದ್ದಾರೆ. ಮೊದಲು ಬ್ಯಾಟಿಂಗ್ ಮಾಡಿದ ತಂಡ ಒಂಬತ್ತು ಗೆಲುವು ಸಾಧಿಸಿದರೆ, ಎರಡನೇ ಬ್ಯಾಟಿಂಗ್ ನಡೆಸಿದ ತಂಡ ಎಂಟು ಗೆಲುವುಗಳನ್ನು ಸಾಧಿಸಿದೆ. ಒಂದು ಪಂದ್ಯ ಫಲಿತಾಂಶವಿಲ್ಲದೆ ಕೊನೆಗೊಂಡಿದೆ. ಡರ್ಬನ್‌ನಲ್ಲಿ ಸರಾಸರಿ ಮೊದಲ ಇನ್ನಿಂಗ್ಸ್ ಸ್ಕೋರ್ 143 ಆಗಿದೆ.

ಉಭಯ ತಂಡಗಳು

ಭಾರತ: ಸೂರ್ಯಕುಮಾರ್ ಯಾದವ್ (ನಾಯಕ),ರವೀಂದ್ರ ಜಡೇಜಾ (ಉಪನಾಯಕ) ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ರುತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವಾಷಿಂಗ್ಟನ್ , ರವಿ ಬಿಷ್ಣೋಯ್, ಕುಲದೀಪ್ ಯಾದವ್, ಅರ್ಶದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ದೀಪಕ್ ಚಹಾರ್.

ಇದನ್ನೂ ಓದಿ IND vs SA: ಭಾರತ ತಂಡದ ಮೊದಲ ದಕ್ಷಿಣ ಆಫ್ರಿಕಾ ಪ್ರವಾಸದ ಇತಿಹಾಸವೇ ಬಲು ರೋಚಕ

ದಕ್ಷಿಣ ಆಫ್ರಿಕಾ: ಐಡೆನ್ ಮಾರ್ಕ್ರಾಮ್ (ನಾಯಕ), ಒಟ್ನಿಯೆಲ್ ಬಾರ್ಟ್‌ಮ್ಯಾನ್, ಮ್ಯಾಥ್ಯೂ ಬ್ರೀಟ್ಜ್‌ಕೆ, ನಾಂಡ್ರೆ ಬರ್ಗರ್, ಜೆರಾಲ್ಡ್ ಕೋಟ್ಜಿ (1 ನೇ ಮತ್ತು 2 ನೇ ಟಿ20), ಡೊನೊವನ್ ಫೆರೀರಾ, ರೀಜಾ ಹೆಂಡ್ರಿಕ್ಸ್, ಮಾರ್ಕೊ ಜಾನ್ಸೆನ್ (1 ನೇ ಮತ್ತು 2 ನೇ ಟಿ20), ಹೆನ್ರಿಚ್ ಕ್ಲಾಸೆನ್, ಕೇಶವ್ ಮಹಾರಾಜ್, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ (1ನೇ ಮತ್ತು 2ನೇ ಟಿ20), ಆಂಡಿಲ್ ಫೆಹ್ಲುಕ್ವಾಯೊ, ತಬ್ರೈಜ್ ಶಮ್ಸಿ, ಟ್ರಿಸ್ಟಾನ್ ಸ್ಟಬ್ಸ್ ಮತ್ತು ಲಿಜಾದ್ ವಿಲಿಯಮ್ಸ್.

Exit mobile version