ಪರ್ತ್: ಐಸಿಸಿ ಟಿ20 ವಿಶ್ವ ಕಪ್‌ನ ಸೂಪರ್ 12 ಹಂತದ ಮೊದಲೆರಡು ಪಂದ್ಯಗಳಲ್ಲಿ ಈಗಾಗಲೇ ಗೆಲುವು ಸಾಧಿಸಿರುವ ಟೀಮ್ ಇಂಡಿಯಾ(IND VS SA) , ಭಾನುವಾರ ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಭಾರತ ತಂಡದಲ್ಲಿ ಒಂದು ಬದಲಾವಣೆ ಆಗಿದೆ. ಆಲ್ರೌಂಡರ್ ಅಕ್ಷರ್ ಬದಲು ದೀಪಕ್ ಹೂಡಾಗೆ ಅವಕಾಶ ನೀಡಲಾಗಿದೆ.
ಮುಖಾಮುಖಿ
ಭಾರತ ಮತ್ತು ದಕ್ಷಿಣ ಆಫ್ರಿಕಾ ಇದುವರೆಗೆ 23 ಟಿ20 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ಭಾರತ 13 ಪಂದ್ಯ ಜಯಿಸಿದರೆ, ದಕ್ಷಿಣ ಆಫ್ರಿಕಾ 9 ಪಂದ್ಯಗಳಲ್ಲಿ ಗೆಲವು ಸಾಧಿಸಿದೆ. 1 ಪಂದ್ಯವು ಫಲಿತಾಂಶವಿಲ್ಲದೆ ಕೊನೆಗೊಂಡಿದೆ. ಈ ಲೆಕ್ಕಾಚಾರದಲ್ಲಿ ಭಾರತ ಬಲಿಷ್ಠವಾಗಿದೆ.
ಭಾರತ: ರೋಹಿತ್ ಶರ್ಮಾ(ನಾಯಕ), ಕೆ.ಎಲ್. ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ದೀಪಕ್ ಹೂಡಾ, ಆರ್. ಅಶ್ವಿನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಶ್ದೀಪ್ ಸಿಂಗ್.
ದಕ್ಷಿಣ ಆಫ್ರಿಕಾ: ತೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್, ರಿಲಿ ರೊಸೊ, ಏಡೆನ್ ಮಾರ್ಕ್ರಮ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ವೇಯ್ನ್ ಪರ್ನೆಲ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಆನ್ರಿಚ್ ನೋರ್ಜೆ, ಲುಂಗಿ ಎನ್ ಗಿಡಿ.
ಪಂದ್ಯ ಆರಂಭ:
ಸಮಯ: ಸಂಜೆ 04: 30ಕ್ಕೆ (ಭಾರತೀಯ ಕಾಲಮಾನ)
ಸ್ಥಳ: ಪರ್ತ್ ಸ್ಟೇಡಿಯಂ, ಪರ್ತ್
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್
ಇದನ್ನೂ ಓದಿ | T20 World Cup | ರೋಚಕ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ಬಾಂಗ್ಲಾಗೆ 3 ರನ್ ಜಯ, ಕೊನೇ ಓವರ್‌ನಲ್ಲಿ ಹೈಡ್ರಾಮಾ