Site icon Vistara News

IND vs SL: ಭಾರತ ವಿರುದ್ಧದ ಟಿ20 ಸರಣಿಗೆ ತಂಡ ಪ್ರಕಟಿಸಿದ ಶ್ರೀಲಂಕಾ

IND vs SL

IND vs SL: Charith Asalanka to lead SL in T20I series against India

ಕೊಲಂಬೊ: ಭಾರತ(IND vs SL) ವಿರುದ್ಧದ ತವರಿನ ಟಿ20 ಸರಣಿಗಾಗಿ ಆತಿಥೇಯ ಶ್ರೀಲಂಕಾ(Sri Lanka) 16 ಸದಸ್ಯರ ತಂಡವನ್ನು ಪ್ರಕಟಿಸಿದೆ. ಚರಿತ್ ಅಸಲಂಕಾ ತಂಡವನ್ನು ಮುನ್ನಡೆಸಲಿದ್ದಾರೆ. ಸರಣಿ ಆರಂಭಕ್ಕೂ ಮುನ್ನ ವನಿಂದು ಹಸರಂಗ ಟಿ20 ನಾಯಕತ್ವದಿಂದ ಕೆಳಗಿಳಿದಿದ್ದರು. ಇದೀಗ ನೂತನ ನಾಯಕನಾಗಿ ಚರಿತ್ ಅಸಲಂಕಾ(Charith Asalanka) ನೇಮಕಗೊಂಡಿದ್ದಾರೆ.

ಇತ್ತೀಚೆಗೆ ಮುಕ್ತಾಯಗೊಂಡ ಲಂಕಾ ಪ್ರೀಮಿಯರ್ ಲೀಗ್​ನಲ್ಲಿ ಚರಿತ್ ಅಸಲಂಕಾ ನಾಯಕತ್ವದಲ್ಲಿ ಜಾಫ್ನಾ ಕಿಂಗ್ಸ್ ತಂಡ ಚಾಂಪಿಯನ್​ ಪಟ್ಟ ಅಲಂಕರಿಸಿತ್ತು. ಹೀಗಾಗಿ ಲಂಕಾ ಕ್ರಿಕೆಟ್​ ಮಂಡಳಿ ಇವರಿಗೆ ನಾಯಕತ್ವ ಪಟ್ಟ ಕಟ್ಟಿದೆ. ಭಾರತ ಕೂಡ ನೂತನ ನಾಯಕ ಸೂರ್ಯಕುಮಾರ್​ ಯಾದವ್ ಸಾರಥ್ಯದಲ್ಲಿ ಆಡಲಿದೆ. ​ಭಾರತ ಮತ್ತು ಶ್ರೀಲಂಕಾ ನಡುವಣ ಟಿ20 ಸರಣಿಯು ಜುಲೈ 27 ರಿಂದ ಶುರುವಾಗಲಿದೆ.

34 ವರ್ಷದ ಅನುಭವಿ ಆಟಗಾರ ದಿನೇಶ್ ಚಂಡಿಮಲ್​ಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ. ಆದರೆ ಕಳೆದ ಟಿ20 ವಿಶ್ವಕಪ್​ ಆಡಿದ್ದ ಹಿರಿಯ ಆಲ್​ರೌಂಡರ್​ ಏಂಜೆಲೊ ಮ್ಯಾಥ್ಯೂಸ್ ಅವರನ್ನು ಕೈಬಿಡಲಾಗಿದೆ. ಏಕದಿನ ಸರಣಿಗೆ ಇನಷ್ಟೇ ತಂಡ ಪ್ರಕಟಗೊಳ್ಳಬೇಕಿದೆ.

ಶ್ರೀಲಂಕಾ ಟಿ20 ತಂಡ


ಚರಿತ್ ಅಸಲಂಕ (ನಾಯಕ), ಪಾತುಮ್ ನಿಸ್ಸಾಂಕ, ಕುಸಾಲ್ ಜನಿತ್ ಪೆರೇರಾ, ಅವಿಷ್ಕ ಫೆರ್ನಾಂಡೋ, ಕುಸಾಲ್ ಮೆಂಡಿಸ್, ದಿನೇಶ್ ಚಂಡಿಮಲ್, ಕಮಿಂದು ಮೆಂಡಿಸ್, ದಸುನ್ ಶಾನಕ, ವನಿಂದು ಹಸರಂಗ, ದುನಿತ್ ವೆಲ್ಲಲಾಗೆ, ಮಹೀಶ್ ತೀಕ್ಷಣ, ಚಮಿಂದು ವಿಕ್ರಮಸಿಂಗ್, ಮಥೀಶ ಪತಿರಾಣ, ನುವಾನ್ ತುಷಾರ, ದುಷ್ಮಂತ ಚಮೀರ, ಬಿನೂರ ಫೆರ್ನಾಂಡೋ.

ಲಂಕಾ ಸರಣಿಗೆ ಭಾರತ ಈಗಾಗಲೇ ಏಕದಿನ ಮತ್ತು ಟಿ20 ತಂಡಗಳನ್ನು ಪ್ರಕಟಿಸಿದೆ. ವಿಶ್ರಾಂತಿ ಬಯಸಿದ್ದ ರೋಹಿತ್​ ಶರ್ಮ, ವಿರಾಟ್​ ಕೊಹ್ಲಿ ಮತ್ತು ಜಸ್​ಪ್ರೀತ್​ ಬುಮ್ರಾ ತಮ್ಮ ವಿಶ್ರಾಂತಿ ಮೊಟಕುಗೊಳಿಸಿ ಈ ಸರಣಿಗೆ ಮರಳಿದ್ದಾರೆ.

ಇದನ್ನೂ ಓದಿ Sri Lanka Tour: ಸಂಜು, ಅಭಿಷೇಕ್​ಗೆ ಅವಕಾಶ ನೀಡದಕ್ಕೆ ಬಿಸಿಸಿಐ ವಿರುದ್ಧ ಕಿಡಿಕಾರಿದ ಸಂಸದ ​ತರೂರ್

ಪ್ರವಾಸದ ಮೊದಲ 3 ಟಿ20 ಪಂದ್ಯಗಳು ಜುಲೈ 27, 28 ಮತ್ತು 30ರಂದು ಪಲ್ಲೆಕಿಲೆಯಲ್ಲಿ ನಡೆಯಲಿವೆ. ಮೊದಲು ಪ್ರಕಟಗೊಂಡಿದ್ದ ವೇಳಾಪಟ್ಟಿಯಲ್ಲಿ 26ರಿಂದ ಟಿ20 ಪಂದ್ಯ ಆರಂಭವಾಗಬೇಕಿತ್ತು. ಏಕದಿನ ಸರಣಿ ಕೂಡ ಒಂದು ದಿನ ತಡವಾಗಿ ಶುರುವಾಗಬೇಕಿತ್ತು. ಏಕದಿನ ಆಗಸ್ಟ್​ 1ರದ ಬದಲಾಗಿ ಆಗಸ್ಟ್​ 2ರಿಂದ ಆರಂಭಗೊಳ್ಳಲಿದೆ. ಉಳಿದ ಪಂದ್ಯಗಳ ದಿನಾಂಕ ಬದಲಾಗಲಿಲ್ಲ. ಈ ಹಿಂದಿನಂತೆ ಆಗಸ್ಟ್​ 4 ಮತ್ತು 7ರಂದೇ ನಡೆಯಲಿದೆ.

ಟಿ20 ತಂಡ

ಸೂರ್ಯಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ಉಪ ನಾಯಕ), ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ರಿಯಾನ್ ಪರಾಗ್, ರಿಷಭ್ ಪಂತ್ (ವಿ.ಕೀ ), ಸಂಜು ಸ್ಯಾಮ್ಸನ್ (ವಿ.ಕೀ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯಿ , ಅರ್ಶದೀಪ್​ ಸಿಂಗ್, ಖಲೀಲ್ ಅಹ್ಮದ್, ಮೊಹಮ್ಮದ್​ ಸಿರಾಜ್.

ಏಕದಿನ ತಂಡ


ರೋಹಿತ್ ಶರ್ಮ (ನಾಯಕ), ಶುಭಮನ್ ಗಿಲ್ (ಉಪ ನಾಯಕ), ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್ (ವಿ.ಕೀ), ರಿಷಬ್ ಪಂತ್ (ವಿ.ಕೀ), ಶ್ರೇಯಸ್ ಅಯ್ಯರ್, ಶಿವಂ ದುಬೆ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ರಿಯಾನ್ ಪರಾಗ್, ಅಕ್ಷರ್ ಪಟೇಲ್, ಖಲೀಲ್ ಅಹ್ಮದ್, ಹರ್ಷಿತ್ ರಾಣಾ.

Exit mobile version