ತಿರುವನಂತಪುರ: ಭಾರತ ಮತ್ತು ಶ್ರೀಲಂಕಾ(IND VS SL) ವಿರುದ್ಧದ ಅಂತಿಮ ಏಕದಿನ ಪಂದ್ಯ ಭಾನುವಾರ ತಿರುವನಂತಪುರದಲ್ಲಿ ನಡೆಯಲಿದೆ. ಈಗಾಗಲೇ 2 ಪಂದ್ಯಗಳನ್ನು ಗೆದ್ದು ಸರಣಿವಶಪಡಿಸಿಕೊಂಡಿರುವ ಭಾರತಕ್ಕೆ ಇದೊಂದು ಔಪಚಾರಿಕ ಪಂದ್ಯ ಎಂದರೂ ತಪ್ಪಾಗಲಾರದು. ಈ ಪಂದ್ಯದ ಪಿಚ್ ರಿಪೋರ್ಟ್ ಮತ್ತು ಉಭಯ ತಂಡಗಳ ಮಾಹಿತಿ ಈ ಕೆಳಗಿನಂತಿದೆ.
ಪಿಚ್ ರಿಪೋರ್ಟ್
ತಿರುವನಂತಪುರದ ಗ್ರೀನ್ಫೀಲ್ಡ್ ಮೈದಾನದ ಪಿಚ್ ಬೌಲಿಂಗ್ ಸ್ನೇಹಿಯಾಗಿದೆ. ವೇಗಿಗಳಿಗೆ ಮತ್ತು ಸ್ಪಿನ್ನರ್ಗಳಿಗೆ ಸಮಾನ ರೀತಿಯಲ್ಲಿ ಇಲ್ಲಿ ವಿಕೆಟ್ ಬೇಟೆಯಾಡುವ ಅವಕಾಶವಿದೆ. ಆದ್ದರಿಂದ ಈ ಪಂದ್ಯದಲ್ಲಿ ಬೌಲರ್ಗಳು ಹೆಚ್ಚು ಮೇಲುಗೈ ಸಾಧಿಸುವ ನಿರೀಕ್ಷೆ ಇದೆ. ಇಲ್ಲಿ ಇದುವರೆಗೆ ಒಂದು ಏಕದಿನ ಪಂದ್ಯ ಮಾತ್ರ ನಡೆದಿದೆ. 2018ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ ಮೊದಲ ಪಂದ್ಯವನ್ನಾಡಿತ್ತು. ಈ ಪಂದ್ಯದಲ್ಲಿ ವಿಂಡೀಸ್ ಕೇವಲ 104 ರನ್ಗಳಿಗೆ ಆಲೌಟ್ ಆಗಿತ್ತು. ಇದರ ಬಳಿಕ ಇಲ್ಲಿ ಏಕದಿನ ಪಂದ್ಯ ನಡೆದಿಲ್ಲ. ಇದೀಗ 2ನೇ ಏಕದಿನ ಪಂದ್ಯ ಇಲ್ಲಿ ನಡೆಯುತ್ತಿದೆ.
ಬರೋಬ್ಬರಿ ನಾಲ್ಕು ವರ್ಷಗಳ ಬಳಿಕ ಇಲ್ಲಿ ಏಕದಿನ ಪಂದ್ಯ ನಡೆಯುತ್ತಿರುವ ಕಾರಣ ಪಿಚ್ ಹೇಗೆ ವರ್ತಿಸುತ್ತದೆ ಎಂಬುದುದು ಕೂಡ ಪಂದ್ಯದ ಫಲಿತಾಂಶದ ಮೇಲೆ ಪರಿಣಾಮ ಬೀರಬಹುದು. ಆದ್ದರಿಂದ ಟಾಸ್ ಗೆದ್ದ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡುವ ಸಾಧ್ಯತೆ ಇದೆ.
ಸಂಭಾವ್ಯ ತಂಡ
ಭಾರತ: ರೋಹಿತ್ ಶರ್ಮಾ(ನಾಯಕ), ಶುಭಮನ್ ಗಿಲ್/ ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್/ಸೂರ್ಯಕುಮಾರ್, ಕೆ.ಎಲ್. ರಾಹುಲ್, ಹಾರ್ದಿಕ್ ಪಾಂಡ್ಯ, ಕುಲ್ದೀಪ್ ಯಾದವ್ , ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಮೊಹಮ್ಮದ್ ಶಮಿ/ಅರ್ಶ್ದೀಪ್ ಸಿಂಗ್ , ಅಕ್ಷರ್ ಪಟೇಲ್/ ವಾಷಿಂಗ್ಟನ್ ಸುಂದರ್.
ಶ್ರೀಲಂಕಾ: ದಸುನ್ ಶನಕ (ನಾಯಕ), ಕುಸಾಲ್ ಮೆಂಡಿಸ್,ಆವಿಷ್ಕಾ ಫೆರ್ನಾಂಡೋ/ಪಾಥುಮ್ ನಿಸ್ಸಾಂಕ, ನುವಾನಿಡು ಫೆರ್ನಾಂಡೋ, ಧನಂಜಯ ಡಿ ಸಿಲ್ವ, ಚರಿತ್ ಅಸಲಂಕ, ವನಿಂದು ಹಸರಂಗ, ಚಾಮಿಕ ಕರುಣಾರತ್ನೆ, ದುನಿತ್ ವೆಲ್ಲಲಗೆ, ಕಸುನ್ ರಜಿತ, ಲಹಿರು ಕುಮಾರ/ದಿಲ್ಶನ್ ಮದುಶಂಕ.
ಇದನ್ನೂ ಓದಿ | IND VS NZ | ನ್ಯೂಜಿಲ್ಯಾಂಡ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ