ರಾಜ್ಕೋಟ್: ಶ್ರೀಲಂಕಾ ವಿರುದ್ಧದ ಅಂತಿಮ ಟಿ20 ಪಂದ್ಯದಲ್ಲಿ(IND VS SL) ಟೀಮ್ ಇಂಡಿಯಾ ಟಾಸ್ ಗೆದ್ದು ಬ್ಯಾಟಿಂಗ್ ಮಾಡುವ ನಿರ್ಧಾರ ಕೈಗೊಂಡಿದೆ. ಶ್ರೀಲಂಕಾ ಮೊದಲು ಬೌಲಿಂಗ್ ನಡೆಸಲಿದೆ. ಭಾರತ ಈ ಪಂದ್ಯಕ್ಕೆ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ದ್ವಿತೀಯ ಪಂದ್ಯದಲ್ಲಿ ಆಡಿದ ಬಳಗವನ್ನೇ ಈ ಪಂದ್ಯದಲ್ಲಿಯೂ ಮುಂದುವರಿಸಿದೆ.
ರಾಜ್ಕೋಟ್ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಶನ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯುತ್ತಿದ್ದು, ಸರಣಿ ವಶಪಡಿಸಿಕೊಳ್ಳಲು ಉಭಯ ತಂಡಗಳು ಜಿದ್ದಾಜಿದ್ದಿನಿಂದ ಹೋರಾಟ ನಡೆಸುವ ನಿರೀಕ್ಷೆ ಇದೆ. ಶ್ರೀಲಂಕಾ ಈ ಪಂದ್ಯಕ್ಕೆ ಒಂದು ಬದಲಾವಣೆ ಮಾಡಿದೆ. ಭಾನುಕಾ ರಾಜಪಕ್ಷೆ ಬದಲು ಆವಿಷ್ಕ ಫೆರ್ನಾಂಡೊ ಅವರಿಗೆ ಅವಕಾಶ ನೀಡಲಾಗಿದೆ.
ಪಂದ್ಯದ ವಿವರ
ಸ್ಥಳ : ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಮ್, ರಾಜ್ಕೋಟ್
ಸಮಯ: ಸಂಜೆ 7 ಗಂಟೆಯಿಂದ ಪಂದ್ಯ ಆರಂಭ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್, ಲೈವ್ ಸ್ಟ್ರೀಮಿಂಗ್: ಡಿಸ್ನಿ ಹಾಟ್ ಸ್ಟಾರ್
ಭಾರತ: ಹಾರ್ದಿಕ್ ಪಾಂಡ್ಯ (ನಾಯಕ), ಇಶಾನ್ ಕಿಶನ್ (ವಿಕೆಟ್ಕೀಪರ್), ಶುಬ್ಮನ್ ಗಿಲ್, ರಾಹುಲ್ ತ್ರಿಪಾಠಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಅಕ್ಷರ್ ಪಟೇಲ್, ಶಿವಂ ಮಾವಿ, ಉಮ್ರಾನ್ ಮಲಿಕ್, ಅರ್ಶ್ದೀಪ್ ಸಿಂಗ್, ಯುಜ್ವೇಂದ್ರ ಚಹಲ್.
ಶ್ರೀಲಂಕಾ:
ದಸುನ್ ಶನಕ (ನಾಯಕ), ಪಾಥು ನಿಸ್ಸಾಂಕ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್) ಧನಂಜಯ ಡಿ ಸಿಲ್ವ, ಚರಿತ್ ಅಸಲಂಕಾ, ಆವಿಷ್ಕ ಫೆರ್ನಾಂಡೊ, ವನಿಂದು ಹಸರಂಗ, ಚಾಮಿಕ ಕರುಣಾರತ್ನೆ, ಮಹೀಶ್ ತೀಕ್ಷಣ, ಕಸುನ್ ರಜಿತ, ದಿಲ್ಶನ್ ಮದುಶಂಕ.
ಇದನ್ನೂ ಓದಿ | INDvsSL | ಪಂದ್ಯ ಮುಗಿಯುವ ಮೊದಲೇ ಹ್ಯಾಂಡ್ ಶೇಕ್; ನಾಯಕ ಹಾರ್ದಿಕ್ ಪಾಂಡ್ಯ ಮಾಡಿದ್ದು ತಪ್ಪೊ, ಸರಿಯೊ?