ಮುಂಬಯಿ: ಪ್ರವಾಸಿ ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯವನ್ನು ಗೆದ್ದು ಬೀಗಿರುವ ಟೀಮ್ ಇಂಡಿಯಾ(IND VS SL) ಇದೀಗ ದ್ವಿತೀಯ ಪಂದ್ಯವನ್ನಾಡಲು ಸಜ್ಜಾಗಿದೆ. ಗುರುವಾರ ಈ ಪಂದ್ಯ ಪುಣೆಯಲ್ಲಿ ನಡೆಯಲಿದೆ. ಈ ಪಂದ್ಯದ ಪಿಚ್ ರಿಪೋರ್ಟ್ ಮತ್ತು ಆಡುವ ಬಳಗದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿವೆ.
ಪಿಚ್ ರಿಪೋರ್ಟ್
ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಮೈದಾನದ ಪಿಚ್ ಕೂಡ ಮುಂಬೈನ ವಾಂಖೆಡೆ ಸ್ಟೇಡಿಯಂನ ರೀತಿಯೇ ಇದೆ. ಅದರಂತೆ ಬ್ಯಾಟಿಂಗ್ ಸ್ನೇಹಿಯಾಗಿದ್ದು ಇಲ್ಲಿ ದೊಡ್ಡ ಮೊತ್ತ ಪೇರಿಸಲು ಅವಕಾಶವಿದೆ. ಹೊಡಿ ಬಡಿ ಆಟಗಾರರಿಗ ಈ ಪಿಚ್ ಉತ್ತಮ ರೀತಿಯಲ್ಲಿ ಸಹಕರಿಸಲಿದೆ. ಬ್ಯಾಟಿಂಗ್ ಸ್ನೇಹಿಯಾದ ಕಾರಣ ಬೌಲರ್ಗಳು ಇಲ್ಲಿ ದಂಡಿಸಿಕೊಳ್ಳುವ ಸಾಧ್ಯತೆ ಅಧಿಕ. ಆದ್ದರಿಂದ ಬೌಲರ್ಗಳು ಇಲ್ಲಿ ಶಕ್ತಿ ಮೀರಿ ಪ್ರದರ್ಶನ ತೋರಬೇಕಿದೆ.
ಸಂಭಾವ್ಯ ತಂಡ
ಭಾರತ
ಇಶಾನ್ ಕಿಶನ್(ವಿಕೆಟ್ ಕೀಪರ್), ಶುಬ್ಮನ್ ಗಿಲ್, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ (ನಾಯಕ), ದೀಪಕ್ ಹೂಡಾ, ಅಕ್ಷರ್ ಪಟೇಲ್, ಹರ್ಷಲ್ ಪಟೇಲ್/ಅರ್ಶ್ದೀಪ್ ಸಿಂಗ್ ,ಶಿವಂ ಮಾವಿ, ಉಮ್ರಾನ್ ಮಲಿಕ್,ಯಜುವೇಂದ್ರ ಚಹಲ್
ಶ್ರೀಲಂಕಾ
ಪಾತುಮ್ ನಿಸ್ಸಾಂಕ, ಕುಸಾಲ್ ಮೆಂಡಿಸ್ (ವಿಕೆಟ್ ಕೀಪರ್), ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ಭಾನುಕಾ ರಾಜಪಕ್ಷ, ದಸುನ್ ಶನಕ (ನಾಯಕ), ವನಿಂದು ಹಸರಂಗ, ಚಾಮಿಕಾ ಕರುಣಾರತ್ನೆ, ಮಹೇಶ್ ತೀಕ್ಷಣ, ದಿಲ್ಶನ್ ಮದುಶನಕ, ಕಸುನ್ ರಜಿತಾ
ಇದನ್ನೂ ಓದಿ | IndvsSL | ಲಂಕಾ ವಿರುದ್ಧ ಆಡಿದ ಶಿವಂ ಮಾವಿಗೆ ಯಾಕೆ 100ನೇ ಸಂಖ್ಯೆಯ ಕ್ಯಾಪ್, ಗಿಲ್ಗೆ ಯಾಕೆ 101?