Site icon Vistara News

IND vs SL: ಮೂರನೇ ಏಕದಿನ ಪಂದ್ಯಕ್ಕೆ ರಾಹುಲ್​ ಅನುಮಾನ​; ಪಂತ್​ಗೆ ಅವಕಾಶ?

IND vs SL

IND vs SL: Rahul doubtful for third ODI; A chance for Pant?

ಕೊಲಂಬೊ: ಶ್ರೀಲಂಕಾ(IND vs SL) ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಹೀನಾಯವಾ್ಗಿ ಸೋಲು ಕಂಡಿದ್ದ ಭಾರತ ನಾಳೆ ನಡೆಯುವ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಕಣಕ್ಕಿಳಿಯಲು ಸಜ್ಜಾಗಿದೆ. ಈ ಪಂದ್ಯಕ್ಕೆ ತಂಡದಲ್ಲಿ ಹಲವು ಬದಲಾವಣೆ ಮಾಡುವ ಸಾಧ್ಯತೆ ಕಂಡುಬಂದಿದೆ. ಮೂಲಗಳ ಪ್ರಕಾರ ಆಯ್ಕೆ ಸಮಿತಿ ಕನ್ನಡಿಗ ಕೆ.ಎಲ್​ ರಾಹುಲ್(KL Rahul)​ ಅವರನ್ನು ಕೈ ಬಿಟ್ಟು ರಿಷಭ್​ ಪಂತ್​ಗೆ(Rishabh Pant) ಅವಕಾಶ ನೀಡಲಿದೆ ಎನ್ನಲಾಗಿದೆ.

ರಾಹುಲ್​ ಕಳೆದ ದ್ವಿತೀಯ ಪಂದ್ಯದಲ್ಲಿ ಶೂನ್ಯಕ್ಕೆ ನಿರ್ಗಮಿಸಿದ್ದರು. ಮೊದಲ ಪಂದ್ಯದಲ್ಲಿಯೂ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ಎಡವಿದ್ದರು. ಇದೀಗ ಸರಣಿ ಸೋಲಿನ ಭೀತಿಯಲ್ಲಿರುವ ಭಾರತ ತಂಡ ಮಧ್ಯಮ ಕ್ರಮಾಂಕದಲ್ಲಿ ಬಿರುಸಿನ ಬ್ಯಾಟಿಂಗ್​ ಮೂಲಕ ಎದುರಾಳಿ ಬೌಲರ್​ಗಳ ಲೆಕ್ಕಾಚಾರವನ್ನು ಬುಡಮೇಲು ಮಾಡುವಂತಹ ಪಂತ್​ ಅವರನ್ನು ಮೂರನೇ ಪಂದ್ಯದಲ್ಲಿ ಆಡಿಸಲು ತಂಡ ಮುಂದಾಗಿದೆ ಎಂದು ತಿಳಿದುಬಂದಿದೆ.

ರಾಹುಲ್​ ಬ್ಯಾಟಿಂಗ್​ ವೈಫಲ್ಯಕ್ಕೆ ತಂಡದ ಕೆಲ ನಿರ್ಧಾರವೇ ಕಾರಣ ಎನ್ನುವ ಮಾತುಗಳು ಕೂಡ ಕೇಳಿ ಬಂದಿವೆ. ಅನುಭವಿ ಆಟಗಾರನಾಗಿದ್ದರೂ ಕೂಡ ಅವರನ್ನು 7ನೇ ಕ್ರಮಾಂಕದಲ್ಲಿ ಆಡಿಸಿದ್ದು ಕೂಡ ಅವರ ವೈಫಲ್ಯಕ್ಕೆ ಕಾರಣ ಎಂದು ಅನೇಕ ಮಾಜಿ ಆಟಗಾರರು ಟೀಕೆ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲ ನೆಟ್ಟಿಗರು ರಾಹುಲ್​ ವಿಷಯದಲ್ಲಿ ಮಾತ್ರ ಏಕೆ ಹೀಗಾಗುತ್ತಿದೆ ಎಂದು ಬಿಸಿಸಿಐ ಮತ್ತು ಆಯ್ಕೆ ಸಮಿತಿಗೆ ಪ್ರಶ್ನೆ ಮಾಡಿದ್ದಾರೆ.

ಕೊಲಂಬೊದ ಆರ್​. ಪ್ರೇಮದಾಸ ಸ್ಟೇಡಿಯಂನ ಪಿಚ್​ ಸಿನ್ನರ್​ಗಳಿಗೆ ಹೆಚ್ಚಿನ ನೆರವು ನೀಡುವ ಕಾರಣ ಶಿವಂ ದುಬೆ ಅವರನ್ನು ಈ ಪಂದ್ಯದಿಂದ ಕೈಬಿಟ್ಟು ಅವರ ಬದಲಿಗೆ ಸ್ಪಿನ್​ ಆಲ್​ರೌಂಡರ್​ ಆಗಿರುವ ರಿಯಾನ್ ಪರಾಗ್ ಸ್ಥಾನ ಪಡೆಯಬಹುದು. ಟಿ20 ಸರಣಿಯಲ್ಲಿ ಬ್ಯಾಟಿಂಗ್​ ಜತೆಗೆ ಬೌಲಿಂಗ್​ನಲ್ಲಿಯೂ ಪರಾಗ್​ ಉತ್ತಮ ಪ್ರದರ್ಶನ ತೋರಿದ್ದರು. ಹೀಗಾಗಿ ಇವರಿಗೆ ಸ್ಥಾನ ಸಿಗುವುದು ಬಹುತೇಕ ಖಚಿತ.

ಇದನ್ನೂ ಓದಿ IND vs SL ODI : ಎರಡನೇ ಏಕ ದಿನ ಪಂದ್ಯದಲ್ಲಿ ಭಾರತ ತಂಡಕ್ಕೆ32 ರನ್ ಸೋಲು, ಸರಣಿಯಲ್ಲಿ ಲಂಕಾಗೆ ಮುನ್ನಡೆ

ಈ ಬಾರಿಯ ಐಪಿಎಲ್​ನಲ್ಲಿ ಕೆಕೆಆರ್​ ಪರ ಘಾತಕ ಬೌಲಿಂಗ್​ ಮೂಲಕ ಹಲವು ವಿಕೆಟ್​ ಕಿತ್ತಿದ್ದ ಹರ್ಷಿತ್ ರಾಣಾ ಕೂಡ ಅವಕಾಶ ಗಿಟ್ಟಿಸಿಕೊಳ್ಳುವ ಸಾಧ್ಯತೆ ಇದೆ. ದುಬಾರಿಯಾಗಿ ಕಂಡು ಬರುತ್ತಿರುವ ಮೊಹಮ್ಮದ್​ ಸಿರಾಜ್​ ಬದಲಿಗೆ ಇವರು ಆಡುವ ಸಾಧ್ಯತೆ ಇದೆ. ಗಂಭೀರ್​ ಅವರ ಮಾರ್ಗದರ್ಶನಲ್ಲಿ ಆಡಿದ ಅನುಭವ ಕೂಡ ಹರ್ಷಿತ್ ರಾಣಾಗೆ ಇದೆ.

ಮೂರನೇ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್​ ಪಂತ್​ (ವಿಕೀ), ರಿಯಾನ್​ ಪರಾಗ್​, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ.

Exit mobile version