ಮುಂಬಯಿ: ಶ್ರೀಲಂಕಾ(IND VS SL) ವಿರುದ್ಧದ ಏಕದಿನ ಸರಣಿಗೂ ಮುನ್ನ ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಭರ್ಜರಿ ತಯಾರಿ ಆರಂಭಿಸಿದ್ದಾರೆ. ಶನಿವಾರ ಜಿಮ್‌ನಲ್ಲಿ ವರ್ಕೌಟ್ ಮಾಡುವ ಮೂಲಕ ಬೆವರು ಸುರಿಸಿದ್ದಾರೆ. ಇದೇ ವೇಳೆ ಅವರು ಮಾಡಿದ ನೃತ್ಯದ ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿರುವ ವಿಡಿಯೊವನ್ನು ರೋಹಿತ್ ಶರ್ಮಾ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದರ ನಡುವೆ ಕೆಲ ಸ್ಟೆಪ್ಸ್ ಹಾಕಿದ್ದಾರೆ. ರೋಹಿತ್ ನೃತ್ಯ ಕಂಡ ಅವರ ಅಭಿಮಾನಿಗಳು ಕ್ರಿಕೆಟ್ ಹೊರತಾಗಿಯೂ ನಿಮ್ಮಲ್ಲಿ ಹಲವು ಪ್ರತಿಭೆಗಳಿದೆ ಎಂದು ಕಮೆಂಟ್ ಮಾಡುವ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ರೋಹಿತ್ ಶರ್ಮಾ ಕಳೆದ ಬಾಂಗ್ಲಾ ವಿರುದ್ಧದ ಏಕದಿನ ಸರಣಿಯಲ್ಲಿ ಕೈಬೆರಳಿಗೆ ಗಾಯಗೊಂಡು ಸರಣಿಯನ್ನು ಅರ್ಧದಲ್ಲೇ ಮೊಟಕುಗೊಳಿಸಿ ತವರಿಗೆ ಮರಳಿದ್ದರು. ಇದೀಗ ಲಂಕಾ ವಿರುದ್ಧದ ಸರಣಿ ಮೂಲಕ ತಂಡವನ್ನು ಮತ್ತೆ ಮುನ್ನಡೆಸಲು ಸಜ್ಜಾಗಿದ್ದಾರೆ. ಭಾರತ ಮತ್ತು ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಸರಣಿ ಜನವರಿ 10ರಿಂದ ಆರಂಭವಾಗಲಿದೆ.
ಇದನ್ನೂ ಓದಿ | IND VS SL | ಲಂಕಾ ವಿರುದ್ಧ ಶತಕ ಬಾರಿಸಿ ದಾಖಲೆ ಬರೆದ ಸೂರ್ಯಕುಮಾರ್ ಯಾದವ್