ಕೋಲ್ಕೊತಾ: ಶ್ರೀಲಂಕಾ(IND VS SL) ವಿರುದ್ಧದ ದ್ವಿತೀಯ ಏಕದಿನ ಪಂದ್ಯ ಇಂದು(ಗುರುವಾರ) ಈಡನ್ ಗಾರ್ಡನ್ನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿಗೆ ಭಾರತ ಕ್ರಿಕೆಟ್ ತಂಡದ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ದಾಖಲೆಯೊಂದನ್ನು ಮುರಿಯುವ ಅವಕಾಶವಿದೆ.
ಈಗಾಗಲೇ ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ(ಲಂಕಾ ವಿರುದ್ಧ 9 ಶತಕ) ಶತಕ ಬಾರಿಸುವ ಮೂಲಕ ಲಂಕಾ ವಿರುದ್ಧ ಅತಿ ಹೆಚ್ಚು ಶತಕ ಬಾರಿಸಿದ ಸಚಿನ್(ಲಂಕಾ ವಿರುದ್ಧ 8 ಶತಕ )ದಾಖಲೆಯನ್ನು ಮುರಿದಿದ್ದಾರೆ. ಜತೆಗೆ ತವರಿನಲ್ಲಿ 20 ಶತಕ ಬಾರಿಸಿದ ದಾಖಲೆಯನ್ನು ಸರಿಗಟ್ಟಿದ್ದರು.
ಇದೀಗ ದ್ವಿತೀಯ ಪಂದ್ಯದಲ್ಲಿ ಒಂದೊಮ್ಮೆ ವಿರಾಟ್ ಕೊಹ್ಲಿ ಶತಕ ಬಾರಿಸಿದರೆ ತವರಿನಲ್ಲಿ ಅತ್ಯಧಿಕ ಶತಕ ಬಾರಿಸಿದ ಟೀಮ್ ಇಂಡಿಯಾದ ಮೊದಲ ಆಟಗಾರ ಎಂಬ ದಾಖಲೆ ಬರೆಯಲಿದ್ದಾರೆ. ಈ ಮೂಲಕ ಸಚಿನ್ ದಾಖಲೆಯನ್ನು ಹಿಂದಿಕ್ಕುವ ಅವಕಾಶ ಅವರಿಗಿದೆ. ಸದ್ಯ ವಿರಾಟ್ ಮತ್ತು ಸಚಿನ್ 20 ಶತಕ ಬಾರಿಸಿ ಜಂಟಿ ದಾಖಲೆ ಹೊಂದಿದ್ದಾರೆ.
ಇದನ್ನೂ ಓದಿ | Virat Kohli | ಲಂಕಾ ವಿರುದ್ಧ ಶತಕ ಬಾರಿಸಿ ಸಚಿನ್ ತೆಂಡೂಲ್ಕರ್ ದಾಖಲೆ ಸರಿಗಟ್ಟಿದ ವಿರಾಟ್ ಕೊಹ್ಲಿ, ಏನದು ರೆಕಾರ್ಡ್?