ಮುಂಬಯಿ: ವೆಸ್ಟ್ ಇಂಡೀಸ್(IND vs WI T20 Squad) ವಿರುದ್ಧದ 5 ಪಂದ್ಯಗಳ ಟಿ20 ಸರಣಿಗೆ(West Indies vs India T20I) ಭಾರತ ತಂಡ ಪ್ರಕಟಗೊಂಡಿದೆ. ಹಿರಿಯ ಆಟಗಾರರಾದ ರೋಹಿತ್ ಶರ್ಮ(Rohit Sharma), ವಿರಾಟ್ ಕೊಹ್ಲಿ(virat kohli), ರವೀಂದ್ರ ಜಡೇಜಾ ಸೇರಿ ಹಲವರನ್ನು ಈ ಸರಣಿಯಿಂದ ಕೈ ಬಿಡಲಾಗಿದೆ. ಹಾರ್ದಿಕ್ ಪಾಂಡ್ಯ ನಾಯಕ, ಸೂರ್ಯಕುಮಾರ್ ಯಾದವ್ ಉಪನಾಯಕನಾಗಿದ್ದಾರೆ. 5 ಟಿ20 ಪಂದ್ಯಗಳ ಸರಣಿಯಲ್ಲಿ ಮೂರು ಪಂದ್ಯ ವಿಂಡೀಸ್ನಲ್ಲಿ ನಡೆದರೆ, ಅಂತಿಮ 2 ಪಂದ್ಯಗಳು ಅಮೆರಿಕದಲ್ಲಿ ಆಡಲಾಗುವುದು. ಮೊದಲ ಟಿ20 ಪಂದ್ಯ ಆಗಸ್ಟ್ 3ಕ್ಕೆ ನಡೆಯಲಿದೆ.
ಆಯ್ಕೆ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಅಜಿತ್ ಅಗರ್ಕರ್ ಅವರು ಆಯ್ಕೆ ಮಾಡಿದ ಮೊದಲ ತಂಡ ಇದಾಗಿದೆ. ಐಪಿಎಲ್ನಲ್ಲಿ ಮಿಂಚಿದ ಮುಂಬೈ ಇಂಡಿಯನ್ಸ್ ತಂಡದ ತಿಲಕ್ ವರ್ಮ, ರಾಜಸ್ಥಾನ್ ತಂಡದ ಯಶಸ್ವಿ ಜೈಸ್ವಾಲ್, ಕೇರಳದ ಸ್ಟಂಪರ್ ಸಂಜು ಸ್ಯಾಮ್ಸನ್ ಕೂಡ ಆಯ್ಕೆಯಾಗಿದ್ದಾರೆ.
ಟಿ20 ವಿಶ್ವ ಕಪ್ ಸೋತ ಬಳಿಕ ರೋಹಿತ್ ಶರ್ಮ, ವಿರಾಟ್ ಕೊಹ್ಲಿ ಸೇರಿ ಹಲವು ಆಟಗಾರರನ್ನು ವಿಶ್ರಾಂತಿಯ ನೆಪವೊಡ್ಡಿ ಯಾವುದೇ ಟಿ20 ಸರಣಿಗೆ ಆಯ್ಕೆ ಮಾಡಿರಲಿಲ್ಲ. ಇದೀಗ ಈ ಸರಣಿಗೂ ಅವರನ್ನು ಕೈ ಬಿಡಲಾಗಿದೆ. ಮೇಲ್ನೋಟಕ್ಕೆ ಈ ಆಟಗಾರರಿಗೆ ಟಿ20 ಕ್ರಿಕೆಟ್ನಲ್ಲಿ ಬಹುತೇಕ ಬಾಗಿಲು ಮುಚ್ಚಿದಂತೆ ತೋರುತ್ತಿದೆ. ಈಗಾಗಲೇ ಬಿಸಿಸಿಐ ಕೂಡ ಮುಂದಿನ ವರ್ಷ ನಡೆಯುವ ಟಿ20 ವಿಶ್ವಕಪ್ಗೆ ಭವಿಷ್ಯದ ತಂಡವನ್ನು ಕಟ್ಟುವ ದಿಸೆಯಿಂದ ಯುವ ಆಟಗಾರರಿಗೆ ಜಾಗ ನೀಡಲಾಗುತ್ತಿದೆ ಎಂದು ಹೇಳಿತ್ತು.
Alert🚨: #TeamIndia's squad for T20I series against the West Indies announced. https://t.co/AGs92S3tcz
— BCCI (@BCCI) July 5, 2023
ಇದನ್ನೂ ಓದಿ ವಿಸ್ತಾರ ಸಂಪಾದಕೀಯ : ವಿಶ್ವಕಪ್ಗೆ ವೆಸ್ಟ್ ಇಂಡೀಸ್ ತಂಡ ಅರ್ಹತೆಯನ್ನೇ ಪಡೆಯದಿರುವುದು ಕ್ರಿಕೆಟ್ ದುರಂತ
ಭಾರತ ಟಿ20 ತಂಡ
ಇಶಾನ್ ಕಿಶನ್, ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮ, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ(ನಾಯಕ), ಅಕ್ಷರ್ ಪಟೇಲ್, ಯಜುವೇಂದ್ರ ಚಹಲ್, ಕುಲ್ದೀಪ್ ಯಾದವ್, ರವಿ ಬಿಷ್ಟೋಯಿ, ಆರ್ಶ್ದೀಪ್ ಸಿಂಗ್, ಉಮ್ರಾನ್ ಮಲಿಕ್, ಆವೇಶ್ ಖಾನ್, ಮುಖೇಶ್ ಕುಮಾರ್.
ವೇಳಾಪಟ್ಟಿ
ಮೊದಲ ಟಿ20 ಪಂದ್ಯ ಆಗಸ್ಟ್ 3, ಸ್ಥಳ: ಟ್ರಿನಿಡಾಡ್
ದ್ವಿತೀಯ ಟಿ20 ಪಂದ್ಯ ಆಗಸ್ಟ್ 6, ಸ್ಥಳ: ಗಯಾನಾ
ಮೂರನೇ ಟಿ20 ಪಂದ್ಯ ಆಗಸ್ಟ್ 8, ಸ್ಥಳ: ಗಯಾನಾ
ನಾಲ್ಕನೇ ಟಿ20 ಪಂದ್ಯ ಆಗಸ್ಟ್ 12, ಸ್ಥಳ: ಫ್ಲೋರಿಡಾ
5ನೇ ಟಿ20 ಪಂದ್ಯ ಆಗಸ್ಟ್ 13, ಸ್ಥಳ: ಫ್ಲೋರಿಡಾ