ರೊಸೇಯೂ (ಡೊಮಿನಿಕಾ): ಆತಿಥೇಯ ವೆಸ್ಟ್ ಇಂಡೀಸ್(IND vs WI) ವಿರುದ್ಧದ ಮೊದಲ ಟೆಸ್ಟ್(West Indies vs India, 1st Test) ಪಂದ್ಯದಲ್ಲಿ ಟೀಮ್ ಇಂಡಿಯಾ ಇನಿಂಗ್ಸ್ ಹಾಗೂ 141 ರನ್ಗಳಿಂದ ಗೆಲುವು ಸಾಧಿಸಿದೆ. ಈ ಮೂಲಕ 2 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಕಾಯ್ದುಕೊಂಡಿದೆ. ಪಂದ್ಯ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ ಹಿರಿಯ,ಅನುಭವಿ ಸ್ಪಿನ್ನರ್ ಆರ್.ಅಶ್ವಿನ್ (Ravichandran Ashwin) ಹಲವು ದಿಗ್ಗಜರ ದಾಖಲೆಗಳನ್ನು ಹಿಂದಿಕ್ಕಿದ್ದಾರೆ.
ವಿಂಡ್ಸರ್ ಪಾರ್ಕ್‌ನ(Windsor Park Dominica)ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ವಿಂಡೀಸ್ ಮೊದಲ ಇನಿಂಗ್ಸ್ನಲ್ಲಿ 150 ರನ್ ಬಾರಿಸಿತು. ಇದಕ್ಕೆ ಪ್ರತಿಯಾಗಿ ಬ್ಯಾಟ್ ಮಾಡಿದ್ದ ಭಾರತ ಮೊದಲ ಇನಿಂಗ್ಸ್ನಲ್ಲಿ 421 ರನ್ ಬಾರಿಸಿ 271 ರನ್ಗಳ ಮುನ್ನಡೆಯೊಂದಿಗೆ ಡಿಕ್ಲೇರ್ ಘೋಷಿಸಿತು. 271 ರನ್ಗಳ ಗುರಿ ಬೆನ್ನಟ್ಟಿದ ವಿಂಡೀಸ್ ಕೇವಲ 130 ರನ್ಗೆ ಸರ್ವಪತನ ಕಂಡು ತವರಿನಲ್ಲಿ ಹೀನಾಯ ಸೋಲು ಕಂಡಿತು.
ಮೊದಲ ಇನಿಂಗ್ಸ್ ಮತ್ತು ದ್ವಿತೀಯ ಇನಿಂಗ್ಸ್ನಲ್ಲಿ ಅಮೋಗ ಬೌಲಿಂಗ್ ಪ್ರದರ್ಶಿಸಿದ ಆರ್.ಅಶ್ವಿನ್ ಒಟ್ಟು 12 ವಿಕೆಟ್ ಕಬಳಿಸಿ ಮಿಂಚಿದರು. ಈ ಸಾಧನೆಯೊಂದಿಗೆ ಅವರು ಕೆಲ ದಾಖಲೆಗಳನ್ನು ತಮ್ಮ ಹೆಸರಿಗೆ ಬರೆದರು. ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ಕೈ ಬಿಟ್ಟಿದ್ದ ಅಶ್ವಿನ್ ವಿಂಡೀಸ್ ವಿರುದ್ಧ ಶ್ರೇಷ್ಠ ಪ್ರದರ್ಶನ ತೋರುವ ಮೂಲಕ ತಮ್ಮ ಸಾಮರ್ಥ್ಯವನ್ನು ತೋರ್ಪಡಿಸಿದರು.
ಇದನ್ನೂ ಓದಿ IND vs WI: ಜೇಮ್ಸ್ ಆ್ಯಂಡರ್ಸನ್ ದಾಖಲೆ ಮುರಿದ ಆರ್.ಅಶ್ವಿನ್
WHAT. A. WIN! 🙌 🙌
— BCCI (@BCCI) July 14, 2023
A cracking performance from #TeamIndia to win the first #WIvIND Test in Dominica 👏 👏
Scorecard ▶️ https://t.co/FWI05P4Bnd pic.twitter.com/lqXi8UyKf1
ಅಶ್ವಿನ್ ನಿರ್ಮಿಸಿದ ದಾಖಲೆಗಳು
1. ವೆಸ್ಟ್ ಇಂಡೀಸ್‌ನಲ್ಲಿ ಒಂದೇ ಟೆಸ್ಟ್‌ನ ಎರಡೂ ಇನ್ನಿಂಗ್ಸ್‌ಗಳಲ್ಲಿ 5 ಅಥವಾ ಅದಕ್ಕಿಂತ ಹೆಚ್ಚಿನ ವಿಕೆಟ್‌ಗಳನ್ನು ಪಡೆದ ಮೊದಲ ಭಾರತೀಯ ಬೌಲರ್ ಎಂಬ ಹಿರಿಮೆಗೆ ಅಶ್ವಿನ್ ಪಾತ್ರರಾಗಿದ್ದಾರೆ.
2.ಟೆಸ್ಟ್ ಪಂದ್ಯವೊಂದರಲ್ಲಿ ಅತಿ ಹೆಚ್ಚು ಬಾರಿ ಅಂತಿಮ ವಿಕೆಟ್ ಉರುಳಿಸಿದ್ದ ಶೇನ್ ವಾರ್ನ್ ದಾಖಲೆಯನ್ನು ಅಶ್ವಿನ್ ಮುರಿದರು. ವಾರ್ನ್ ಅವರು 23ಬಾರಿ ಈ ಸಾಧನೆ ಮಾಡಿದ್ದರು.
3. ವೆಸ್ಟ್ ಇಂಡೀಸ್ ವಿರುದ್ಧ ಗರಿಷ್ಠ 6 ಬಾರಿ ಐದು ವಿಕೆಟ್ ಪಡೆದ ಬೌಲರ್ ಎನಿಸಿಕೊಳ್ಳುವ ಮೂಲಕ ಹರ್ಭಜನ್ ಸಿಂಗ್ ಅವರನ್ನು ಹಿಂದಿಕ್ಕಿದರು.
4. 12 ವಿಕೆಟ್ ಪಡೆದ ಅಶ್ವಿನ್ 8ನೇ ಬಾರಿ ಟೆಸ್ಟ್ ಪಂದ್ಯವೊಂದರಲ್ಲಿ 10ಕ್ಕಿಂತ ಹೆಚ್ಚು ವಿಕೆಟ್ ಪಡೆದ ಸಾಧನೆ ಮಾಡಿದರು. ಈ ಮೂಲಕ ಅನಿಲ್ ಕುಂಬ್ಳೆ ಅವರ ದಾಖಲೆಯನ್ನು ಸರಿಗಟ್ಟಿದರು. ಒಂದೊಮ್ಮೆ ಅಂತಿಮ ಟೆಸ್ಟ್ ಪಂದ್ಯದಲ್ಲಿಯೂ ಸ್ಪಿನ್ ಕಮಾಲ್ ಮಾಡಿ 10ಕ್ಕಿಂತ ಅಧಿಕ ವಿಕೆಟ್ ಪಡೆದರೆ ಈ ಸಾಧನೆ ಮಾಡಿದ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲಿದ್ದಾರೆ.