ಟ್ರಿನಿಡಾಡ್: ಆತಿಥೇಯ ವೆಸ್ಟ್ ಇಂಡೀಸ್(IND vs WI T20) ವಿರುದ್ಧದ ಭಾರತ ತಂಡ 5 ಪಂದ್ಯಗಳ ಟಿ20 ಸರಣಿಯನ್ನಾಡಲು ಸಜ್ಜಾಗಿದೆ. ಗುರುವಾರ ಮೊದಲ ಪಂದ್ಯವನ್ನಾಡುವ ಮೂಲಕ ಈ ಸರಣಿಗೆ ಚಾಲನೆ ದೊರೆಯಲಿದೆ. ಅಂತಿಮ ಎರಡು ಪಂದ್ಯಗಳು ಅಮೆರಿಕಾದಲ್ಲಿ ನಡೆಯಲಿದೆ. ಈ ಸರಣಿಯಲ್ಲಿ ಹಲವು ಭಾರತೀಯ ಆಟಗಾರರಿಗೆ ದಾಖಲೆ ಬರೆಯುವ ಅವಕಾಶವಿದೆ. ಯಾವೆಲ್ಲ ಆಟಗಾರರಿಗೆ ದಾಖಲೆ ನಿರ್ಮಿಸಬಹುದು ಎಂಬುದರ ಪಟ್ಟಿ ಇಂತಿವೆ.
1. ಕೇರಳದ ಸ್ಟಂಪರ್ ಸಂಜು ಸ್ಯಾಮ್ಸನ್(sanju samson) ಅವರು 21 ರನ್ ಗಳಿಸಿದರೆ. ಟಿ20 ಕ್ರಿಕೆಟ್‌ನಲ್ಲಿ 6000 ರನ್ ಪೂರೈಸಿದ ಸಾಧನೆ ಮಾಡಲಿದ್ದಾರೆ. ಈ ಮೂಲಕ ವಿರಾಟ್ ಕೊಹ್ಲಿ, ರೋಹಿತ್ ಶರ್ಮ ಅವರೊಂದಿಗೆ ಎಲೈಟ್ ಪಟ್ಟಿಗೆ ಸೇರ್ಪಡೆಗೊಳ್ಳಲಿದ್ದಾರೆ. ಜತೆಗೆ ಈ ಸಾಧನೆ ಮಾಡಿದ 12ನೇ ಭಾರತೀಯ ಆಟಗಾರ ಎನಿಸಿಕೊಳ್ಳಲಿದ್ದಾರೆ.
2. ಯಾರ್ಕರ್ ಕಿಂಗ್, ಎಡಗೈ ವೇಗಿ ಅರ್ಶ್ದೀಪ್ ಸಿಂಗ್(Arshdeep Singh) ಅವರು ಈ ಸರಣಿಯಲ್ಲಿ 9 ವಿಕೆಟ್ ಕೆಡವಿದರೆ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 50 ವಿಕೆಟ್ ಪೂರೈಸಲಿದ್ದಾರೆ. ಈ ಸಾಧನೆ ಮಾಡಿದ ಐದನೇ ಭಾರತೀಯ ವೇಗಿ ಎನಿಸಿಕೊಳ್ಳಿದ್ದಾರೆ. ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ, ಹಾರ್ದಿಕ್ ಪಾಂಡ್ಯ ಮತ್ತು ಜೂಲನ್ ಗೋಸ್ವಾಮಿ ಉಳಿದ ನಾಲ್ವರು ಈ ಸಾಧನೆ ಮಾಡಿದ ಭಾರತೀಯ ಆಟಗಾರರಾಗಿದ್ದಾರೆ.
3. ಟಿ20ಯ ನಂ.1 ಬ್ಯಾಟರ್, 360 ಖ್ಯಾತಿಯ ಸೂರ್ಯಕುಮಾರ್ ಯಾದವ್(Suryakumar Yadav) ಅವರು ಈ ಸರಣಿಯಲ್ಲಿ 325 ರನ್ ಬಾರಿಸಿದರೆ ಅಂತಾರಾಷ್ಟ್ರೀಯ ಟಿ20ಯಲ್ಲಿ 2 ಸಾವಿರ ರನ್ ಪೂರ್ತಿಗೊಳಿಸಇದ ಸಾಧನೆ ಮಾಡಲಿದ್ದಾರೆ. ಈ ಮೂಲಕ ಈ ಸಾಧನೆ ತೋರಿದ 7ನೇ ಭಾರತೀಯ ಆಟಗಾರನಾಗಲಿದ್ದಾರೆ. ಜತೆಗೆ ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್ ಮತ್ತು ರೋಹಿತ್ ಶರ್ಮ ಅವರೊಂದಿಗೆ ಎಲೈಡ್ ಪಟ್ಟಿಗೆ ಸೇರ್ಪಡೆಯಾಗಲಿದ್ದಾರೆ.
4. ಆಲ್ರೌಂಡರ್ ಅಕ್ಷರ್ ಪಟೇಲ್(Axar Patel) ಅವರು 80 ರನ್ ಗಳಿಸಿದರೆ ಟಿ20 ಕ್ರಿಕೆಟ್‌ನಲ್ಲಿ 2500 ರನ್ ಪೂರ್ತಿಗೊಳಿಸಲಿದ್ದಾರೆ. ಈ ಮೂಲಕ ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ ಬಳಿಕ 2500 ಟಿ20 ರನ್ ಮತ್ತು 150 ಅಥವಾ ಅದಕ್ಕಿಂತ ಹೆಚ್ಚಿನ ವಿಕೆಟ್‌ಗಳನ್ನು ಪಡೆದ ಎರಡನೇ ಕ್ರಿಕೆಟಿಗನಾಗಲಿ ಎನಿಸಿಕೊಳ್ಳಲಿದ್ದಾರೆ.
5. ನಾಯಕ ಹಾರ್ದಿಕ್ ಪಾಂಡ್ಯ(Hardik Pandya) ಅವರು 2 ವಿಕೆಟ್ ಉರುಳಿಸಿದರೆ ಟಿ20 ಕ್ರಿಕೆಟ್‌ನಲ್ಲಿ 150 ವಿಕೆಟ್‌ಗಳನ್ನು ಪೂರ್ಣಗೊಳಿಸಲಿದ್ದಾರೆ.
ಇದನ್ನೂ ಓದಿ IND vs WI T20: ಭಾರತ-ವಿಂಡೀಸ್ ಮೊದಲ ಟಿ20; ಹವಾಮಾನ ಇಲಾಖೆಯ ಮುನ್ಸೂಚನೆ ಹೇಗಿದೆ?
6. ಅನುಭವಿ ಸ್ಪಿನ್ನರ್ ಯಜುವೇಂದ್ರ ಚಹಲ್(Yuzvendra Chahal) ಅವರು 9 ವಿಕೆಟ್ ಪಡೆದರೆ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 100 ವಿಕೆಟ್ ಪೂರ್ತಿಗೊಳಿಸುವ ಜತೆಗೆ ಈ ಸಾಧನೆ ಮಾಡಿದ ಮೊದಲ ಭಾರತೀಯ ಆಟಗಾರ ಎನಿಸಿಕೊಳ್ಳಲಿದ್ದಾರೆ.