ಬಾರ್ಬಡೋಸ್: ಪ್ರವಾಸಿ ಭಾರತ ಮತ್ತು ಆತಿಥೇಯ ವೆಸ್ಟ್ ಇಂಡೀಸ್(IND vs WI) ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಗೆ(West Indies vs India, 1st ODI) ಗುರುವಾರ ಚಾಲನೆ ಲಭಿಸಲಿದೆ. ಆದರೆ ಈ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ(weather forecast) ಸಾಧ್ಯತೆ ಅಧಿಕ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಕ್ರಿಕೆಟ್ ಅಭಿಮಾನಿಗಳಿಗೆ ನಿರಾಶೆ ಮೂಡಿಸಿದೆ. ಮುಂಬರುವ ಏಷ್ಯಾ ಕಪ್ ಹಾಗೂ ಏಕದಿನ ವಿಶ್ವಕಪ್ ಪಂದ್ಯಾವಳಿಯ ಹಿನ್ನೆಲೆಯಲ್ಲಿ ಭಾರತಕ್ಕೆ ಇದೊಂದು ಮಹತ್ವದ ಸರಣಿ ಆಗಿದೆ. ಆದರೆ ವಿಶ್ವಕಪ್ಗೆ ಅರ್ಹತೆ ಪಡೆದುಕೊಳ್ಳದ ವಿಂಡೀಸ್ಗೆ ಈ ಪಂದ್ಯ ನಡೆಯದಿದ್ದರೂ ಚಿಂತೆಯಿಲ್ಲ ಎನ್ನುವಂತಿದೆ.
ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್ ಸ್ಟೇಡಿಯಂನಲ್ಲಿ(Kensington Oval, Bridgetown, Barbados) ನಡೆಯುವ ಈ ಪಂದ್ಯ ಭಾರತೀಯ ಕಾಲಮಾನ ಸಂಜೆ 7 ಗಂಟೆಗೆ ಆರಂಭವಾಗಲಿದೆ. ವಿಂಡೀಸ್ನಲ್ಲಿ ಮಧ್ಯಾಹ್ನ 1.30ಕ್ಕೆ ಪಂದ್ಯ ಆರಂಭವಾಗುತ್ತದೆ. ಹವಾಮಾನ ಇಲಾಖೆ ಬುಧವಾರ ನೀಡಿದ ಮಾಹಿತಿ ಪ್ರಕಾರ ಪಂದ್ಯದ ವೇಳೆ ಶೇ.7 ರಷ್ಟು ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿತ್ತು. ಆದರೆ ಗುರುವಾರ ನೀಡಿದ ಹೊಸ ಮುನ್ಸೂಚನೆಯಲ್ಲಿ ವಿಂಡೀಸ್ ಕಾಲಮಾನದ ಪ್ರಕಾರ ರಾತ್ರಿ ಭಾರಿ ಮಳೆಯಾಗಲಿದೆ ಎಂದು ತಿಳಿಸಿದೆ. ಹೀಗಾಗಿ ದ್ವಿತೀಯ ಇನಿಂಗ್ಸ್ ಆಟ ನಡೆಯುವುದು ಅನುಮಾನ ಎನ್ನಲಾಗಿದೆ.
ಇದನ್ನೂ ಓದಿ IND vs WI: ಭಾರತ-ವೆಸ್ಟ್ ಇಂಡೀಸ್ ನಡುವಿನ ಏಕದಿನ ಸರಣಿಯ ಇತಿಹಾಸವೇ ರೋಚಕ
ಪೋರ್ಟ್ ಆಫ್ ಸ್ಪೇನ್ನಲ್ಲಿ ನಡೆದ ಅಂತಿಮ ಟೆಸ್ಟ್ ಪಂದ್ಯದ ನಾಲ್ಕನೇ ಮತ್ತು ಕೊನೆಯ ದಿನ ಮಳೆ ಅಡ್ಡಿಪಡಿಸಿತ್ತು. ಅದರಲ್ಲೂ 5ನೇ ಮಳೆ ಆಟಕ್ಕೆ ಅನುವು ಮಾಡಿ ಕೊಡಲೇ ಇಲ್ಲ. ಹೀಗಾಗಿ ಪಂದ್ಯವನ್ನು ಡ್ರಾದಲ್ಲಿ ಮುಗಿಸಲಾಗಿತ್ತು. ಇದೀಗ ಏಕದಿನ ಸರಣಿಗೂ ಮಳೆ ಅಡ್ಡಿಪಡಿಸುವು ಎಲ್ಲ ಲಕ್ಷಣ ಕಂಡುಬಂದಿದೆ.
ODI 𝙍𝙀𝘼𝘿𝙔! 👌 👌#TeamIndia | #WIvIND pic.twitter.com/tYf0wGq7tR
— BCCI (@BCCI) July 26, 2023
ಮುಖಾಮುಖಿ
ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳು ಇದುವರೆಗೆ 139 ಏಕದಿನ ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ಭಾರತ 70 ಪಂದ್ಯಗಳನ್ನು ಗೆದ್ದರೆ, ವಿಂಡೀಸ್ 63 ಪಂದ್ಯಗಳನ್ನು ಜಯಿಸಿದೆ. 2 ಪಂದ್ಯಗಳು ಟೈಗೊಂಡಿದೆ. 4 ಪಂದ್ಯಗಳು ಫಲಿತಾಂಶ ಕಂಡಿಲ್ಲ.
ಸಂಭಾವ್ಯ ತಂಡಗಳು
ಭಾರತ: ರೋಹಿತ್ ಶರ್ಮ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್/ ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜ, ಯಜುವೇಂದ್ರ ಚಹಲ್, ಜೈದೇವ್ ಉನಾದ್ಕತ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್/ ಮುಕೇಶ್ ಕುಮಾರ್.
ವೆಸ್ಟ್ ಇಂಡೀಸ್: ಶೈ ಹೋಪ್ (ನಾಯಕ), ರೋವ್‌ಮನ್ ಪೊವೆಲ್ (ಉಪನಾಯಕ),ಕೈಲ್ ಮೇಯರ್ಸ್, ಅಲಿಕ್ ಅಥಾನಾಜೆ, ಶಿಮ್ರಾನ್ ಹೆಟ್‌ಮೇರ್, ಅಲ್ಜಾರಿ ಜೋಸೆಫ್, ರೊಮಾರಿಯೋ ಶೆಫರ್ಡ್, ಕೆವಿನ್ ಸಿಂಕ್ಲರ್, ಒಶಾನೆ ಥೋಮಸ್, ಬ್ರ್ಯಾಂಡನ್ ಕಿಂಗ್.