IND vs WI: ಭಾರತದ ಬಿಗು ಬೌಲಿಂಗ್​ ದಾಳಿಗೆ ನಲುಗಿದ ವಿಂಡೀಸ್​ - Vistara News

ಕ್ರಿಕೆಟ್

IND vs WI: ಭಾರತದ ಬಿಗು ಬೌಲಿಂಗ್​ ದಾಳಿಗೆ ನಲುಗಿದ ವಿಂಡೀಸ್​

ಕ್ರಿಕೆಟ್​ ಇತಿಹಾಸದಲ್ಲಿ ತಂದೆ ಹಾಗೂ ಮಗನನ್ನು ಔಟ್ ಮಾಡಿದ ಭಾರತದ ಮೊದಲ ಬೌಲರ್​ ಎಂಬ ವಿಶೇಷ ದಾಖಲೆಯೊಂದನ್ನು ಆರ್​. ಅಶ್ವಿನ್​ ಬರೆದಿದ್ದಾರೆ.

VISTARANEWS.COM


on

Ishan Kishan keeps Alick Athanaze in check
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರೊಸೇಯೂ (ಡೊಮಿನಿಕಾ): ಭಾರತದ ಬಿಗು ಬೌಲಿಂಗ್ ದಾಳಿಗೆ ರನ್​ ಗಳಿಸಲು ಪರದಾಡಿದ ವೆಸ್ಟ್​ ಇಂಡೀಸ್​ ಮೊದಲ ಟೆಸ್ಟ್​ ಪಂದ್ಯದಲ್ಲಿ ಅಲ್ಪ ಮೊತ್ತಕ್ಕೆ ಕುಸಿಯುವ ಭೀತಿಯಲ್ಲಿದೆ. ಸದ್ಯ 48 ಓವರ್​ಗೆ 5 ವಿಕೆಟ್​ ಕಳೆದುಕೊಂಡು 117 ರನ್​ ಗಳಿಸಿ ಆಟ ಮುಂದುವರಿಸಿದೆ. (ಇದು 49 ಓವರ್​ ತನಕದ ಆಟದ ವರದಿಯಾಗಿದೆ).

ವಿಂಡ್ಸರ್ ಪಾರ್ಕ್‌ನಲ್ಲಿ(Windsor Park Dominica) ಬುಧವಾರ ಆರಂಭಗೊಂಡ ಟೆಸ್ಟ್​ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ವಿಂಡೀಸ್​ ಆರಂಭದಲ್ಲಿ ತಾಳ್ಮೆಯುವ ಬ್ಯಾಟಿಂಗ್​ ನಡೆಸಿ ಉತ್ತಮ ಮೊತ್ತ ಕಲೆ ಹಾಕುವ ಸೂಚನೆ ನೀಡಿದರು. ಆದರೆ ತಂಡದ ಮೊತ್ತ 30 ದಾಡಿದ್ದೇ ತಡ ವಿಂಡೀಸ್​ ಪತನವು ಆರಂಭಗೊಂಡಿತು. ಆರ್​. ಅಶ್ವಿನ್​ ಅವರು ಶಿವನಾರಾಯಣ್​ ಚಂದ್ರಪಾಲ್​ ಅವರ ಪುತ್ರ ತೇಜನಾರಾಯಣ ಚಂದ್ರಪಾಲ್ ವಿಕೆಟ್​ ಕಿತ್ತು ಭಾರತಕ್ಕೆ ಆರಂಭಿಕ ಮುನ್ನಡೆ ತಂದುಕೊಟ್ಟರು. ಇದೇ ವೇಳೆ ಅವರು ಕ್ರಿಕೆಟ್​ ಇತಿಹಾಸದಲ್ಲಿ ತಂದೆ ಹಾಗೂ ಮಗನನ್ನು ಔಟ್ ಮಾಡಿದ ಭಾರತದ ಮೊದಲ ಬೌಲರ್​ ಎಂಬ ವಿಶೇಷ ದಾಖಲೆಯೊಂದನ್ನು ಬರೆದರು. 2011 ರಲ್ಲಿ ಶಿವನಾರಾಯಣ್​ ಚಂದ್ರಪಾಲ್ ಅವರನ್ನು ಅಶ್ವಿನ್ ಎಲ್​ಬಿಡಬ್ಲ್ಯೂ ಮಾಡಿ ಔಟ್ ಮಾಡಿದ್ದರು.

ಭಾರತ ಪರ ಇಶಾನ್​ ಕಿಶನ್​(Ishan Kishan) ಮತ್ತು ಯಶಸ್ವಿ ಜೈಸ್ವಾಲ್(Yashasvi Jaiswal)​ ಅವರು ಚೊಚ್ಚಲ ಕ್ಯಾಪ್​ ಧರಿಸಿದರು. ಇಶಾನ್​ ಕಿಶನ್​ ಅವರು ಈಗಾಗಲೇ ಏಕದಿನ ಮತ್ತು ಟಿ 20 ಕ್ರಿಕೆಟ್​ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದರು. ಜತೆಗೆ ಅನೇಕ ಟೆಸ್ಟ್​ ಸರಣಿಗೆ ಆಯ್ಕೆಯೂ ಆಗಿದ್ದರೂ, ಆದರೆ ಆಡುವ ಅವಕಾಶ ಸಿಕ್ಕಿರಲಿಲ್ಲ. ಶ್ರೀಕರ್​ ಭರತ್​ ಅವರಿಗೆ ಹೆಚ್ಚಿನ ಅವಕಾಶ ನೀಡಲಾಗಿತ್ತು. ಆದರೆ ಭರತ್​ ವಿಕೆಟ್​ ಕೀಪಿಂಗ್​ ಮತ್ತು ಬ್ಯಾಟಿಂಗ್​ನಲ್ಲಿ ನಿರೀಕ್ಷಿತ ಮಟ್ಟದ ಪ್ರದರ್ಶನ ತೋರುವಲ್ಲಿ ವಿಫಲರಾಗಿದ್ದರು. ಇದೇ ಕಾರಣದಿಂದ ಇಶಾನ್​ ಕಿಶನ್​ಗೆ ಈ ಸರಣಿಯಲ್ಲಿ ಆಡುವ ಅವಕಾಶ ನೀಡಲಾಗಿದೆ. ಇಶಾನ್​ ಕಿಶನ್​ಗೆ ವಿರಾಟ್​ ಕೊಹ್ಲಿ ಕ್ಯಾಪ್​ ನೀಡಿ ತಂಡಕ್ಕೆ ಬರಮಾಡಿಕೊಂಡರು. ಜೈಸ್ವಾಲ್​ಗೆ ನಾಯಕ ರೋಹಿತ್​ ಶರ್ಮ ಕ್ಯಾಪ್ ನೀಡಿದರು.

ಇದನ್ನೂ ಓದಿ IND vs WI 1st Test: ಭಾರತ ಟೆಸ್ಟ್​ ತಂಡಕ್ಕೆ ಪದಾರ್ಪಣೆ ಮಾಡಿದ ಜೈಸ್ವಾಲ್​,ಇಶಾನ್​ ಕಿಶನ್​

ಸದ್ಯ ವಿಂಡೀಸ್​ ಪರ ಅಲಿಕ್ ಅಥಾನಾಜೆ(41*) ಮತ್ತು ಜಾಸನ್​ ಹೋಲ್ಡರ್​(18*) ರನ್​ ಗಳಿಸಿ ಆಡುತ್ತಿದ್ದಾರೆ. ಇದು 49 ಓವರ್​ ತನಕದ ಆಟದ ವರದಿಯಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

T20 World Cup 2024: ಸಂಭ್ರಮಾಚರಣೆ ವೇಳೆ ದುರಂತ: ಧ್ವಜ ಹಾರಿಸಲು ಹೋಗಿ ಬಿದ್ದ ಅಭಿಮಾನಿ; ವೈರಲ್‌ ವಿಡಿಯೊ ಇಲ್ಲಿದೆ

T20 World Cup 2024: ಟಿ20 ವಿಶ್ವಕಪ್​ 2024 ಚಾಂಪಿಯನ್‌ ಆಗಿ ಹೊರ ಹೊಮ್ಮಿರುವ ಟೀಮ್‌ ಇಂಡಿಯಾ ತಂಡಕ್ಕೆ ಅಭಿನಂದನಾ ಪ್ರವಾಹವೇ ಹರಿದು ಬರುತ್ತಿದೆ. ಜತೆಗೆ ವಿಶ್ವದ ನಾನಾ ಕಡೆ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಸಂಭ್ರಮಾಚರಣೆ ಮಧ್ಯೆ ಲಂಡನ್‌ಲ್ಲಿ ಅನಾಹುತವೊಂದು ಜರುಗಿದ್ದು, ಕಂಬದ ಮೇಲೆ ಭಾರತೀಯ ಧ್ವಜವನ್ನು ಹಾರಿಸಲು ಪ್ರಯತ್ನಿಸುತ್ತಿದ್ದಾಗ ಅಭಿಮಾನಿಯೊಬ್ಬರು ನೆಲಕ್ಕೆ ಬಿದ್ದು ಬಿಟ್ಟಿದ್ದಾರೆ. ಸದ್ಯ ಅವರು ಬೀಳುವ ದೃಶ್ಯ ವೈರಲ್‌ ಆಗಿದೆ.

VISTARANEWS.COM


on

T20 World Cup 2024
Koo

ಲಂಡನ್‌: ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್​ನಲ್ಲಿ ನಡೆದ ಟಿ20 ವಿಶ್ವಕಪ್​ 2024 (T20 World Cup 2024) ಫೈನಲ್​ನಲ್ಲಿ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾವನ್ನು ಸೋಲಿಸುವ ಮೂಲಕ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ವಿಶ್ವಾದ್ಯಂತ ಭಾರತ ತಂಡದ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಇಂಗ್ಲೆಂಡ್‌ನಲ್ಲಿಯೂ ಭಾರತೀಯರ ಸಡಗರ ಮುಗಿಲು ಮುಟ್ಟಿದ್ದು, ಸಾವಿರಾರು ಮಂದಿ ಜಮಾಯಿಸಿ ಸಂತಸ ಹಂಚಿಕೊಂಡಿದ್ದಾರೆ. ಸಂಭ್ರಮಾಚರಣೆ ಮಧ್ಯೆ ಲಂಡನ್‌ಲ್ಲಿ ಅನಾಹುತವೊಂದು ಜರುಗಿದ್ದು, ಕ್ವೀನ್ಸ್ಬರಿ ಟ್ಯೂಬ್ ನಿಲ್ದಾಣ (Queensbury tube station)ದ ಹೊರಗಿನ ಕಂಬದ ಮೇಲೆ ಭಾರತೀಯ ಧ್ವಜವನ್ನು ಹಾರಿಸಲು ಪ್ರಯತ್ನಿಸುತ್ತಿದ್ದಾಗ ಅಭಿಮಾನಿಯೊಬ್ಬರು ನೆಲಕ್ಕೆ ಬಿದ್ದು ಬಿಟ್ಟಿದ್ದಾರೆ. ಸದ್ಯ ಅವರು ಬೀಳುವ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ವೈರಲ್‌ ಆಗಿದೆ (Viral Video).

ಧ್ವಜ ಕಟ್ಟಲು ಕಂಬ ಏರಿದ ಅಭಿಮಾನಿ ಕೈ ಜಾರಿ ನೆಲಕ್ಕೆ ಬೀಳುವುದು ವಿಡಿಯೊದಲ್ಲಿ ಕಂಡು ಬಂದಿದೆ. ಅವರ ಮುಖಕ್ಕೆ ಸಣ್ಣಪುಟ್ಟ ಗಾಯಗಳಾಗಿದ್ದು, ಬಳಿಕ ಎದ್ದ ಓಡಾಡಿದ್ದಾರೆ. ಆ ಮೂಲಕ ಬಹುದೊಡ್ಡ ಅನಾಹುತ ತಪ್ಪಿದಂತಾಗಿದೆ.

ನಗರದ ಈಲಿಂಗ್ ರಸ್ತೆಯ ಮತ್ತೊಂದು ಭಾಗದಲ್ಲಿಯೂ ಸಂಭ್ರಮಾಚರಣೆ ಆಯೋಜಿಸಲಾಗಿತ್ತು. ಈ ವೇಳೆ ಪೊಲೀಸರು ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದಿದ್ದಾರೆ. ಆದರೆ ಬಂಧನಕ್ಕೆ ಕಾರಣ ತಿಳಿದಿಲ್ಲ. ಇತ್ತ ಹ್ಯಾರೋದಲ್ಲಿ ಅಭಿಮಾನಿಗಳು ಪಟಾಕಿಗಳು ಸಿಡಿಸಿ ಸಂತಸ ಹಂಚಿಕೊಂಡಿದ್ದಾರೆ.

ಕೆನ್ಸಿಂಗ್ಟನ್ ಓವಲ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು ಏಳು ರನ್‌ಗಳಿಂದ ಸೋಲಿಸುವ ಮೂಲಕ ಭಾರತವು 17 ವರ್ಷಗಳ ನಂತರ ಟಿ20 ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ವಿರಾಟ್ ಕೊಹ್ಲಿ 59 ಎಸೆತಗಳಲ್ಲಿ 76 ರನ್ ಮತ್ತು ಹಾರ್ದಿಕ್ ಪಾಂಡ್ಯ ಅವರ ನಿರ್ಣಾಯಕ ಮೂರು ವಿಕೆಟ್‌ಗಳು ಭಾರತವು ಎರಡನೇ ಐಸಿಸಿ ಟಿ20 ವಿಶ್ವಕಪ್‌ ಗೆಲ್ಲಲು ನೆರವಾಯಿತು. ಈ ಗೆಲುವಿನ ನಂತರ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಇಬ್ಬರೂ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದರು.

ಬಹುಮಾನದ ಮೊತ್ತ

ಭಾರತ ತಂಡಕ್ಕೆ ಭಾರಿ ಮೊತ್ತದ ಬಹುಮಾನ ಲಭಿಸಿದೆ. $ 2.45 ಮಿಲಿಯನ್ ಯುಎಸ್‌ಡಿ (20,42,49,000 ರೂ.) ಪಡೆದಿದೆ. ಇದು ಪಂದ್ಯಾವಳಿಯ ಇತಿಹಾಸದಲ್ಲಿ ಇದುವರೆಗೆ ನೀಡಲಾದ ಅತ್ಯಧಿಕ ಮೊತ್ತವಾಗಿದೆ. ರನ್ನರ್​ ಅಪ್​ ದಕ್ಷಿಣ ಆಫ್ರಿಕಾ ತಂಡಕ್ಕೆ 1,280,000 ಯುಎಸ್‌ಡಿ (10,68,06,400 ರೂ.) ಲಭಿಸಿದೆ. ಈ ಬಾರಿಯ ಟಿ20 ವಿಶ್ವಕಪ್ ಟೂರ್ನಿಯ ಒಟ್ಟು ಬಹುಮಾನ ಮೊತ್ತ 11.25 ಮಿಲಿಯನ್ ಯುಸ್ ಡಾಲರ್ ಆಗಿತ್ತು.

ಟೀಮ್​ ಇಂಡಿಯಾಕ್ಕೆ ಧನ್ಯವಾದ ತಿಳಿಸಿದ ಧೋನಿ

ಟೀಮ್​ ಇಂಡಿಯಾಕ್ಕೆ ಚೊಚ್ಚಲ ಟಿ20 ವಿಶ್ವಕಪ್ ಗೆದ್ದಕೊಟ್ಟ ನಾಯಕ ಮಹೇಂದ್ರ ಸಿಂಗ್​ ಧೋನಿ ವಿಶೇಷವಾಗಿ ಶುಭ ಹಾರೈಸಿದ್ದಾರೆ. ನನ್ನ ಹುಟ್ಟು ಹಬ್ಬಕ್ಕೆ ಮುಂಚಿತವಾಗಿಯೇ ಸ್ಮರಣೀಯ ಉಡುಗೊರೆ ನೀಡಿದ್ದಕ್ಕೆ ಟೀಮ್​ ಇಂಡಿಯಾಕ್ಕೆ ಧನ್ಯವಾದಗಳು ಎಂದು ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್​ ಮಾಡಿದ್ದಾರೆ.

ಚಾಂಪಿಯನ್​ ತಂಡದ ಫೋಟೊವನ್ನು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಿರುವ ಧೋನಿ, ನನ್ನ ಎದೆ ಬಡಿತ ಹೆಚ್ಚಾಗಿತ್ತು. ಆದರೆ ದೃಢ ನಂಬಿಕೆಯೊಂದಿಗೆ ನೀವೆಲ್ಲರೂ ಉತ್ತಮವಾಗಿ ಆಡಿದ್ದೀರಿ. ತವರಿನ ಮತ್ತು ವಿಶ್ವದೆಲ್ಲಡೆ ಇರುವ ಎಲ್ಲಾ ಭಾರತೀಯರಿಂದ, ವಿಶ್ವಕಪ್ ಮರಳಿ ಮನೆಗೆ ತಂದಿದ್ದಕ್ಕಾಗಿ ಧನ್ಯವಾದಗಳು. ಅಭಿನಂದನೆಗಳು. ಜತೆಗೆ ನನ್ನ ಹುಟ್ಟುಹಬ್ಬದ ಉಡುಗೊರೆಗೆ ಧನ್ಯವಾದಗಳು” ಎಂದು ಧೋನಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: T20 World Cup final: ತ್ರಿವರ್ಣ ಧ್ವಜ ಹಿಡಿದು ಜಮ್ಮು-ಕಾಶ್ಮೀರದಲ್ಲಿ ಮೊಳಗಿದ ವಿಜಯೋತ್ಸವ

Continue Reading

ಕ್ರೀಡೆ

Rohit Sharma: ವಿಶ್ವಕಪ್​ ಗೆದ್ದ ನಾಯಕ ರೋಹಿತ್​ಗೆ ಆಶೀರ್ವಾದ ಮಾಡಿದ ಕಾಂತಾರದ ‘ಪಂಜುರ್ಲಿ’ ದೈವ!

Rohit Sharma: ಕಾಂತಾರ ಸಿನಿಮಾದಲ್ಲಿ ಪಂಜುರ್ಲಿ ದೈವಾವೇಷದ ದೈವನರ್ತನ ಪಾತ್ರವು ಭಾರಿ ಗಮನ ಸೆಳೆದಿತ್ತು. ಇದೇ ದೈವ ನರ್ತಕನು, 17 ವರ್ಷಗಳ ಬಳಿಕ ಟಿ20 ವಿಶ್ವಕಪ್​ ಗೆಲ್ಲಿಸಿಕೊಟ್ಟ ಸಂಭ್ರಮದಲ್ಲಿ ಮೈದಾನದಲ್ಲೇ ಮಲಗಿದ ನಾಯಕ ರೋಹಿತ್​ ಶರ್ಮ ಅವರಿಗೆ ಆಶೀರ್ವಾದ ಮಾಡುವ, ಸ್ಫೂರ್ತಿ ತುಂಬಿ ಬಡಿದೆಬ್ಬಿಸುವ ರೀತಿಯ ಫೋಟೊಗಳನ್ನು ನೆಟ್ಟಿಗರು ಹಂಚಿಕೊಂಡಿದ್ದಾರೆ

VISTARANEWS.COM


on

Koo

ಬಾರ್ಬಡೋಸ್​: ಭಾರತೀಯ ಕ್ರಿಕೆಟ್​ ಅಭಿಮಾನಿಗಳು ಕಳೆದ 13 ವರ್ಷಗಳಿಂದ ಶಬರಿ ರಾಮನಿಗೆ ಕಾದಂತೆ ಕಾಯುತ್ತಿದ್ದ ಐಸಿಸಿ ಟ್ರೋಫಿ ಕನಸು ಕೊನೆಗೂ ನನಸಾಗಿದೆ. ಶನಿವಾರ ಬ್ರಿಜ್‌ಟೌನ್‌ನ ಕೆನ್ಸಿಂಗ್ಟನ್‌ ಓವಲ್​ನಲ್ಲಿ ನಡೆದಿದ್ದ ಟಿ20 ವಿಶ್ವಕಪ್​ ಫೈನಲ್(T20 World Cup 2024)​ ಪಂದ್ಯದಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾವನ್ನು(South Africa vs India) ಮಣಿಸಿ 17 ವರ್ಷಗಳ ಬಳಿಕ ಮತ್ತೊಂದು ಟಿ20 ವಿಶ್ವಕಪ್​ ಗೆದ್ದ ಸಾಧನೆ ಮಾಡಿತು. ಈ ಸಾಧನೆಗೆ ತಂಡದ ನಾಯಕ ರೋಹಿತ್​ ಶರ್ಮಗೆ(Rohit Sharma) ಕನ್ನಡದ ಕಾಂತಾರ(kantara) ಸಿನಿಮಾದ ಪಂಜುರ್ಲಿ ದೈವ(kantara panjurli) ಆಶೀರ್ವಾದ ಮಾಡಿದೆ ಎಂಬ ಪೋಸ್ಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿವೆ.

ಹೌದು, ಕಾಂತಾರ ಸಿನಿಮಾದಲ್ಲಿ ಪಂಜುರ್ಲಿ ದೈವಾವೇಷದ ದೈವನರ್ತನ ಪಾತ್ರವು ಭಾರಿ ಗಮನ ಸೆಳೆದಿತ್ತು. ಇದೇ ದೈವ ನರ್ತಕನು, 17 ವರ್ಷಗಳ ಬಳಿಕ ಟಿ20 ವಿಶ್ವಕಪ್​ ಗೆಲ್ಲಿಸಿಕೊಟ್ಟ ಸಂಭ್ರಮದಲ್ಲಿ ಮೈದಾನದಲ್ಲೇ ಮಲಗಿದ ನಾಯಕ ರೋಹಿತ್​ ಶರ್ಮ ಅವರಿಗೆ ಆಶೀರ್ವಾದ ಮಾಡುವ, ಸ್ಫೂರ್ತಿ ತುಂಬಿ ಬಡಿದೆಬ್ಬಿಸುವ ರೀತಿಯ ಫೋಟೊಗಳನ್ನು ನೆಟ್ಟಿಗರು ಹಂಚಿಕೊಂಡಿದ್ದಾರೆ. “ಕಾಂತಾರದ ಪಂಜುರ್ಲಿ ದೈವವು ಭಾರತ ತಂಡದ ಗೆಲುವಿಗೆ ಮತ್ತು ರೋಹಿತ್​ ಅವರ ಕನಸಿನ ವಿಶ್ವಕಪ್​ ಗೆಲ್ಲುವಲ್ಲಿ ನೆರವಾಯಿತು” ಎಂದೆಲ್ಲ ನೆಟ್ಟಿಗರು ಬರೆದುಕೊಂಡಿದ್ದಾರೆ. ಈ ಫೋಟೊಗಳು ಹಾಗೂ ಪೋಸ್ಟ್‌ಗಳು ಭಾರಿ ವೈರಲ್‌ ಆಗಿವೆ.

ವಿದಾಯ ಹೇಳಿದ ರೋಹಿತ್​


ನಾಯಕನಾಗಿ ಮತ್ತು ಆಟಗಾರನಾಗಿ 2 ಟಿ20 ವಿಶ್ವಕಪ್​ ಗೆದ್ದ ರೋಹಿತ್​ ಗೆಲುವಿನ ಬಳಿಕ ಟಿ20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದರು. ಈ ಮೂಲಕ ಸ್ಮರಣೀಯ ವಿದಾಯ ಪಡೆದರು. ಪಂದ್ಯದ ಬಳಿಕ ಮಾತನಾಡಿದ ರೋಹಿತ್​, “ಇದು ನನ್ನ ಕೊನೆಯ ಅಂತಾರಾಷ್ಟ್ರೀಯ ಟಿ20 ಪಂದ್ಯ. ಚುಟುಕು ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಲು ಇದಕ್ಕಿಂತ ಸಕಾಲ ಇನ್ನೊಂದಿಲ್ಲ. ನಾನು ಮೊದಲು ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ್ದೇ ಟಿ20 ಆಡುವ ಮೂಲಕ. ನಾಕಯನಾಗಿ ನಾನು ಕಪ್ ಗೆಲ್ಲಬೇಕೆಂದು ಬಯಸಿದ್ದೆ. ಇದು ಸಾಕಾರಗೊಂಡಿದೆ” ಎಂದು ಹೇಳುವ ಮೂಲಕ ವಿದಾಯ ಹೇಳಿದರು. ಟಿ20ಯಲ್ಲಿ 159 ಪಂದ್ಯಗಳನ್ನು ಆಡಿರುವ ರೋಹಿತ್‌, 4231 ರನ್‌ ಗಳಿಸಿದ್ದು, 5 ಶತಕ ಹಾಗೂ 37 ಅರ್ಧಶತಕಗಳನ್ನು ಬಾರಿಸಿದ್ದಾರೆ.

ಈ ಗೆಲುವಿನ ಸವಿ ನೆನಪಿಗಾಗಿ ರೋಹಿತ್​ ಕೆನ್ಸಿಂಗ್ಟನ್‌ ಓವಲ್​ ಪಿಚ್​ನಿಂದ ಒಂದು ಚಿಟಿಕೆ ಮಣ್ಣು ಬಾಯಿಗೆ ಹಾಕಿದ್ದಾರೆ. ಗೆಲುವಿಗೆ ನೆರವಾದ ಈ ಮೈದಾನದ ಋಣವನ್ನು ತೀರಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ, ವಿರಾಟ್ ಕೊಹ್ಲಿ ಮತ್ತು ಅಕ್ಷರ್ ಪಟೇಲ್ ಅವರ ಜವಾಬ್ದಾರಿಯುತ ಆಟದ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ಈ ಮೊತ್ತವನ್ನು ಒಂದು ಹಂತದ ವರೆಗೆ ದಿಟ್ಟವಾಗಿ ಬೆನ್ನಟ್ಟಿಕೊಂಡು ಬಂದ ದಕ್ಷಿಣ ಆಫ್ರಿಕಾ 8 ವಿಕೆಟ್​ಗೆ 169 ರನ್​ ಗಳಿಸಲಷ್ಟೇ ಶಕ್ತವಾಯಿತು.

Continue Reading

ಕ್ರೀಡೆ

Hardik Pandya: ವಿಶ್ವಕಪ್​ ಗೆಲುವಿನ ಬಳಿಕ ಹಾರ್ದಿಕ್​ ಪಾಂಡ್ಯ ಕರೆ ಮಾಡಿದ್ದು ಯಾರಿಗೆ?; ನೆಟ್ಟಿಗರ ಉತ್ತರವೇನು?

Hardik Pandya: ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಫೋಟೊದಲ್ಲಿ, ಉಪನಾಯಕ ಹಾರ್ದಿಕ್​ ಪಾಂಡ್ಯ ಪಿಚ್‌ನಲ್ಲಿ ವಿಜೇತ ಪದಕವನ್ನು ಕುತ್ತಿಗೆಗೆ ಹಾಕಿಕೊಂಡು ಫೋನ್ ಕರೆಯಲ್ಲಿ ಮಗ್ನರಾಗಿರುವುದು ಕಂಡುಬಂದಿದೆ. ಈ ಫೋಟೊವನ್ನು ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಮಾಡಿದ್ದು, ಇದು ಪಾಂಡ್ಯ ತಮ್ಮ ಪತ್ನಿ ನತಾಶಾ ಸ್ಟಾನ್‌ಕೋವಿಕ್​ ಅವರಿಗೆ ಕಾಲ್​ ಮಾಡಿದ್ದು ಎಂದು ಹೇಳಲಾರಂಭಿಸಿದ್ದಾರೆ.

VISTARANEWS.COM


on

Hardik Pandya
Koo

ಬಾರ್ಬಡೋಸ್​: ದಕ್ಷಿಣ ಆಫ್ರಿಕಾ ವಿರುದ್ಧ ಶನಿವಾರ ರಾತ್ರಿ ನಡೆದ ಟಿ20 ವಿಶ್ವಕಪ್​ ಫೈನಲ್​ ಪಂದ್ಯದಲ್ಲಿ ಭಾರತ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಹಾರ್ದಿಕ್​ ಪಾಂಡ್ಯ(Hardik Pandya) ಗೆಲುವಿನ ಬಳಿಕ ಅತ್ಯಂತ ಭಾವುಕರಾಗಿ ಕಂಡುಬಂದುರು. ಗೆದ್ದ ಖುಷಿಯಲ್ಲಿ ಕಣ್ಣೀರು ಕೂಡ ಸುರಿಸಿದರು. ಆದರೆ, ಪಾಂಡ್ಯ ಮೊಬೈಲ್​ನಲ್ಲಿ ಮಾತನಾಡುತ್ತಿರುವ ಫೋಟೊವೊಂದು ಈಗ ವೈರಲ್​ ಆಗಿದೆ.

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಫೋಟೊದಲ್ಲಿ, ಉಪನಾಯಕ ಹಾರ್ದಿಕ್​ ಪಾಂಡ್ಯ ಪಿಚ್‌ನಲ್ಲಿ ವಿಜೇತ ಪದಕವನ್ನು ಕುತ್ತಿಗೆಗೆ ಹಾಕಿಕೊಂಡು ಫೋನ್ ಕರೆಯಲ್ಲಿ ಮಗ್ನರಾಗಿರುವುದು ಕಂಡುಬಂದಿದೆ. ಈ ಫೋಟೊವನ್ನು ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಮಾಡಿದ್ದು, ಇದು ಪಾಂಡ್ಯ ತಮ್ಮ ಪತ್ನಿ ನತಾಶಾ ಸ್ಟಾನ್‌ಕೋವಿಕ್​ ಅವರಿಗೆ ಕಾಲ್​ ಮಾಡಿದ್ದು ಎಂದು ಹೇಳಲಾರಂಭಿಸಿದ್ದಾರೆ.

ಹೌದು, ನೆಟ್ಟಿಗರು ಹೀಗೆ ಹೇಳಲು ಕೂಡ ಒಂದು ಕಾರಣವಿದೆ. ಹಾರ್ದಿಕ್ ಪಾಂಡ್ಯ(Hardik Pandya) ಮತ್ತು ನತಾಶಾ ಸ್ಟಾನ್‌ಕೋವಿಕ್‌(Nataša Stanković) ಅವರ ವಿವಾಹ ಮುರಿದು ಬಿದ್ದಿದ್ದು, ಈ ಜೋಡಿ ವಿಚ್ಛೇದನ ಪಡೆಯಲಿದೆ ಎಂದು ಟಿ20 ವಿಶ್ವಕಪ್​ ಟೂರ್ನಿಗೂ ಮುನ್ನ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಯಾಗಿತ್ತು. ಆದರೆ, ಈ ಜೋಡಿ ಮಾತ್ರ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಇದೀಗ ಪಾಂಡ್ಯ ವಿಶ್ವಕಪ್​ ಗೆದ್ದ ಬಳಿಕ ಫೋನ್​ನಲ್ಲಿ ಮಾತನಾಡಿದ ಫೋಟೊ ಕಂಡ ನೆಟ್ಟಿಗರು ಈ ಜೋಡಿ ಮಧ್ಯೆ ಯಾವುದೇ ಬಿರುಕು ಮೂಡಿಲ್ಲ ಎಂದು ಹೇಳಲಾರಂಭಿಸಿದ್ದಾರೆ. ಆದರೆ, ಪಾಂಡ್ಯ ಅವರು ಕಾಲ್​ ಮಾಡಿ ಮಾತನಾಡಿರುವುದು ಯಾರಿಗೆ ಎಂದು ಖಚಿತವಾಗಿಲ್ಲ. ನತಾಶ ಕೂಡ ತಮ್ಮ ಯಾವುದೇ ಸಾಮಾಜಿಕ ಜಾಲತಾಣದಲ್ಲಿಯೂ ಭಾರತದ ಗೆಲುವಿನ ಕುರಿತ ಪೋಸ್ಟ್​ ಕೂಡ ಮಾಡಿಲ್ಲ.

ಇದನ್ನೂ ಓದಿ T20 World Cup 2024: ʼವಿಶ್ವʼ ಗೆದ್ದ ನಾಯಕ ರೋಹಿತ್‌, ಕೋಚ್‌ ದ್ರಾವಿಡ್‌, ಕೊಹ್ಲಿಗೆ ಕರೆ ಮಾಡಿ ಅಭಿನಂದಿಸಿದ ಮೋದಿ

ಕೊನೆಯ ಓವರ್​ನಲ್ಲಿ ದಕ್ಷಿಣ ಆಫ್ರಿಕಾ ಗೆಲುವಿಗೆ 16 ರನ್ ಅಗತ್ಯವಿತ್ತು. ಹಾರ್ದಿಕ್ ಪಾಂಡ್ಯ ಎಸೆದ ಮೊದಲ ಎಸೆತವನ್ನು ಡೇವಿಡ್ ಮಿಲ್ಲರ್ ಸಿಕ್ಸರ್ ನತ್ತ ಬಾರಿಸಿದ್ದರು. ಬೌಂಡರಿ ಲೈನ್ ನಲ್ಲಿದ್ದ ಸೂರ್ಯ ಕುಮಾರ್ ಯಾದವ್ ಯಾರೂ ಊಹಿಸದಂತೆ ಸಾಹಸಮಯ ಅಮೋಘ ಕ್ಯಾಚ್ ಪಡೆದರು. 21 ರನ್ ಗಳಿಸಿದ್ದ ಡೇವಿಡ್​ ಮಿಲ್ಲರ್ ವಿಕೆಟ್​ ಕೈಚೆಲ್ಲಿದರು. ಎರಡನೇ ಎಸೆತವನ್ನು ರಬಾಡಾ ಬೌಂಡರಿ ಬಾರಿಸಿದರು. ಮೂರನೇ ಎಸೆತದಲ್ಲಿ ಒಂದು ರನ್ ಬಂತು. ಕೊನೆಯ ಎರಡು ಎಸೆತಗಳಲ್ಲಿ 10 ರನ್ ಅಗತ್ಯವಿತ್ತು. ಹಾರ್ದಿಕ್ ಒಂದು ವೈಡ್ ಎಸೆದರು. ರಬಾಡಾ ಕ್ಯಾಚಿತ್ತು ನಿರ್ಗಮಿಸಿದರು. ಕೊನೆಯ ಎಸೆತದಲ್ಲಿ ಒಂದು ರನ್ ಮಾತ್ರ ಬಂತು. ಭಾರತ 7 ರನ್​ಗಳ ಗೆಲುವು ಸಾಧಿಸಿ 17 ವರ್ಷಗಳ ಬಳಿಕ ಟಿ20 ವಿಶ್ವಕಪ್​ ಗೆದ್ದು ಬೀಗಿತು.

ಹಾರ್ದಿಕ್​ ಪಾಂಡ್ಯ ಅಪಾಯಕಾರಿ ಹೆನ್ರಿಚ್​ ಕ್ಲಾಸೆನ್​ ಮತ್ತು ಮತ್ತು ಡೇವಿಡ್​ ಮಿಲ್ಲರ್​ ವಿಕೆಟ್​ ಕೀಳದೇ ಇದ್ದಿದ್ದರೆ ಭಾರತ ತಂಡಕ್ಕೆ ಗೆಲುವು ಅಸಾಧ್ಯವಾಗುತ್ತಿತ್ತು. ಪಂದ್ಯ ಗತಿಯನ್ನೇ ಬದಲಿಸಿ ಭಾರತದ ಗೆಲುವಿನ ಹೀರೊ ಎನಿಸಿಕೊಂಡರು. ಐಪಿಎಲ್​ನಲ್ಲಿ ಮುಂಬೈ ನಾಯಕನಾಗಿ ಮತ್ತು ಆಟಗಾರನಾಗಿ ವೈಫಲ್ಯ ಕಂಡಿದ್ದ ಅವರನ್ನು ಸಿಕ್ಕಾಪಟ್ಟೆ ಟ್ರೋಲ್​ ಮಾಡಿದ್ದರು. ಆದರೆ ಅವರು ವಿಶ್ವಕಪ್​ನಲ್ಲಿ ತೋರಿದ ಪ್ರದರ್ಶನ ಅಂದು ಟ್ರೋಲ್​ ಮಾಡಿದವರು ಕೂಡ ತಲೆತಗ್ಗಿಸುವಂತೆ ಮಾಡಿದೆ. ಗೆಲುವಿನ ಬಳಿಕ ಪಾಂಡ್ಯ ಅತ್ಯಂತ ಭಾವುಕರಾಗಿ ಕಣ್ಣೀರು ಸುರಿಸಿದ ವೇಳೆ ನಾಯಕ ರೋಹಿತ್​ ಶರ್ಮ, ಕೋಚ್​ ರಾಹುಲ್​ ದ್ರಾವಿಡ್​ ಸೇರಿ ತಂದ ಸಹ ಆಟಗಾರರು ಸಂತೈಸಿದ್ದಾರೆ.

Continue Reading

ಕ್ರೀಡೆ

T20 World Cup 2024: ʼವಿಶ್ವʼ ಗೆದ್ದ ನಾಯಕ ರೋಹಿತ್‌, ಕೋಚ್‌ ದ್ರಾವಿಡ್‌, ಕೊಹ್ಲಿಗೆ ಕರೆ ಮಾಡಿ ಅಭಿನಂದಿಸಿದ ಮೋದಿ

T20 World Cup 2024: ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್​ನಲ್ಲಿ ಜೂನ್ 29ರಂದು ನಡೆದ ಟಿ20 ವಿಶ್ವಕಪ್​ 2024 ಫೈನಲ್​ನಲ್ಲಿ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾವನ್ನು ಏಳು ರನ್​ಗಳ ಅಂತರದಿಂದ ಸೋಲಿಸುವ ಮೂಲಕ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಎಲ್ಲೆಡೆಯಿಂದ ಅಭಿನಂದನಾ ಪ್ರವಾಹವೇ ಹರಿದು ಬರುತ್ತಿದೆ. ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ಮುಳುಗಿದ್ದಾರೆ. ಇತ್ತ ಟೀಮ್‌ ಇಂಡಿಯಾ ಜಯ ಗಳಿಸುತ್ತಿದ್ದಂತೆ ಅಭಿನಂದನೆ ತಿಳಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತಂಡದ ಸದಸ್ಯರಿಗೆ ಕರೆ ಮಾಡಿ ಸಂತಸ ಹಂಚಿಕೊಂಡಿದ್ದಾರೆ.

VISTARANEWS.COM


on

T20 World Cup 2024
Koo

ನವದೆಹಲಿ: ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್​ನಲ್ಲಿ ಜೂನ್ 29ರಂದು ನಡೆದ ಟಿ20 ವಿಶ್ವಕಪ್​ 2024 (T20 World Cup 2024) ಫೈನಲ್​ನಲ್ಲಿ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾವನ್ನು ಏಳು ರನ್​ಗಳ ಅಂತರದಿಂದ ಸೋಲಿಸುವ ಮೂಲಕ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಎಲ್ಲೆಡೆಯಿಂದ ಅಭಿನಂದನಾ ಪ್ರವಾಹವೇ ಹರಿದು ಬರುತ್ತಿದೆ. ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ಮುಳುಗಿದ್ದಾರೆ. ಇತ್ತ ಟೀಮ್‌ ಇಂಡಿಯಾ ಜಯ ಗಳಿಸುತ್ತಿದ್ದಂತೆ ಅಭಿನಂದನೆ ತಿಳಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು ತಂಡದ ಸದಸ್ಯರಿಗೆ ಕರೆ ಮಾಡಿ ಸಂತಸ ಹಂಚಿಕೊಂಡಿದ್ದಾರೆ.

ಮೋದಿ ಹೇಳಿದ್ದೇನು?

ಮೋದಿ ಅವರು ಟೀಮ್‌ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಮಾತನಾಡಿ, ಅದ್ಭುತ ನಾಯಕತ್ವಕ್ಕಾಗಿ ಅಭಿನಂದನೆ ತಿಳಿಸಿದರು. ಅವರ ಟಿ20 ವೃತ್ತಿ ಜೀವನವನ್ನು ಶ್ಲಾಘಿಸಿದರು. ಜತೆಗೆ ಪ್ರಧಾನಿ ಫೈನಲ್‌ ಪಂದ್ಯದಲ್ಲಿ ಭಾರತವು ಸ್ಪರ್ಧಾತ್ಮಕ ಸ್ಕೋರ್ ಗಳಿಸಲು ಸಹಾಯ ಮಾಡಿದ ವಿರಾಟ್ ಕೊಹ್ಲಿ (76 ರನ್) ಅವರ ಆಟವನ್ನೂ ಮೆಚ್ಚಿಕೊಂಡರು. ಜತೆಗೆ ಭಾರತೀಯ ಕ್ರಿಕೆಟ್‌ಗೆ ಕೊಹ್ಲಿ ನೀಡಿದ ಕೊಡುಗೆಯನ್ನೂ ನೆನಪಿಸಿಕೊಂಡರು.

ಜತೆಗೆ ಭಾರತೀಯ ಜಸ್ಪ್ರೀತ್ ಬುಮ್ರಾ ಮತ್ತು ಹಾರ್ದಿಕ್ ಪಾಂಡ್ಯ ಅವರಿಗೂ ಪ್ರಧಾನಿ ಮೆಚ್ಚುಗೆ ಸೂಚಿಸಿದರು. ಮಾತ್ರವಲ್ಲ ಅದ್ಭುತ ಕ್ಯಾಚ್‌ ಹಿಡಿದು ಪಂದ್ಯದ ಗತಿಯನ್ನೇ ಬದಲಾಯಿಸಿದ ಸೂರ್ಯ ಕುಮಾರ್ ಯಾದವ್ ಅವರನ್ನು ಉಲ್ಲೇಖಿಸಲು ಪ್ರಧಾನಿ ಮರೆಯಲಿಲ್ಲ.

ರಾಹುಲ್‌ ದ್ರಾವಿಡ್‌ಗೆ ಧನ್ಯವಾದ ಹೇಳಿದ ಮೋದಿ

ಗೆಲುವಿಗಾಗಿ ಮುಖ್ಯ ಕೊಡುಗೆ ನೀಡಿದ ಭಾರತದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ಮೋದಿ ಧನ್ಯವಾದ ಅರ್ಪಿಸಿದರು. ಶನಿವಾರ (ಜೂನ್ 29) ತಡರಾತ್ರಿ ಭಾರತ ಪಂದ್ಯವನ್ನು ಗೆದ್ದ ನಂತರ, ಪ್ರಧಾನಿ ‘ಮೆನ್ ಇನ್ ಬ್ಲೂ’ಗೆ ಅಭಿನಂದನಾ ವಿಡಿಯೊ ಸಂದೇಶವನ್ನು ಪೋಸ್ಟ್ ಮಾಡಿ ಭಾರತೀಯ ಕ್ರಿಕೆಟಿಗರು ಕೋಟ್ಯಂತರ ಅಭಿಮಾನಿಗಳ ಹೃದಯವನ್ನು ಗೆದ್ದಿದ್ದಾರೆ ಎಂದು ಅವರು ಹೇಳಿದ್ದಾರೆ. “ಚಾಂಪಿಯನ್ಸ್! ನಮ್ಮ ತಂಡವು ಟಿ20 ವಿಶ್ವಕಪ್ ಅನ್ನು ಮನೆಗೆ ತರುತ್ತಿದೆ! ಭಾರತೀಯ ಕ್ರಿಕೆಟ್ ತಂಡದ ಬಗ್ಗೆ ನಮಗೆ ಹೆಮ್ಮೆ ಇದೆʼʼ ಎಂದು ಬರೆದುಕೊಂಡು ಅವರು ವಿಡಿಯೊವನ್ನು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಜತೆಗೆ ಭಾರತ ತಂಡವು ದಕ್ಷಿಣ ಆಫ್ರಿಕಾವನ್ನು ಬಗ್ಗು ಬಡಿದಿರುವುದು ಐತಿಹಾಸಿಕ ಎಂದು ಬಣ್ಣಿಸಿದ್ದಾರೆ. ಕಳೆದ ವರ್ಷದ ಏಕದಿನ ವಿಶ್ವಕಪ್‌ ಪಂದ್ಯದ ಫೈನಲ್‌ನಲ್ಲಿ ಭಾರತ ತಂಡ ಸೋತಾಗ ಮೋದಿ ಅವರು ಸಾಂತ್ವನ ಹೇಳಿದ್ದರು.

ರೋಚಕ ಹೋರಾಟದಲ್ಲಿ ಭಾರತಕ್ಕೆ ಗೆಲುವು

ಕಿಂಗ್ ಕೊಹ್ಲಿಯ ಅಬ್ಬರದ ಅರ್ಧ ಶತಕ (76 ರನ್​) ರನ್ ಹಾಗೂ ಆಲ್​ರೌಂಡರ್ ಅಕ್ಷರ್ ಪಟೇಲ್​ ಅವರ ಸ್ಫೋಟಕ ಬ್ಯಾಟಿಂಗ್​ (47 ರನ್​, 31 ಎಸೆತ, 4 ಸಿಕ್ಸರ್​, 1 ಫೋರ್​) ನೆರವು ಹಾಗೂ ಕೊನೇ ಕ್ಷಣದ ರೋಚಕ ಹೋರಾಟ ಫಲವಾಗಿ ಭಾರತ ತಂಡ ವಿಶ್ವ ಕಪ್​ ಗೆದ್ದುಕೊಂಡಿತು. ಫೈನಲ್​ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 7 ರನ್​ಗಳ ರೋಚಕ ಗೆಲುವು ದಾಖಲಿಸಿ ಟ್ರೋಫಿ ಮುಡಿಗೇರಿಸಿಕೊಂಡಿತು. ಭಾರತದ ಪಾಲಿಗೆ ಇದು ಸ್ಮರಣೀಯ ಟ್ರೋಫಿ. ಹಿರಿಯ ಆಟಗಾರರಾದ ರೋಹಿತ್​ ಶರ್ಮಾ ಹಾಗೂ ವಿರಾಟ್​ ಕೊಹ್ಲಿಗೆ ಅಪೇಕ್ಷಿತ ಚಾಂಪಿಯನ್ ಪಟ್ಟ. ಅತ್ತ ದಕ್ಷಿಣ ಆಫ್ರಿಕಾ ತಂಡ ತನ್ನ ಚೋಕರ್ಸ್​ ಹಣೆಪಟ್ಟಿಯನ್ನು ಮತ್ತಷ್ಟು ದಿನ ಕಟ್ಟಿಕೊಳ್ಳುವಂತಾಯಿತು. 4 ದಶಕಗಳ ತನ್ನ ವಿಶ್ವ ಕಪ್​ ಅಭಿಯಾನದಲ್ಲಿ ಒಂದೇ ಒಂದು ಟ್ರೋಫಿ ಗೆಲ್ಲಲು ಸಾಧ್ಯವಾಗದೇ ನಿರಾಸೆ ಎದುರಿಸಿತು.

ಇದನ್ನೂ ಓದಿ: Virat Kohli : ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಘೋಷಿಸಿದ ವಿರಾಟ್​​ ಕೊಹ್ಲಿ

Continue Reading
Advertisement
Road Accident
ಮೈಸೂರು20 mins ago

Road Accident : ತಿರುವಿನಲ್ಲಿ ಕಂದಕಕ್ಕೆ ಉರುಳಿದ ಬಸ್‌; ಚಾಲಕ ಸೇರಿ ಮೂವರು ಗಂಭೀರ

KPCC President
ಪ್ರಮುಖ ಸುದ್ದಿ28 mins ago

KPCC President: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸುಳಿವು; ಲಿಂಗಾಯತರಿಗೆ ಅವಕಾಶ ನೀಡಲು ಒತ್ತಾಯ

Jayam Ravi married to superstar rajinikanth daughter
ಕಾಲಿವುಡ್32 mins ago

Jayam Ravi: ರಜನಿಕಾಂತ್‌ ಮಗಳ ಜತೆ ಜಯಂ ರವಿ ಮದುವೆ?

T20 World Cup 2024
ಕ್ರೀಡೆ41 mins ago

T20 World Cup 2024: ಸಂಭ್ರಮಾಚರಣೆ ವೇಳೆ ದುರಂತ: ಧ್ವಜ ಹಾರಿಸಲು ಹೋಗಿ ಬಿದ್ದ ಅಭಿಮಾನಿ; ವೈರಲ್‌ ವಿಡಿಯೊ ಇಲ್ಲಿದೆ

ಕ್ರೀಡೆ1 hour ago

Rohit Sharma: ವಿಶ್ವಕಪ್​ ಗೆದ್ದ ನಾಯಕ ರೋಹಿತ್​ಗೆ ಆಶೀರ್ವಾದ ಮಾಡಿದ ಕಾಂತಾರದ ‘ಪಂಜುರ್ಲಿ’ ದೈವ!

Actor Darshan
ಬೆಂಗಳೂರು1 hour ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

CM Siddaramaiah To Inaugurate Film Producers Association Building says build film city
ಸ್ಯಾಂಡಲ್ ವುಡ್1 hour ago

CM Siddaramaiah: ಡಾ.ರಾಜ್‍ಕುಮಾರ್ ಕನಸಿನಂತೆ ಫಿಲ್ಮ್ ಸಿಟಿ ನಿರ್ಮಾಣ ಮಾಡ್ತೇವೆ ಎಂದ ಸಿದ್ದರಾಮಯ್ಯ

Gold Rate Today
ಚಿನ್ನದ ದರ1 hour ago

Gold Rate Today: ಆಭರಣ ಖರೀದಿಗೆ ಇದು ಸೂಕ್ತ ಸಮಯ; ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ

Mann Ki Baat
ದೇಶ2 hours ago

Mann Ki Baat: ʼಸಂವಿಧಾನದ ಬಗ್ಗೆ ಅಚಲ ನಂಬಿಕೆ ಇರಿಸಿದ್ದಕ್ಕೆ ಧನ್ಯವಾದʼ-ಮೋದಿ ಮನ್‌ ಕೀ ಬಾತ್‌ ಹೈಲೈಟ್ಸ್‌ ಹೀಗಿದೆ ನೋಡಿ

Road Accident
ಬೆಂಗಳೂರು2 hours ago

Road Accident : ಬೆಂಗಳೂರಲ್ಲಿ ಬೈಕ್‌ ಸವಾರರಿಬ್ಬರ ಪ್ರಾಣ ಕಸಿದ ಹೈ ಸ್ಪೀಡ್‌

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಬೆಂಗಳೂರು1 hour ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ21 hours ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ1 day ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ2 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು3 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ3 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ6 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

ಟ್ರೆಂಡಿಂಗ್‌