ಮುಂಬಯಿ: ವೆಸ್ಟ್ ಇಂಡೀಸ್(IND vs WI) ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗೆ ಭಾರತ ತಂಡವನ್ನು ಬಿಸಿಸಿಐ ಬುಧವಾರ ಪ್ರಕಟಿಸಿದೆ. ಸರಣಿಯಲ್ಲಿ ಯುವ ಆಟಗಾರರಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಆದರೆ ಐಪಿಎಲ್ನಲ್ಲಿ(IPL) 5 ಸಿಕ್ಸರ್(rinku singh 5 sixes) ಬಾರಿಸಿ ಮಿಂಚಿದ್ದ ಕೋಲ್ಕತ್ತಾ ನೈಟ್ ರೈಡರ್ಸ್(KKR) ತಂಡದ ರಿಂಕು ಸಿಂಗ್ಗೆ(rinku singh) ಅವಕಾಶ ಸಿಗಲಿಲ್ಲ. ಐಪಿಎಲ್ನಲ್ಲಿ ಉತ್ತಮ ಪ್ರದರ್ಶನ ತೋರಿದ್ದ ಅವರಿಗೆ ಈ ಸರಣಿಯಲ್ಲಿ ಅವಕಾಶ ಸಿಗಬಹುದೆಂದು ಊಹಿಸಲಾಗುತ್ತು. ಆದರೆ ಅವರಿಗೆ ನಿರಾಸೆಯಾಗಿದೆ.
ಹೊಸ ಮುಖಗಳಾಗಿ ಮುಂಬೈ ಇಂಡಿಯನ್ಸ್ ಪರ ಉತ್ತಮ ಬ್ಯಾಟಿಂಗ್ ತೋರ್ಪಡಿಸಿದ ಎಡಗೈ ಬ್ಯಾಟರ್ ತಿಲಕ್ ವರ್ಮಾ ಅವರು ಮೊದಲ ಬಾರಿಗೆ ರಾಷ್ಟ್ರೀಯ ತಂಡಕ್ಕೆ ಕರೆಯನ್ನು ಪಡೆದಿದ್ದಾರೆ. ಇವರ ಜತೆಗೆ ರಾಜಸ್ಥಾನ್ ರಾಯಲ್ಸ್ ತಂಡದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಕೂಡ ಆಯ್ಕೆ ಆಗಿದ್ದಾರೆ. ಇವರು ಟೆಸ್ಟ್ ತಂಡದಲ್ಲಿಯೂ ಅವಕಾಶ ಪಡೆದಿದ್ದಾರೆ.
ರಿಂಕು ಸಿಂಗ್ ಅವರನ್ನು ಈ ಸರಣಿಗೆ ಆಯ್ಕೆ ಮಾಡದ ಕುರಿತು ಕೆಲ ಮಾಜಿ ಆಟಗಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಫಿನಿಶಿಂಗ್ ಪಾತ್ರ ನಿರ್ವಹಿಸುವ ರಿಂಕುಗೆ ಅವಕಾಶ ನೀಡಬೇಕಿತ್ತು. ಭಾರತ ಟ20 ತಂಡದಲ್ಲಿ ಎದ್ದು ಕಾಣುತ್ತಿರುವ ಸಮಸ್ಯೆ ಎಂದರೆ ಫಿನಿಶಿಂಗ್ ಪಾತ್ರ. ಕಳೆದ ಟಿ20 ವಿಶ್ವ ಕಪ್ನಲ್ಲಿಯೂ ಇದು ಭಾರತಕ್ಕೆ ದೊಡ್ಡ ಹಿನ್ನಡೆಯಾಗಿ ಪರಿಣಮಿಸಿತ್ತು. ಈ ಪಾತ್ರವನ್ನು ನಿಭಾಯಿಸಬಲ್ಲ ಆಟಗಾರ ಇದ್ದರೂ ಅವರಿಗೆ ಸೂಕ್ತ ಅವಕಾಶ ನೀಡುತ್ತಿಲ್ಲ” ಎಂದು ಆಯ್ಕೆ ಸಮಿತಿ ಮೇಲೆ ಅಸಮಾಧಾನಗೊಂಡಿದ್ದಾರೆ. ಇದಲ್ಲದೆ ಚೆನ್ನೈ ಸೂಪರ್ ಕಿಂಗ್ಸ್ ಪರ ಶ್ರೇಷ್ಠ ಪ್ರದರ್ಶನ ತೋರಿದ ಋತುರಾಜ್ ಗಾಯಕ್ವಾಡ್(Ruturaj Gaikwad) ಕೂಡ ಅವಕಾಶ ವಂಚಿತರಾಗಿದ್ದಾರೆ.
ಇದು ಅಗರ್ಕರ್ ಅವರು ಆಯ್ಕೆ ಸಮಿತಿಯ ಮುಖ್ಯಸ್ಥರಾಗಿ ನೇಮಿಸಿದ ಮೊದಲ ತಂಡವಾಗಿದೆ. ಪ್ರಮುಖ ಆಟಗಾರರಾದ ರೋಹಿತ್ ಶರ್ಮಾ ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ ಸೇರಿ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ.
ಭಾರತ ಟಿ20 ತಂಡ
ಇಶಾನ್ ಕಿಶನ್, ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮ, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ(ನಾಯಕ), ಅಕ್ಷರ್ ಪಟೇಲ್, ಯಜುವೇಂದ್ರ ಚಹಲ್, ಕುಲ್ದೀಪ್ ಯಾದವ್, ರವಿ ಬಿಷ್ಟೋಯಿ, ಆರ್ಶ್ದೀಪ್ ಸಿಂಗ್, ಉಮ್ರಾನ್ ಮಲಿಕ್, ಆವೇಶ್ ಖಾನ್, ಮುಖೇಶ್ ಕುಮಾರ್.
ವೇಳಾಪಟ್ಟಿ
ಮೊದಲ ಟಿ20 ಪಂದ್ಯ ಆಗಸ್ಟ್ 3, ಸ್ಥಳ: ಟ್ರಿನಿಡಾಡ್
ದ್ವಿತೀಯ ಟಿ20 ಪಂದ್ಯ ಆಗಸ್ಟ್ 6, ಸ್ಥಳ: ಗಯಾನಾ
ಮೂರನೇ ಟಿ20 ಪಂದ್ಯ ಆಗಸ್ಟ್ 8, ಸ್ಥಳ: ಗಯಾನಾ
ನಾಲ್ಕನೇ ಟಿ20 ಪಂದ್ಯ ಆಗಸ್ಟ್ 12, ಸ್ಥಳ: ಫ್ಲೋರಿಡಾ
5ನೇ ಟಿ20 ಪಂದ್ಯ ಆಗಸ್ಟ್ 13, ಸ್ಥಳ: ಫ್ಲೋರಿಡಾ