Site icon Vistara News

Ind vs Aus : ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಪ್ರಕಟ

Team india 1

ನವ ದೆಹಲಿ: ಆಸ್ಟ್ರೇಲಿಯಾ ಮಹಿಳಾ ತಂಡದ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ ಐತಿಹಾಸಿಕ ಗೆಲುವು ದಾಖಲಿಸಿದ ನಂತರ, ಹರ್ಮನ್ಪ್ರೀತ್ ಕೌರ್ ನೇತೃತ್ವದ ಭಾರತ ಮಹಿಳೆಯರ ಬಳಗ ತನ್ನ ಗಮನವನ್ನು ವೈಟ್-ಬಾಲ್ ಕಾರ್ಯಯೋಜನೆಗಳತ್ತ ಹರಿಸಿದೆ. ಭಾರತವು ಪ್ರವಾಸಿ ಆಸೀಸ್ (Ind vs Aus) ವಿರುದ್ಧ ಮೂರು ಏಕದಿನ ಪಂದ್ಯಗಳ ಸರಣಿಯಲ್ಲಿ ಆಡಲಿದ್ದು, ನಂತರ ಮೂರು ಟಿ 20 ಪಂದ್ಯಗಳನ್ನು ಆಡಲಿದೆ.

ಮೊದಲ ಏಕದಿನ ಪಂದ್ಯ ಡಿಸೆಂಬರ್ 28ರಂದು ನಡೆಯಲಿದ್ದು, ಮೊದಲ ಟಿ 20 ಪಂದ್ಯ ಜನವರಿ 5 ರಂದು ನಡೆಯಲಿದೆ. ವೈಟ್-ಬಾಲ್ ಸರಣಿಗೆ ಮುಂಚಿತವಾಗಿ, ಬಿಸಿಸಿಐ (BCCI) ಎರಡೂ ಸರಣಿಗಳಿಗೆ ಭಾರತದ ತಂಡವನ್ನು ಪ್ರಕಟಿಸಿದೆ.

ಎರಡೂ ತಂಡಗಳನ್ನು ಹರ್ಮನ್ ಪ್ರೀತ್ ಕೌರ್ ಮುನ್ನಡೆಸಲಿದ್ದು, ಸ್ಮೃತಿ ಮಂಧಾನಾ ಉಪನಾಯಕಿಯಾಗಿ ತಮ್ಮ ಹೊಣೆಯನ್ನು ನಿಭಾಯಿಸಲಿದ್ದಾರೆ. ತಂಡದಲ್ಲಿ ಜೆಮಿಮಾ ರೊಡ್ರಿಗಸ್, ದೀಪ್ತಿ ಶರ್ಮಾ, ಸ್ನೇಹ್ ರಾಣಾ ಮತ್ತು ಇನ್ನೂ ಅನೇಕ ತಾರೆಯರು ಇರಲಿದ್ದಾರೆ. ಟೆಸ್ಟ್​ ಕ್ರಿಕೆಟ್​ ಪಂದ್ಯದಂತೆಯೇ ವೈಟ್-ಬಾಲ್ ಸರಣಿಯಲ್ಲಿ ಟೆಸ್ಟ್ ಪಂದ್ಯವನ್ನು ತಮ್ಮ ಕಡೆಗೆ ಒಲಿಸಲು ತಂಡ ಮುಂದಾಗಿದೆ.

ಆಸ್ಟ್ರೇಲಿಯಾ ವಿರುದ್ಧ ಇತ್ತೀಚೆಗೆ ಮುಕ್ತಾಯಗೊಂಡ ಏಕೈಕ ಟೆಸ್ಟ್ ಪಂದ್ಯದ ಅದ್ಭುತ ಗೆಲುವಿನ ಹಿನ್ನೆಲೆಯಲ್ಲಿ ಏಕದಿನ ಮತ್ತು ಟಿ 20ಐ ಸರಣಿಗೆ ಮುಂಚಿತವಾಗಿ ಟೀಮ್ ಇಂಡಿಯಾ ಆತ್ಮವಿಶ್ವಾಸದಿಂದ ಕಣಕ್ಕಿಳಿಯಲಿದೆ. ಪಂದ್ಯದುದ್ದಕ್ಕೂ ಅಲಿಸ್ಸಾ ಹೀಲಿ ನೇತೃತ್ವದ ಆಸ್ಟ್ರೇಲಿಯಾದ ಮೇಲೆ ಪ್ರಾಬಲ್ಯ ಸಾಧಿಸಿದ ಆತಿಥೇಯರು ಪಂದ್ಯವನ್ನು ಎಂಟು ವಿಕೆಟ್ ಗಳಿಂದ ಗೆಲ್ಲುವಲ್ಲಿ ಯಶಸ್ವಿಯಾಗಿದ್ದರು.

ಇದನ್ನೂ ಓದಿ : Hardik Pandya : ಪಾಂಡ್ಯಗಾಗಿ ಮುಂಬಯಿ ಪಾವತಿಸಿದ್ದು 15 ಕೋಟಿ ಅಲ್ಲ, 100 ಕೋಟಿ ರೂಪಾಯಿ!

ಏಕದಿನ ಮತ್ತು ಟಿ 20 ಐ ಸರಣಿಗಳಲ್ಲಿಯೂ ಇದೇ ರೀತಿಯ ಪ್ರದರ್ಶನವನ್ನು ನೀಡಬಹುದು ಎಂದು ಭಾವಿಸಲಾಗಿದೆ. ಮೂರು ಪಂದ್ಯಗಳ ಏಕದಿನ ಸರಣಿ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಟಿ 20 ಐ ಸರಣಿ ನವೀ ಮುಂಬೈನ ಡಿ ವೈ ಪಾಟೀಲ್ ಸ್ಪೋರ್ಟ್ಸ್ ಸ್ಟೇಡಿಯಂನಲ್ಲಿ ನಡೆಯಲಿದೆ.

ಏಕದಿನ ತಂಡ: ಹರ್ಮನ್​​ಪ್ರೀತ್​ ಕೌರ್ (ನಾಯಕಿ), ಸ್ಮೃತಿ ಮಂಧಾನಾ (ಉಪನಾಯಕಿ), ಜೆಮಿಮಾ ರೋಡ್ರಿಗಸ್, ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ರಿಚಾ ಘೋಷ್ (ವಿಕೆಟ್ ಕೀಪರ್), ಅಮನ್ಜೋತ್ ಕೌರ್, ಶ್ರೇಯಂಕಾ ಪಾಟೀಲ್, ಮನ್ನತ್ ಕಶ್ಯಪ್, ಸೈಕಾ ಇಶಾಕ್, ರೇಣುಕಾ ಸಿಂಗ್ ಠಾಕೂರ್, ಟಿಟಾಸ್ ಸಾಧು, ಪೂಜಾ ವಸ್ತ್ರಾಕರ್, ಸ್ನೇಹ್ ರಾಣಾ, ಹರ್ಲೀನ್ ಡಿಯೋಲ್.

ಟಿ20 ತಂಡ: ಹರ್ಮನ್ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನಾ (ಉಪನಾಯಕಿ), ಜೆಮಿಮಾ ರೋಡ್ರಿಗಸ್, ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಯಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ರಿಚಾ ಘೋಷ್ (ವಿಕೆಟ್ ಕೀಪರ್), ಅಮನ್ಜೋತ್ ಕೌರ್, ಶ್ರೇಯಂಕಾ ಪಾಟೀಲ್, ಮನ್ನತ್ ಕಶ್ಯಪ್, ಸೈಕಾ ಇಶಾಕ್, ರೇಣುಕಾ ಸಿಂಗ್ ಠಾಕೂರ್, ಟಿಟಾಸ್ ಸಾಧು, ಪೂಜಾ ವಸ್ತ್ರಾಕರ್, ಕನಿಕಾ ಅಹುಜಾ, ಮಿನ್ನು ಮಣಿ.

Exit mobile version