ಮುಂಬಯಿ : ಮುಂದಿನ ತಿಂಗಳು ಜಿಂಬಾಬ್ವೆ ಪ್ರವಾಸ ಮಾಡಲಿರುವ ಭಾರತ ತಂಡವನ್ನು (Team India) ಬಿಸಿಸಿಐ ಹಿರಿಯರ ತಂಡಗಳ ಆಯ್ಕೆ ಸಮಿತಿ ಶನಿವಾರ ಪ್ರಕಟಿಸಿದೆ. ಮೂರು ಪಂದ್ಯಗಳ ಈ ಏಕದಿನ ಸರಣಿಗೆ ಶಿಖರ್ ಧವನ್ ಅವರನ್ನೇ ತಂಡದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಮೂರು ದಿನಗಳ ಹಿಂದೆ ಮುಕ್ತಾಯಗೊಂಡ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಲ್ಲೂ ಧವನ್ ನಾಯಕರಾಗಿದ್ದರಲ್ಲದೆ, ಸರಣಿಯಲ್ಲಿ ೩-೦ ಕ್ಲೀನ್ ಸ್ವೀಪ್ ಸಾಧನೆ ಮಾಡಿತ್ತು.
ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ, ರಿಷಭ್ ಪಂತ್, ಜಸ್‌ಪ್ರಿತ್ ಬುಮ್ರಾ ಅವರು ಜಿಂಬಾಬ್ವೆ ಪ್ರವಾಸದಿಂದ ವಿಶ್ರಾಂತಿ ಕಲ್ಪಿಸಲಾಗಿದೆ. ಅಂತೆಯೇ ಐಪಿಎಲ್ ೧೫ನೇ ಆವೃತ್ತಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ಪರ ಅತ್ಯುತ್ತಮ ಪ್ರದರ್ಶನ ನೀಡಿದ್ದ ರಾಹುಲ್ ತ್ರಿಪಾಠಿಗೆ ತಂಡದಲ್ಲಿ ಸ್ಥಾನ ಕಲ್ಪಿಸಲಾಗಿದೆ. ಅದೇ ರೀತಿ ತಮಿಳುನಾಡು ಮೂಲದ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಕೂಡ ತಂಡದಲ್ಲಿ ಅವಕಾಶ ಪಡೆದುಕೊಂಡಿದ್ದಾರೆ. ಏತನ್ಮಧ್ಯೆ, ಕಳೆದ ಹಲವು ತಿಂಗಳಿಂದ ಗಾಯದ ಸಮಸ್ಯೆಗೆ ಒಳಗಾಗಿ ಐಪಿಎಲ್ ಸೇರಿದಂತೆ ಹಲವು ಟೂರ್ನಿಗಳಲ್ಲಿ ಅವಕಾಶ ಕಳೆದುಕೊಂಡಿದ್ದ ಮಧ್ಯಮ ವೇಗಿ ದೀಪಕ್ ಚಾಹರ್ ಗುಣಮುಖಗೊಂಡಿದ್ದು, ಜಿಂಬಾಬ್ವೆ ಪ್ರವಾಸಕ್ಕೆ ಆಯ್ಕೆಯಾಗಿದ್ದಾರೆ.
ಟೀಮ್ ಇಂಡಿಯಾ ಆಗಸ್ಟ್ ೧೮ರಿಂದ ೨೨ರವರೆಗೆ ಮೂರು ಏಕದಿನ ಪಂದ್ಯಗಳಲ್ಲಿ ಪಾಲ್ಗೊಳ್ಳಲಿದೆ.
ಭಾರತ ತಂಡ :
ಶಿಖರ್ ಧವನ್ (ನಾಯಕ), ಋತುರಾಜ್ ಗಾಯಕ್ವಾಡ್, ಶುಬ್ಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಶಾರ್ದುಲ್ ಠಾಕೂರ್, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಆವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ದೀಪಕ್ ಚಾಹರ್.