Site icon Vistara News

Team India: ಮೂರು ಮಾದರಿಯ ಕ್ರಿಕೆಟ್​ಗೆ ಟೀಮ್​ ಇಂಡಿಯಾವೇ ಬಿಗ್​ ಬಾಸ್; ನಂ.1 ಸ್ಥಾನ

Team India

ದುಬೈ: ಪ್ರವಾಸಿ ಇಂಗ್ಲೆಂಡ್ ವಿರುದ್ಧದ ತವರಿನ 5 ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ 4-1ರ ಅಂತರದ ಗೆಲುವು ಸಾಧಿಸಿದ ಭಾರತ ತಂಡ(Team India) ನೂತನ ಐಸಿಸಿ ಟೆಸ್ಟ್ ತಂಡಗಳ ಶ್ರೇಯಾಂಕಪಟ್ಟಿಯಲ್ಲಿ ನಂ.1 ಸ್ಥಾನಕ್ಕೇರಿದೆ. ಈ ಸಾಧನೆಯೊಂದಿಗೆ ಮೂರು ಮಾದರಿಯ(ಟೆಸ್ಟ್, ಏಕದಿನ ಹಾಗೂ ಟಿ20) ಕ್ರಿಕೆಟ್​ನಲ್ಲಿಯೂ ಭಾರತವೇ ಅಗ್ರಸ್ಥಾನ ಪಡೆದುಕೊಂಡಿದೆ.

ಭಾರತಕ್ಕೆ ಚಿಂತೆಯಿಲ್ಲ


ಈ ಹಿಂದೆ ಆಸ್ಟೇಲಿಯಾ ನಂ.1 ಟೆಸ್ಟ್​ ತಂಡವಾಗಿತ್ತು. ಇದೀ್ ದ್ವಿತೀಯ ಸ್ಥಾನಕ್ಕೆ ಜಾರಿದೆ. ಕ್ರೈಸ್ಟ್‌ಚರ್ಚ್‌ನಲ್ಲಿ ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್​ ನಡುವೆ ಟೆಸ್ಟ್​ ಪಂದ್ಯ ಸಾಗಿತ್ತಿದೆ. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆದ್ದರೂ ಕೂಡ ಭಾರತಕ್ಕೆ ಯಾವುದೇ ಹಿನ್ನಡೆಯಾಗದು ಎಂದು ಐಸಿಸಿ ತಿಳಿಸಿದೆ. ಪಂದ್ಯದ ಫಲಿತಾಂಶ ಏನೇ ಬಂದರೂ ಭಾರತವೇ ಅಗ್ರಸ್ಥಾನದಲ್ಲಿ ಉಳಿದುಕೊಳ್ಳಲಿದೆ ಎಂದು ಐಸಿಸಿ ಪ್ರಕಟಣೆ ತಿಳಿಸಿದೆ.

ಭಾರತ ಈಗ 122 ರೇಟಿಂಗ್ ಪಾಯಿಂಟ್ ಹೊಂದಿದೆ. 117 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಆಸ್ಟ್ರೇಲಿಯಾ ಎರಡನೇ ಸ್ಥಾನದಲ್ಲಿದೆ. ಭಾರತ ವಿರುದ್ಧದ ಸರಣಿಯಲ್ಲಿ ಹೀನಾಯ ಸೋಲು ಕಂಡಿರುವ ಇಂಗ್ಲೆಂಡ್ ಮೂರನೇ ಸ್ಥಾನದಲ್ಲಿದೆ (111 ರೇಟಿಂಗ್ ಪಾಯಿಂಟ್).

ಏಕದಿನ ಹಾಗೂ ಟಿ20 ರ‍್ಯಾಂಕಿಂಗ್‌ ಪಟ್ಟಿಯಲ್ಲೂ ಭಾರತವೇ ಅಗ್ರಸ್ಥಾನ ಅಲಂಕರಿಸಿದೆ. ಏಕದಿನದಲ್ಲಿ 121 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಅಗ್ರಸ್ಥಾನದಲ್ಲಿದ್ದು, ಆಸ್ಟ್ರೇಲಿಯಾ ಎರಡನೇ ಸ್ಥಾನದಲ್ಲಿದೆ (118 ರೇಟಿಂಗ್ ಪಾಯಿಂಟ್). ಟಿ20ಯಲ್ಲಿ ಭಾರತ 266 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಇಂಗ್ಲೆಂಡ್ (256 ರೇಟಿಂಗ್​ ಅಂಕ) ಹಾಗೂ ಆಸ್ಟ್ರೇಲಿಯಾ (255 ರೇಟಿಂಗ್​) ಕ್ರಮವಾಗಿ 2 ಮತ್ತು 3ನೇ ಸ್ಥಾನದಲ್ಲಿದೆ. ಇದು ಮಾತ್ರವಲ್ಲದೆ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಅಂಕಪಟ್ಟಿಯಲ್ಲಿಯೂ ಭಾರತವೇ ನಂ.1 ಸ್ಥಾನ ಪಡೆದಿದೆ.


ಇಂಗ್ಲೆಂಡ್(IND vs ENG)​ ವಿರುದ್ಧದ ಅಂತಿಮ ಟೆಸ್ಟ್(India vs England 5th Test)​ ಪಂದ್ಯದಲ್ಲಿ ಆತಿಥೇಯ ಭಾರತ ಇನಿಂಗ್ಸ್​ ಮತ್ತು 64 ರನ್​ಗಳ ಅಂತರದ ಗೆಲುವು ಸಾಧಿಸುವ ಮೂಲಕ ಸರಣಿಯನ್ನು 4-1 ರೊಂದಿಗೆ ಮುಕ್ತಾಯಗೊಳಿಸಿತು. ಭಾರತ ಈ ಗೆಲುವಿನ ಮೂಲಕ 112 ವರ್ಷದಲ್ಲೇ ಮೊದಲ ಪಂದ್ಯದ ಸೋಲಿನ ಬಳಿಕ 5 ಪಂದ್ಯದ ಸರಣಿಯಲ್ಲಿ 4-1 ರಿಂದ ಗೆದ್ದ ಏಕೈಕ ತಂಡ ಎಂಬ ಇತಿಹಾಸ ನಿರ್ಮಿಸಿತು. 5 ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಮೊದಲ ಪಂದ್ಯ ಸೋತು ಬಳಿಕ ಸರಣಿಯನ್ನು 4-1ರಿಂದ ಗೆದ್ದಿದ್ದು ಈ ವರೆಗೆ ಕೇವಲ 2 ತಂಡಗಳು ಮಾತ್ರ. 1897-98 ಮತ್ತು 1901-02ರಲ್ಲಿ ಇಂಗ್ಲೆಂಡ್‌ ವಿರುದ್ಧ ಆಸ್ಟ್ರೇಲಿಯಾ, 1912ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್‌ ಈ ಸಾಧನೆ ಮಾಡಿತ್ತು. ಇದೀಗ ಈ ಸಾಧನೆ ಕೂಡ ಈ ಸಾಧನೆ ಮಾಡಿದೆ.

Exit mobile version