Site icon Vistara News

IND vs AUS 1st T20: ಟಾಸ್​ ಗೆದ್ದ ಭಾರತ ತಂಡದಿಂದ ಬೌಲಿಂಗ್​ ಆಯ್ಕೆ

India vs Australia, 1st T20I

ವಿಶಾಖಪಟ್ಟಣ: 5 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ(India vs Australia, 1st T20I) ಟಾಸ್​ ಗೆದ್ದ ಭಾರತ ತಂಡದ ನಾಯಕ ಸೂರ್ಯಕುಮಾರ್​ ಯಾದವ್​ ಅವರು ಬೌಲಿಂಗ್​ ಆಯ್ದುಕೊಂಡಿದ್ದಾರೆ. ಆಸ್ಟ್ರೇಲಿಯಾ ಬ್ಯಾಟಿಂಗ್​ ಆಹ್ವಾನ ಪಡೆದಿದೆ. ಪಂದ್ಯ ವಿಶಾಖಪಟ್ಟಣದ ವೈ.ಎಸ್.ರಾಜಶೇಖರ ರೆಡ್ಡಿ ಮೈದಾನದಲ್ಲಿ ನಡೆಯುತ್ತಿದೆ.

ಮುಖಾಮುಖಿ

ಭಾರತ ಮತ್ತು ಆಸ್ಟ್ರೇಲಿಯಾ ಇದುವರೆಗೆ ಒಟ್ಟು 26 ಟಿ20 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ಭಾರತ 15 ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ, ಆಸ್ಟ್ರೇಲಿಯಾ 10 ಪಂದ್ಯಗಳಲ್ಲಿ ಜಯ ಕಂಡಿದೆ. ಒಂದು ಪಂದ್ಯ ರದ್ದು ಗೊಂಡಿದೆ. ತವರಿನಲ್ಲಿ ಭಾರತ 6 ಪಂದ್ಯ ಗೆದ್ದಿದೆ. ಈ ಲೆಕ್ಕಾಚಾರದಲ್ಲಿ ಭಾರತ ಬಲಿಷ್ಠ ಎನ್ನಬಹುದು. ಆದರೆ ಈ ಬಾರಿ ತಂಡದಲ್ಲಿ ಅನುಭವಿ ಆಟಗಾರರು ಕಾಣಿಸಿಕೊಂಡಿಲ್ಲ. ಹೀಗಾಗಿ ಐಪಿಎಲ್​ ಆಡಿದ ಯುವ ಆಟಗಾರು ಹಾಲಿ ವಿಶ್ವ ಚಾಂಪಿಯನ್​ ಆಸೀಸ್​ ಸವಾಲು ಮೆಟ್ಟಿ ನಿಲ್ಲಬಲ್ಲರೇ ಎನ್ನುವುದು ಸರಣಿಯ ಕುತೂಹಲ.

ಪಿಚ್​ ರಿಪೋರ್ಟ್​

ವಿಶಾಖಪಟ್ಟಣದ ವೈ.ಎಸ್.ರಾಜಶೇಖರ ರೆಡ್ಡಿ ಮೈದಾನದಲ್ಲಿ ಇದುವರೆಗೆ ಕೇವಲ ಮೂರು ಟಿ20 ಅಂತಾರಾಷ್ಟ್ರೀಯ ಪಂದ್ಯಗಳು ನಡೆದಿದೆ. ವಿಶೇಷವೆಂದರೆ ಎರಡೂ ಪಂದ್ಯಗಳಲ್ಲಿ ಮೊದಲು ಬೌಲಿಂಗ್ ಮಾಡಿದ ತಂಡ ಗೆಲುವು ಸಾಧಿಸಿದೆ. ಕಡಿಮೆ ಮೊತ್ತಕ್ಕೆ ಹೆಸರಾದ ಈ ಕ್ರೀಡಾಂಗಣದಲ್ಲಿ ಬೌಲರ್​ಗಳೇ ಪಾರುಪತ್ಯ ಸಾಧಿಸಿದ್ದಾರೆ. ಇಲ್ಲಿನ ಮೊದಲ ಇನ್ನಿಂಗ್ಸ್ ಸರಾಸರಿ ಮೊತ್ತು ಕೇವಲ 104 ರನ್. ಈ ಮೈದಾನದಲ್ಲಿ ದಾಖಲಾದ ಗರಿಷ್ಠ ಮೊತ್ತ 127 ರನ್.

2019ರಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ವಿರುದ್ಧ ಇಲ್ಲಿ ಮೊದಲ ಟಿ20 ಪಂದ್ಯ ನಡೆದಿತ್ತು. ಮೊದಲು ಬ್ಯಾಟಿಂಗ್ ನಡೆಸಿದ್ದ ಭಾರತ ಏಳು ವಿಕೆಟ್ ನಷ್ಟಕ್ಕೆ 126 ರನ್ ಗಳಿಸಿದರೆ, ಚೇಸ್ ಮಾಡಿದ್ದ ಆಸೀಸ್ ಏಳು ವಿಕೆಟ್ ಕಳೆದುಕೊಂಡು ಗುರಿ ತಲುಪಿತ್ತು. 2016ರಲ್ಲಿ ಭಾರತ ತಂಡ ಶ್ರೀಲಂಕಾ ವಿರುದ್ಧ ಟಿ20 ಪಂದ್ಯವಾಡಿತ್ತು. ಆ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಲಂಕಾ ಕೇವಲ 82 ರನ್ ಗೆ ಆಲೌಟಾಗಿತ್ತು. ಭಾರತ ತಂಡ ಈ ಸುಲಭ ಗುರಿಯನ್ನು 13.5 ಓವರ್ ಗಳಲ್ಲಿ ತಲುಪಿತ್ತು.

ಭಾರತ ಆಡುವ ಬಳಗ

ಭಾರತ: ಋತುರಾಜ್ ಗಾಯಕ್ವಾಡ್​, ಯಶಸ್ವಿ ಜೈಸ್ವಾಲ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್(ನಾಯಕ), ತಿಲಕ್ ವರ್ಮಾ, ರಿಂಕು ಸಿಂಗ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್, ಪ್ರಸಿದ್ಧ್ ಕೃಷ್ಣ.

Exit mobile version